ಬೈಯ್ಯುವ ಹಬ್ಬ ಆಚರಿಸಿ ಸಂಭ್ರಮಿಸಿದ ಗಿರಿಜನರು

Team Udayavani, May 25, 2018, 2:45 PM IST

m6-biyuva.jpg

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅಂಚಿನಲ್ಲಿರುವ ಆದಿವಾಸಿಗಳ ಪ್ರಮುಖ ಕುಂಡೆ ಹಬ್ಬವನ್ನು ತಾಲೂಕಿನ ನೇರಳಕುಪ್ಪೆ, ಹೆಬ್ಬಳ್ಳ ಸೇರಿದಂತೆ ಹಾಡಿಗಳ ಕಾಡಕುಡಿಗಳು ವಿವಿಧ ವೇಷ ಭೂಷಣ ಧರಿಸಿ, ಕುಣಿದು-ಕುಪ್ಪಳಿಸಿ ದಾರಿಹೋಕರನ್ನು ಜೇನು ನುಡಿಯಲ್ಲಿ ಅಣಕಿಸುತ್ತಾ, ಕೀಟಲೆ ಮಾಡುವ ಮೂಲಕ ಹಬ್ಬಕ್ಕೆ ಕಿಚ್ಚು ಹಚ್ಚಿ, ದೇವಪುರಕ್ಕೆ ತೆರಳಿ ದೇವರಿಗೆ ಪೂಜೆ ಸಲ್ಲಿಸಿ ಹಾಡಿಗೆ ವಾಪಾಸಾದರು.

ಬೈಯ್ಯುವುದೇ ವಿಶೇಷ: ಕೊಡಗಿನ ಕಾಫಿ ಎಸ್ಟೇಟ್‌ಗಳಲ್ಲಿ ಕೆಲಸ ಮಾಡುವ ಆದಿವಾಸಿಗಳು ಮಾಲಿಕರಿಂದ ಬೈಸಿಕೊಳ್ಳುವುದರ ವಿರುದ್ಧ ಆಚರಿಸುವುದೇ ಕುಂಡೆ ಹಬ್ಬ. ಹಬ್ಬದ ದಿನವಿಡೀ ದಾರಿಯಲ್ಲಿ ಸಿಕ್ಕವರಿಗೆ, ಮಾಲಿಕರಿಗೆ ಹೀಗೆ ಎಲ್ಲರನ್ನೂ ತಮ್ಮ ಭಾಷೆಯಲ್ಲೇ ಬೈಯುವುದು, ಹಣ ಪೀಕುವುದು, ಕೊಡದಿದ್ದಲ್ಲಿ ಮತ್ತಷ್ಟು ಬೈಯ್ಯುವುದು. ಆದರೆ, ಹಬ್ಬ ಆಚರಿಸುವ ವೇಳೆ ಬೈಯುವ ಆದಿವಾಸಿಗಳನ್ನು ಯಾರೂ ಪ್ರಶ್ನಿಸುವಂತಿಲ್ಲ.

ಕೊನೆಗೆ ಕ್ಷಮೆಯಾಚನೆ: ಗಿರಿಜನ ಸಮುದಾಯಕ್ಕೆ ಸೇರಿದ ಬೆಟ್ಟಕುರುಬ, ಜೇನುಕುರುಬ, ಬುಡಕಟ್ಟು ಸಮುದಾಯಕ್ಕೆ ಸೇರಿದವರು ಆಚರಿಸುವ ಹಬ್ಬವಿದು. ಕಾಡಿನೊಳಗೆ ಪೂಜೆ ಸಲ್ಲಿಸುವಾಗ ಇತರರಿಗೆ ಇಲ್ಲಿಗೆ ಪ್ರವೇಶವಿಲ್ಲ. ಹಬ್ಬದಂದು ಸಂಗ್ರಹವಾಗುವ ಹಣ ಮತ್ತಿತರ ವಸ್ತುಗಳಿಂದ ದೇವರಕಾಡಿನಲ್ಲಿ ದೇವರಿಗೆ ಪೂಜೆ ಸಲ್ಲಿಸಿ, ಭಿಕ್ಷೆ ಬೇಡಿದ್ದ ಹಣದಲ್ಲಿಯೇ ಅಡುಗೆ ತಯಾರಿಸಿ ಎಲ್ಲರಿಗೂ ಉಣಬಡಿಸಿ, ಕ್ಷಮೆ ಕೇಳಿ ಕೋಪ ತಣಿಸಿಕೊಳ್ಳುವುದೇ ಈ ಕುಂಡೆ ಹಬ್ಬದ ವಿಶೇಷ.

ಆಚರಣೆ ಹೇಗೆ: ಗಿರಿಜನರು ತಮ್ಮ ಆರಾಧ್ಯದೈವ ಭದ್ರಕಾಳಿ, ಅಯ್ಯಪ್ಪದೇವರ ಹೆಸರಿನಲ್ಲಿ ನಡೆಯುವ ಈ ಹಬ್ಬಕ್ಕೆ ಹನಗೋಡು ಹೋಬಳಿ ವ್ಯಾಪ್ತಿಯಲ್ಲಿರುವ 35ಕ್ಕೂ ಹೆಚ್ಚು ಹಾಡಿಯ ಗಿರಿಜನರು ಕಾಡಿನಲ್ಲಿ ಸಿಗುವ  ಸೊಪ್ಪು, ಹರಿದ ಬಟ್ಟೆ ಹಾಗೂ ಗೋಣಿ ಚೀಲಗಳಿಂದ ವಿವಿಧ ವೇಷಗಳನ್ನು ತೊಟ್ಟು, ಒಣಗಿದ ಸೋರೇಕಾಯಿ ಬುರುಡೆ, ಪ್ಲಾಸ್ಟಿಕ್‌ ಡಬ್ಬಿ ಹಾಗೂ ಟಿನ್‌ಗಳನ್ನು ಡೋಲಿನಂತ ತಯಾರಿಸಿ ಆಕರ್ಷಕವಾಗಿ ಕುಣಿಯುತ್ತಾ, ಸಿಕ್ಕ ಸಿಕ್ಕವರನ್ನು ಕೆಟ್ಟ ಪದಗಳಿಂದ ನಿಂದಿಸುತ್ತಾ ಬಿûಾಟನೆ ಮಾಡುತ್ತಾ ಸಂಭ್ರಮಿಸುತ್ತಾರೆ.

ಪ್ರತಿ ವರ್ಷದ ಮೇ ತಿಂಗಳ ಕೊನೆಯ ಬುಧವಾರದಂದು ಈ ಹಬ್ಬ ಆಚರಿಸಲಾಗುವುದು. ದೇವರ ಮೇಲೆ ಭಕ್ತಿ, ಗೌರವದಿಂದ ಪ್ರಾರ್ಥನೆ ಮಾಡಿ ವೇಷ ಹಾಕುತ್ತಾರೆ. ಬಳಿಕ ಕಾಲ್ನಡಿಗೆಯಲ್ಲೇ ಸುತ್ತ-ಮುತ್ತಲ ಹಳ್ಳಿಗಳಿಗೆ ಸುತ್ತಾಡಿ ಹಾಗೂ ಮೈಸೂರು-ಕೇರಳ ರಾಜ್ಯ ಹೆದ್ದಾರಿಯಲ್ಲಿ ಬರುವ ವಾಹನ ಸವಾರರಿಂದ ಭಿಕ್ಷೆ ಬೇಡುತ್ತಾರೆ.

ದೇವರಪುರದಲ್ಲಿ ಪೂಜೆ: ಹನಗೋಡು ಭಾಗದಿಂದ  ಕಾಡಿನ ದಾರಿಯಲ್ಲೇ ಬರಿಗಾಲಿನಲ್ಲಿ ತೆರಳಿ ಹಣ ಮತ್ತು ದವಸ-ಧಾನ್ಯ ತಂದು, ತಿತಿಮತಿ ಬಳಿಯ ದೇವರಪುರದಲ್ಲಿರುವ ಅಯ್ಯಪ್ಪಹಾಗೂ ಭದ್ರಕಾಳಿ ದೇವಾಲಯಗಳಲ್ಲಿ ಅರ್ಪಿಸಿ ದೇವರ ಉತ್ಸವದಲ್ಲಿ ಪಾಲ್ಗೊಂಡು ತಾವು ಮಾಡಿದ ತಪ್ಪಿಗಾಗಿ ದೇವರಲ್ಲಿ ಕ್ಷಮೆಯಾಚಿಸಿ, ವಿಶೇಷ ಪೂಜೆ ಸಲ್ಲಿಸುತ್ತಾರೆ. ಸಕುಟುಂಬ ಸಮೇತರಾಗಿ ಊಟ ಮಾಡಿ ಹಾಡಿಗಳಿಗೆ ವಾಪಾಸಾಗುವ ಮೂಲಕ ಹಬ್ಬ ಸಮಾರೋಪಗೊಳ್ಳುತ್ತದೆ.

* ಸಂಪತ್‌ಕುಮಾರ್‌ ಹುಣಸೂರು

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

11

KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!

Hanuma-mala

SriRangapattana: ಹನುಮ ಮಾಲಾಧಾರಿಗಳಿಂದ ಮಸೀದಿ ಪ್ರವೇಶ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.