ಕೋವಿಡ್ ಆಸ್ಪತ್ರೆ ತೆರೆಯಲು ಸಿದ್ಧರಾಗಿ
Team Udayavani, Aug 5, 2020, 10:17 AM IST
ಕೆ.ಆರ್.ನಗರ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 3ನೇ ಕೋವಿಡ್ ಆಸ್ಪತ್ರೆಯನ್ನು ಪ್ರಾರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಚಿದಂಬರ್ ಹೇಳಿದರು.
ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಕೋವಿಡ್ ಪರೀಕ್ಷಾ ಕೇಂದ್ರಗಳನ್ನು ಪರೀಕ್ಷಿಸಿದ ನಂತರ ತಾಲೂಕು ಆರೋಗ್ಯಾಧಿಕಾರಿ ಡಾ.ಕೆ. ಆರ್.ಮಹೇಂದ್ರಪ್ಪ ಅವರಿಗೆ ನಿರ್ದೇಶನ ನೀಡಿದರು.
ಸೂಕ್ತ ಚಿಕಿತ್ಸೆ ನೀಡಲು ಕ್ರಮ: ಈಗಾಗಲೇ ಪಟ್ಟಣದ ಹೊರ ವಲಯದಲ್ಲಿರುವ ಕಾಳೇನಹಳ್ಳಿ ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಪ್ರಾರಂಭಿಸಿರುವ 60 ಹಾಸಿಗೆಗಳ ಕೋವಿಡ್ ಆಸ್ಪತ್ರೆಯಲ್ಲಿ 25 ಸೋಂಕಿತರನ್ನು ದಾಖಲು ಮಾಡಿಕೊಳ್ಳಲಾಗಿದೆ. ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಂಭವವಿರುವುದರಿಂದ ಅವರಿಗೆ ಸೂಕ್ತವಾದ ಚಿಕಿತ್ಸೆ ನೀಡಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ನಾಗೇಂದ್ರ, ವೈದ್ಯ ಡಾ.ಕಮಲೇಶ್, ಹಿರಿಯ ಆರೋಗ್ಯ ಸಹಾಯಕ ಕೆ.ವಿ.ರಮೇಶ್, ಆರೋಗ್ಯ ಶಿಕ್ಷಣಾಧಿಕಾರಿ ಸಿ.ಎಂ.ರೇಖಾ, ಸಿಬ್ಬಂದಿ ರೇಖಾ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.