ಹೆಣ್ಣು ಮಕ್ಕಳಿಗೂ ಸಮಾನ ಅವಕಾಶಗಳು ಸಿಗಬೇಕು
Team Udayavani, Feb 2, 2020, 3:00 AM IST
ಮೈಸೂರು: ಸಮಾಜದಲ್ಲಿ ಹೆಣ್ಣು ಮಕ್ಕಳಿಗೂ ಪುರುಷರಷ್ಟೇ ಸಮಾನವಾದ ಅವಕಾಶಗಳು ಸಿಗಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಜಯನಗರ 3ನೇ ಹಂತದಲ್ಲಿರುವ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಸಿದ್ದರಾಮಯ್ಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ನಡೆದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಸೌಲಭ್ಯವುಳ್ಳ ವಿದ್ಯಾರ್ಥಿನಿಲಯಗಳು ಬೇಕು: ಈಗಲೂ ಕೂಡ ಸಮಾಜದಲ್ಲಿ ಲಿಂಗ ತಾರತಮ್ಯ ನಡೆಯುತ್ತಿದ್ದು, ಇದರ ನಿವಾರಣೆಗೆ ಸರ್ಕಾರಗಳು ಪ್ರಯತ್ನ ನಡೆಸುತ್ತಿವೆ. ಹೆಣ್ಣು ಮಕ್ಕಳು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕಾದರೆ ಮೈಸೂರಿನಂತಹ ನಗರದಲ್ಲಿ ಉತ್ತಮ ಸೌಲಭ್ಯವುಳ್ಳ ವಿದ್ಯಾರ್ಥಿನಿಲಯಗಳು ಬೇಕಾಗಿವೆ ಎಂದರು.
ಅಕ್ಕ ಮಹಾದೇವಿ ಹೆಣ್ಣು ಮಕ್ಕಳಿಗೆ ಸ್ಫೂರ್ತಿ: ಇತ್ತೀಚೆಗೆ ಹೆಣ್ಣು ಮಕ್ಕಳು ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿ ಕೆಲಸಮಾಡುತ್ತಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ ಫಲಿತಾಂಶದಲ್ಲಿಯೂ ಮುಂದೆ ಇದ್ದಾರೆ. ಹೆಣ್ಣು ಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಮಾರ್ಗದರ್ಶನ ಇರಬೇಕು. ಒಳ್ಳೆಯ ವಾತಾವರಣದಲ್ಲಿ ಗುಣಮಟ್ಟದ ಶಿಕ್ಷಣ ಸಿಕ್ಕರೆ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತದೆ. ಪುರುಷ ಪ್ರಧಾನ ಸಮಾಜದ ವಿರುದ್ಧ ಹೋರಾಡಿದ ಅಕ್ಕ ಮಹಾದೇವಿ ಹೆಣ್ಣುಮಕ್ಕಳಿಗೆ ಸ್ಪೂರ್ತಿಯಾಗಿದ್ದಾರೆ. ಕೀಳರಿಮೆ ಬಿಟ್ಟು ಗುರಿ ಶ್ರದ್ಧೆ ಪ್ರಯತ್ನದಿಂದ ಮೇಲೆ ಬಂದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಿರಿ ಎಂದು ಕರೆ ನೀಡಿದರು.
ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಿ: ಮೈಸೂರು ನಗರ ಶಿಕ್ಷಣ ಕೇಂದ್ರವಾಗಿದ್ದು, ಎಲ್ಲರೂ ವಿದ್ಯಾವಂತರಾಗಿ ಉದ್ಯೋಗಕ್ಕೆ ಸೇರಿದ ಮೇಲೆ ಸಮಾಜಕ್ಕೆ ಸಾಧ್ಯವಾದಷ್ಟು ಸಹಾಯಮಾಡಿ, ಸಮಾಜ ನನಗೇನು ಮಾಡಿತು ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎನ್ನುವುದನ್ನು ಪ್ರತಿಯೊಬ್ಬರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು. ಇದೇ ಸಂದರ್ಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಸಹಾಯ ಮಾಡಿದ ದಾನಿಗಳನ್ನು ಅಭಿನಂದಿಸಿದರು.
ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ನಿವೃತ್ತ ಅಪರ ನಿರ್ದೇಶಕ ಎಂ.ರಾಮಯ್ಯ, ವಕೀಲರಾದ ಶಿವಣ್ಣ, ನಿವೃತ್ತ ಐಎಎಸ್ ಅಧಿಕಾರಿ ಶಂಕರ್, ಕಾರ್ಯದರ್ಶಿ ಪುಟ್ಟಬಸವೇಗೌಡ, ನಿವೃತ್ತ ಕೆಎಎಸ್ ಅಧಿಕಾರಿ ಚಿಕ್ಕಸ್ವಾಮಿ, ಅಧಿಕಾರಿಗಳಾದ ಶಿವಣ್ಣ, ಸತ್ಯನಾರಾಯಣ, ಜಿ.ಎಸ್. ಸೋಮಶೇಖರ್, ಬಸವರಾಜು, ಕುಮಾರಸ್ವಾಮಿ, ಮುಖಂಡರಾದ ಮಂಜುಳಾ ಮಾನಸ, ನಗರಪಾಲಿಕೆ ಸದಸ್ಯ ಗೋಪಿ, ಕೆ.ಎಸ್.ಶಿವರಾಮ್, ಹರೀಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.