ಗಣೇಶ ಪ್ರತಿಷ್ಠಾಪನೆ: ಪೊಲೀಸರ ಕಟ್ಟಾಜ್ಞೆ
Team Udayavani, Aug 22, 2017, 12:44 PM IST
ಮೈಸೂರು: ಪೊಲೀಸರ ಸೂಚನೆಗಳನ್ನು ಪಾಲಿಸುವ ಮೂಲಕ ಶಾಂತಿಯುತವಾಗಿ ಗೌರಿ-ಗಣೇಶ ಹಬ್ಬ ಆಚರಿಸುವಂತೆ ನಗರ ಪೊಲೀಸ್ ಆಯುಕ್ತರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಗಣಪತಿ ಪ್ರತಿಷ್ಠಾಪನೆ ಮಾಡುವವರು ಬಲವಂತವಾಗಿ ಯಾವುದೇ ರೀತಿಯ ಚಂದಾ ವಸೂಲಿ ಮಾಡುವುದನ್ನು ನಿಷೇಧಿಸಲಾಗಿದೆ.
ಈ ರೀತಿ ಮಾಡುವುದು ವಸೂಲಿ ಮಾಡುವವರ ವಿರುದ್ಧ ಕಲಂ 384 ಐಪಿಸಿ ಪ್ರಕಾರ ಕ್ರಮಕೈಗೊಳ್ಳಲಾಗುವುದು. ಈ ಅಪರಾಧಕ್ಕೆ 3 ವರ್ಷಗಳ ಸಜೆ ಅಥವಾ ದಂಡ ಅಥವಾ ಸಜೆ ಹಾಗೂ ದಂಡ ಎರಡನ್ನೂ ವಿಧಿಸಬಹುದಾಗಿರುತ್ತೆ. ಗಣಪತಿ ಪ್ರತಿಷ್ಠಾಪನೆ ಮಾಡುವವರು/ವ್ಯವಸ್ಥಾಪಕರು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಅರ್ಜಿ ಪಡೆದುಕೊಂಡು ಅದರಲ್ಲಿ ತಿಳಿಸಿರುವ ಸೂಚನೆಗಳನ್ನು ಪೂರೈಸಿ ಆ.28ರ ಸಂಜೆ 4 ಗಂಟೆ ಒಳಗಾಗಿ ಸಂಬಂಧಿಸಿದ ಠಾಣೆಗೆ ಅರ್ಜಿಯನ್ನು ನೀಡಿ ಪೂರ್ವಾನುಮತಿ ಪಡೆಯುವುದು.
ಗಣಪತಿ ಪ್ರತಿಷ್ಠಾಪನೆ ಮಾಡುವ ಸ್ಥಳದ ಮಾಲಿಕರ ಒಪ್ಪಿಗೆ ಪತ್ರ ಪಡೆಯುವುದು. ಸಾರ್ವಜನಿಕ ಸ್ಥಳವಾಗಿದ್ದಲ್ಲಿ ನಗರಪಾಲಿಕೆ/ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪತ್ರ ಪಡೆಯುವುದು. ವಿದ್ಯುಚ್ಚಕ್ತಿ ಅಳವಡಿಸುವ ಬಗ್ಗೆ ಚೆಸ್ಕಾಂ ನಿಂದ ಅನುಮತಿ ಪಡೆದಿರಬೇಕು (ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುವಂತಿಲ್ಲ). ಅಗ್ನಿಶಾಮಕ ದಳದಿಂದ ಬೆಂಕಿ ಅನಾಹುತದ ಸುರಕ್ಷತೆ ಬಗ್ಗೆ ನಿರಾಪೇಕ್ಷಣಾ ಪತ್ರ ಪಡೆಯುವುದು. ಗಣಪತಿ ಪ್ರತಿಷ್ಠಾಪನೆ ದಿನಾಂಕ, ಸ್ಥಳ, ಸಾಂಸ್ಕೃತಿಕ ಕಾರ್ಯಕ್ರಮಗಳ ವಿವರ, ವಿಸರ್ಜನೆ ದಿನಾಂಕ, ಸ್ಥಳ ಮತ್ತು ಮೆರವಣಿಗೆ ಮಾರ್ಗ ಹಾಗೂ ಇತರೆ ವಿಷಯಗಳ ಬಗ್ಗೆ ಮಾಹಿತಿ ಪೂರ್ವಾನುಮತಿ ಪತ್ರದಲ್ಲಿ ನೀಡುವುದು.
ಧ್ವನಿ ವರ್ಧಕ ಬಳಸುವವರು ಕಡ್ಡಾಯವಾಗಿ ಸಂಬಂಧಪಟ್ಟ ಠಾಣೆ ಇನ್ಸ್‌ಪೆಕ್ಟರ್‌ರಿಂದ ಅನುಮತಿ ಪಡೆಯುವುದು. ಕೋರ್ಟ್ ಆದೇಶದಂತೆ ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಕಡಿಮೆ ಧ್ವನಿಯಲ್ಲಿ ಧ್ವನಿವರ್ಧಕ ಬಳಸುವುದು. ಅಶ್ಲೀಲ ಸಾಹಿತ್ಯ ಉಳ್ಳ ಗೀತೆ ಮತ್ತು ಇತರೆ ಧರ್ಮೀಯರ ಭಾವನೆಗಳಿಗೆ ಧಕ್ಕೆಯಾಗುವಂತಹ ಗೀತೆ ಪ್ರಸಾರ ಮಾಡಬಾರದು. ಮನರಂಜನಾ ಕಾರ್ಯಕ್ರಮಗಳನ್ನು ಕಡ್ಡಾಯವಾಗಿ ರಾತ್ರಿ 10 ಗಂಟೆಯೊಳಗೆ ಮುಕ್ತಾಯ ಮಾಡುವುದು.
ಗಣಪತಿ ವಿಸರ್ಜನೆ: ಗಣಪತಿ ವಿಸರ್ಜನೆಯನ್ನು ಕಡ್ಡಾಯವಾಗಿ ಸೂರ್ಯಾಸ್ತಕ್ಕಿಂತ ಮುಂಚೆ ಮಾಡುವುದು. ಈ ವೇಳೆ ಮದಪಾನ ಮಾಡಿ ಅಸಭ್ಯ ವರ್ತನೆ ತೋರುವ ಹಾಗಿಲ್ಲ. ಗಣಪತಿ ವಿಸರ್ಜನೆಯನ್ನು ಬಾವಿ, ಕೆರೆ, ನದಿಯಲ್ಲಿ ಮಾಡದೇ ಬಕೆಟ್ ಗಳಲ್ಲಿ/ಮೈಸೂರು ಮಹಾನಗರ ಪಾಲಿಕೆ ನಿಗದಿಪಡಿಸುವ ಸ್ಥಳಗಳಲ್ಲಿ ವಿಸರ್ಜನೆ ಮಾಡಬೇಕು. ಈ ಸಂಬಂಧಪಟ್ಟ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್‌ರಿಂದ ಅನುಮತಿಗೊಂಡ ಮಾರ್ಗದಲ್ಲಿಯೇ ಮೆರವಣಿಗೆ ಸಾಗುವುದು. ಮಾರ್ಗಮಧ್ಯ ಅನ್ಯಧರ್ಮೀಯರ ಪೂಜಾ/ಪ್ರಾರ್ಥನಾ ಸ್ಥಳಗಳಿಗೆ ಮತ್ತು ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳುವುದು.
ಗಣಪತಿ ವಿಸರ್ಜನೆಗೆ ಅನುಮತಿ ಪಡೆಯಿರಿ
ಪಶ್ಚಿಮ ವಾಹಿನಿಯಲ್ಲಿ ಗಣಪತಿ ವಿಸರ್ಜನೆ ಮಾಡುವವರು ವಿಸರ್ಜನೆ ಮಾಡುವ ದಿನಾಂಕ ಮತ್ತು ಸಮಯದೊಂದಿಗೆ ಮಾಹಿತಿಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪೊಲೀಸ್ ಠಾಣೆಗೆ ನೀಡಿ ಮುಂಚಿತವಾಗಿಯೇ ಅನುಮತಿ ಪಡೆದುಕೊಳ್ಳುವುದು. ಮೇಲ್ಕಂಡ ನಿಬಂಧನೆಗಳನ್ನು ಉಲ್ಲಂ ಸುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಕೂಡಲೇ ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಅಥವಾ ಪೊಲೀಸ್ ಕಂಟ್ರೋಲ್ ರೂಂ.100, 2418139, 2418339 ಕರೆ ಮಾಡಿ ಮಾಹಿತಿ ನೀಡುವಂತೆ ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Google Map: ಗೂಗಲ್ ಮ್ಯಾಪ್ ನಂಬಿ ಗಡಿ ದಾಟಿದ ಪೊಲೀಸರನ್ನೇ ಹಿಡಿದು ಹಾಕಿದ ಗ್ರಾಮಸ್ಥರು
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.