“ಕನಸಾಗಿಯೇ ಉಳಿದ ಗಾಂಧೀಜಿ ಅವರ ಸರ್ವೋದಯ ಕಲ್ಪನೆ’
Team Udayavani, Jan 31, 2017, 12:20 PM IST
ಮೈಸೂರು: ದೇಶಕ್ಕೆ ಸ್ವಾತಂತ್ರ್ಯ ದೊರೆತು ಹಲವು ವರ್ಷಗಳಾದರೂ ಗಾಂಧೀಜಿ ಅವರ ಸರ್ವೋದಯ ಕಲ್ಪನೆ ಕನಸಾಗಿಯೇ ಉಳಿದಿದ್ದು, ಇದನ್ನು ನನಸಾಗಿಸುವ ನಿಟ್ಟಿನಲ್ಲಿ ದೇಶದ ಪ್ರತಿಯೊಬ್ಬರು ಒಂದಾಗಬೇಕಿದೆ ಎಂದು ಸ್ವಾತಂತ್ರ್ಯ ಹೋರಾಟಗಾರ ಡಾ.ಎಚ್.ಎಸ್.ದೊರೆಸ್ವಾಮಿ ಅಭಿಪ್ರಾಯಪಟ್ಟರು.
ಮೈಸೂರು ವಿಶ್ವವಿದ್ಯಾನಿಲಯ, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಆವನ ಹಾಗೂ ಹಾರ್ಟ್‌ಫುಲ್‌ನೆಸ್ ಇನ್‌ಸ್ಟಿಟ್ಯೂಟ್ ವತಿಯಿಂದ ಮಾನಸ ಗಂಗೋತ್ರಿಯ ಗಾಂಧಿ ಭವನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 69ನೇ ಸರ್ವೋದಯ ದಿನಾಚರಣೆಯಲ್ಲಿ ಮಾತನಾಡಿದರು.
ದೇಶದಲ್ಲಿರುವ ಬಡತನವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಮಹಾತ್ಮಾ ಗಾಂಧೀಜಿ ಸಾಕಷ್ಟು ಹೋರಾಟ ನಡೆಸಿದ್ದರೂ, ದೇಶ ದಲ್ಲಿರುವ ಬಡತನ ಇಂದಿಗೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಇದರಿಂದ ದೇಶ ದಲ್ಲಿರುವ ಬಡವರು ಬಡವರಾಗಿಯೇ ಉಳಿಯುತ್ತಿದ್ದು, ಶ್ರೀಮಂತರು ಮತ್ತಷ್ಟು ಶ್ರೀಮಂತರಾಗುತ್ತಿದ್ದಾರೆ.
ಇನ್ನೂ ಜನರಿಂದ ಮತಪಡೆದು ಆಯ್ಕೆಯಾಗುವ ಜನಪ್ರತಿನಿಧಿಗಳು ಕೇವಲ ತಮ್ಮ ಪಕ್ಷಗಳಿಗೆ ನಿಷ್ಟರಾಗುವ ಮೂಲಕ ರಾಜಕೀಯದಲ್ಲಿ ಉನ್ನತಸ್ಥಾನ ಪಡೆಯುತ್ತಿದ್ದಾರೆ. ಈ ಕಾರಣದಿಂದ ಗಾಂಧೀಜಿ ಅವರ ಸರ್ವೋದಯ ಕನಸು ನನಸಾಗದೆ ಹಾಗೇ ಉಳಿದಿದೆ ಎಂದರು.ರಾಜಕೀಯ ನಾಯಕರ ವೇತನ ಮಾತ್ರ ಏರಿಕೆಯಾಗುತ್ತಿದ್ದು, ಆದರೆ ರಾಜಕಾರಿಣಿಗಳಿಗೆ ದೇಶದ ಬಡತನವನ್ನು ನಿವಾರಿಸುವ ಬಗ್ಗೆ ಚಿಂತೆಯಿಲ್ಲ.
ಇಂದಿನ ರಾಜಕಾರಣಿಗಳು ಮೊದಲು ಪಕ್ಷ ನಂತರ ವೈಯಕ್ತಿಕ ಹಿತಾಸಕ್ತಿಯ ಮೇಲೆ ಹೆಚ್ಚಿನ ಕಾಳಜಿ ಇದೆ. ನಮ್ಮ ಅನುಕೂಲಕ್ಕಾಗಿ ಮಾಡಿಕೊಂಡ ಹಣ ಪ್ರಸ್ತುತ ಸಂದರ್ಭದಲ್ಲಿ ನಮ್ಮನ್ನು ಆಳುತ್ತಿದ್ದು, ಹಣದ ಪ್ರತಿಷ್ಠೆ ಅಂತ್ಯವಾಗಬೇಕು. ಮತ್ತೂಂದೆಡೆ ದೇಶದಲ್ಲಿ ಅಸಮಾನತೆ, ದುರ್ನಡತೆ, ಜಾತಿ ಪದ್ಧತಿ, ನಿರುದ್ಯೋಗ ಹಾಗೂ ಮೇಲು-ಕೀಳು ಎಂಬ ಬೇಧ ಸಮಾಜದ ಸ್ವಾಸ್ಥ ಹಾಳು ಮಾಡುತ್ತಿದೆ. ಆದ್ದರಿಂದ ಮರುಳು ದಿಬ್ಬಗಳಂತಿರುವ ದೇಶದ ಜನತೆ ಜೇಡಿ ಮಣ್ಣಿನಂತೆ ಒಗ್ಗೂಡಿದಾಗ ಮಾತ್ರ ಸಮಾಜದಲ್ಲಿನ ಈ ಎಲ್ಲಾ ಕಂದಕಗಳು ಮುಚ್ಚಿ ಹೋಗಲಿದೆ ಎಂದು ಹೇಳಿದರು.
ದೇಶದಲ್ಲಿರುವ ಕಪ್ಪು ಹಣವನ್ನು ಹೊರತರುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದ ನೋಟ್‌ಬ್ಯಾಣ್ ನಿರೀಕ್ಷಿತ ಪ್ರಮಾಣದಲ್ಲಿ ಯಶಸ್ವಿಯಾಗಲಿಲ್ಲ. ಕೇಂದ್ರ ಸರ್ಕಾರದ ನೋಟ್‌ಬ್ಯಾನ್ ನಿರ್ಧಾರದಿಂದ ಜನರಿಗೆ ತೊಂದರೆಯಾಗಿದ್ದು, ಸರಿಯಾದ ಮುನ್ನೆಚ್ಚರಿಕೆ ಇಲ್ಲದೆ ಕೈಗೊಂಡ ಈ ತೀರ್ಮಾನದಿಂದಾಗಿ ಬ್ಯಾಂಕ್‌ಗಳು, ಸೊಸೈಟಿಗಳು ಭ್ರಷ್ಟರ ಕೂಟದಲ್ಲಿ ಸೇರಿಕೊಂಡು ಮತ್ತಷ್ಟು ಕಪ್ಪು ಹಣವನ್ನು ಸಂಗ್ರಹಿಸಲು ಅವಕಾಶ ಕಲ್ಪಿಸಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾ ನಿಲಯದ ಪ್ರಭಾರ ಕುಲಪತಿ ಪ್ರೊ. ಯಶವಂತ ಡೋಂಗ್ರೆ, ಕುಲಸಚಿವ ಪ್ರೊ.ಆರ್. ರಾಜಣ್ಣ, ಪರೀûಾಂಗ ಕುಲಸಚಿವ ಪ್ರೊ.ಜೆ. ಸೋಮಶೇಖರ್, ಗಾಂಧಿ ಭವನ ನಿರ್ದೇಶಕ ಪ್ರೊ. ಎಸ್. ಶಿವರಾಜಪ್ಪ, ಹಾರ್ಟ್‌ಫುಲ್‌ನೆಸ್ ಇನ್ಸ್ಟಿಟ್ಯೂಟ್ ಸಂಯೋಜನಾಧಿಕಾರಿ ಕೆ. ಮಧುಸೂದನ್ ಹಾಜರಿದ್ದರು.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅನ್ನವನ್ನೇ ಮತವನ್ನಾಗಿ ಪರಿವರ್ತಿಸಿಕೊಳ್ಳುವ ಮೂಲಕ ಜನರನ್ನು ಸೋಮಾರಿ ಹಾಗೂ ಭಿಕ್ಷುಕರನ್ನಾಗಿ ಮಾಡುತ್ತಿದೆ. ಸರ್ಕಾರವು ಅನ್ನಭಾಗ್ಯ ಯೋಜನೆ ನೀಡುವ ಬದಲು ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸಿದರೆ ನಮ್ಮಲ್ಲಿರುವ ನಿರುದ್ಯೋಗ ಸಮಸ್ಯೆಯನ್ನು ನಿರ್ಮೂಲನೆ ಮಾಡಬಹುದಾಗಿದೆ.
-ಡಾ. ಎಚ್.ಎಸ್. ದೊರೆಸ್ವಾಮಿ, ಸ್ವಾತಂತ್ರ್ಯ ಹೋರಾಟಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.