ಹೆಣ್ಣು ಮಕ್ಕಳು ಶಿಕ್ಷಣವಂತರಾಗಲೇಬೇಕು: ಸ್ವಾಮೀಜಿ


Team Udayavani, Oct 23, 2022, 3:12 PM IST

tdy-11

ಕೆ.ಆರ್‌.ನಗರ: ಹೆಣ್ಣು ಮಕ್ಕಳು ಹಿಂದೆ ಬೇರೆಯವರ ಆಶ್ರಯದಲ್ಲಿ ಬದುಕುತ್ತಿದ್ದರು, ಈಗ ಎಲ್ಲರೂ ಹೆಣ್ಣು ಮಕ್ಕಳ ಆಶ್ರಯದಲ್ಲಿ ಜೀವನ ನಿರ್ವಹಣೆ ಮಾಡುವಂತಾಗಿದೆ ಎಂದು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಬಸವೇಶ್ವರ ಬಡಾವಣೆಯಲ್ಲಿ ವೀರಶೈವ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಚಾರಿಟ ಬಲ್‌ ಟ್ರಸ್ಟ್‌ಯಿಂದ ನಿರ್ಮಾಣ ಮಾಡಲಾಗಿ ರುವ ವಿದ್ಯಾರ್ಥಿನಿಲಯದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸುಸಂಸ್ಕೃತ ಸಮಾಜ ನಿರ್ಮಾಣ ಮಾಡಲು ಹೆಣ್ಣು ಮಕ್ಕಳು ಶಿಕ್ಷಣ ಪಡೆಯಬೇಕು ಎಂದರು.

ತಾಯಿಯಾದವರು ತನ್ನ ಮಗ ಸಮಾಜ ಘಾತಕನಾಗಿದ್ದರೂ ಸಹ ಮುಂದೊಂದು ದಿನ ಸಮಾಜದ ಸುಧಾರಕನಾಗಲಿದ್ದಾನೆ ಎಂಬ ಆಸೆಯಿಂದ ಅವನನ್ನು ಬೆಳೆಸುತ್ತಾರೆ. ಆದ್ದ ರಿಂದ ಹೆಣ್ಣು ಮಕ್ಕಳು ಶಿಕ್ಷಣವಂತರಾಗಲೇಬೇಕು. ಅದಕ್ಕಾಗಿ ವಿದ್ಯಾರ್ಥಿ ನಿಲಯಗಳ ಅವಶ್ಯಕ ವಿದ್ದು, ಈ ನಿಲಯ ನಿರ್ಮಾಣ ಮಾಡಲು ಶ್ರಮಿಸಿದಂತಹ ಟ್ರಸ್ಟ್‌ ಪದಾಧಿ ಕಾರಿಗಳಿಗೆ ಅಭಿನಂಲ್ಲಿಸಲಾಗುವುದು ಎಂದು ತಿಳಿಸಿದರು.

ವಿಧಾನ ಪರಿಷತ್‌ ಸದಸ್ಯ ಅಡಗೂರು ಎಚ್‌. ವಿಶ್ವನಾಥ್‌ ಮಾತನಾಡಿ, ಅಕ್ಷರ, ಆರೋಗ್ಯ ಮತ್ತು ಅನ್ನಕ್ಕೆ ಕೊರತೆ ಇಲ್ಲದ ದೇಶ ಅಭಿವೃದ್ಧಿ ಕಾಣಲು ಸಾಧ್ಯ. ಈ ಕೆಲಸವನ್ನು ರಾಜ್ಯದಲ್ಲಿರುವ ಮಠ ಮಾನ್ಯಗಳು ಮಾಡು ತ್ತಿದ್ದು, ಅವರುಗಳಿಗೆ ಸರ್ಕಾರ ಸೇರಿದಂತೆ ಎಲ್ಲರೂ ಸಹಕಾರ ನೀಡಬೇಕು ಎಂದು ಕೋರಿದ ವಿಧಾನ ಪರಿಷತ್‌ ಸದಸ್ಯರು ನಿಲ ಯದ ಮುಂದುವರೆದ ಕಾಮಗಾರಿಗೆ ಅನು ದಾನ ನೀಡುವುದಾಗಿ ಭರವಸೆ ನೀಡಿದರು.

ಶಾಸಕ ಸಾ.ರಾ.ಮಹೇಶ್‌ ಮಾತನಾಡಿ, ನಿಲಯದ ನಿರ್ಮಾಣಕ್ಕೆ 10 ಲಕ್ಷ ರೂ. ಅನುದಾನ ನೀಡಿರುವುದರ ಜತೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗಿದ್ದು, ಮುಂದು ವರೆದ ಕಾಮಗಾರಿಗೂ ಅನುದಾನ ನೀಡ ಲಾಗುತ್ತದೆ ಎಂದು ಭರವಸೆ ನೀಡಿದರಲ್ಲದೆ ಸಮಾಜದವರು ಬಸವ ಭವನ ನಿರ್ಮಾಣ ಮಾಡಲು ಮುಂದಾಗಬೇಕು. ಅದಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುತ್ತದೆ ಎಂದರು.

ಬೆಟ್ಟದಪುರದ ಮಠದ ಚನ್ನಬಸವದೇಶಿ ಕೇಂದ್ರಸ್ವಾಮೀಜಿ, ಮಾದಳ್ಳಿ ಮಠದ ಸಾಂಬ ಸದಾಶಿವಸ್ವಾಮೀಜಿ, ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜಸ್ವಾಮೀಜಿ, ಅರಕೆರೆ ಮಠದ ಸಿದ್ದೇಶ್ವರಸ್ವಾಮೀಜಿ, ಲಾಲನಹಳ್ಳಿ ಗುರುಮಲ್ಲೇಶ್ವರ ಮಠದ ಶರಣೆ ಜಯದೇತಾಯಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಎಸ್‌. ತೋಂಟದಾರ್ಯ, ಗುಬ್ಬಿ ತೋಟಪ್ಪನವರ ಧರ್ಮ ಸಂಸ್ಥೆಯ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಡಿಜಿಪಿ ಎಲ್‌.ರೇವಣ್ಣಸಿದ್ದಯ್ಯ, ಪುರಸಭೆ ಸದಸ್ಯ ಕೆ.ಬಿ.ವೀಣಾವೃಷಬೇಂದ್ರ, ಬಿಸಿಎಂ ಇಲಾಖೆಯ ಅಧಿಕಾರಿಗಳಾದ ಮಹೇಶ್‌, ಬಿಂದ್ಯಾ, ವೀರಶೈವ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಚಾರಿಟಬಲ್‌ ಟ್ರಸ್ಟ್‌ನ ಅಧ್ಯಕ್ಷ ವೈ.ಎನ್‌.ಚಂದ್ರಶೇಖರ್‌, ಉಪಾಧ್ಯಕ್ಷರಾದ ಎ.ಎಸ್‌.ಚನ್ನಬಸಪ್ಪ, ಕೆ.ಸಿ.ಲೋಕೇಶ್‌, ಕಾರ್ಯದರ್ಶಿ ಕೆ.ಪಿ.ಪ್ರಭುಶಂಕರ್‌, ಖಜಾಂಚಿ ವೈ.ಎಸ್‌.ಸುರೇಶ್‌, ನಿರ್ದೇಶಕರಾದ ಆರ್‌.ಬಿ.ನಾಗರಾಜು, ಹೆಚ್‌.ಸಿ.ಮಹದೇವಪ್ಪ, ಎನ್‌.ಎಸ್‌.ಚನ್ನಪ್ಪ, ಚಂದ್ರಶೇಖರ್‌ ಚೇತನ್‌ ನಂಜುಂಡಸ್ವಾಮಿ ಇದ್ದರು

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.