ಮುಂಗಾರುವರೆಗೆ ನೀರು-ಮೇವು ಕೊಡಿ
Team Udayavani, Apr 18, 2017, 12:42 PM IST
ಮೈಸೂರು: ಮುಂಗಾರು ಮಳೆ ಆಶಾದಾಯಕವಾಗಿ ಬೀಳುವವರೆಗೆ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಒದಗಿಸುವ ಜತೆಗೆ ಬರ ಕಾಮಗಾರಿ ಕೈಗೊಂಡು ದುಡಿಯುವ ಕೈಗೆ ಉದ್ಯೋಗ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಬರ ಪರಿಹಾರ ಹಾಗೂ ಜಿಲ್ಲೆಯ ಅಭಿವೃದ್ಧಿ ವಿಷಯಗಳ ಕುರಿತು ಪ್ರಗತಿಪರಿಶೀಲನೆ ನಡೆಸಿದರು.
ಜ. 25ರಂದು ಮುಖ್ಯಮಂತ್ರಿ ಜಿಲ್ಲೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಈ ಮೂರು ತಿಂಗಳಲ್ಲಿ ಏನೇನು ಪ್ರಗತಿಯಾಗಿದೆ ಎಂದು ವಿವಿಧ ಇಲಾಖೆ ಅಧಿಕಾರಿಗಳಿಂದ ಇಲಾಖಾವಾರು ಮಾಹಿತಿ ಪಡೆದ ಸಚಿವರು, ಮೇ ಮೊದಲ ವಾರದಲ್ಲಿ ಮುಖ್ಯಮಂತ್ರಿ ಜಿಲ್ಲೆಯಲ್ಲಿ ಪ್ರಗತಿಪರಿಶೀಲನಾ ಸಭೆ ನಡೆಸಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದರು.
ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಮುಖ್ಯಮಂತ್ರಿ ಕೆಡಿಪಿ ಸಭೆಗೆ ಮುನ್ನ ತಾಲೂಕುವಾರು ಪ್ರಗತಿ ಪರಿಶೀಲನೆ ನಡೆಸಿ ವಿವರ ಪಡೆದುಕೊಳ್ಳಿ, ಇಲಾಖಾವಾರು ಬಜೆಟ್ ಅನುದಾನ ಆಧರಿಸಿ ಕ್ರಿಯಾಯೋಜನೆ ಸಿದ್ಧಪಡಿಸಿಕೊಳ್ಳುವಂತೆ ಹೇಳಿದರು.
ಜಿಲ್ಲೆಯ ಯಾವ್ಯಾವ ತಾಲೂಕುಗಳಲ್ಲಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂಬ ಮಾಹಿತಿ ಪಡೆದುಕೊಂಡ ಅವರು, ಅಂತರ್ಜಲ ಕುಸಿತದಿಂದ ಬೋರ್‌ವೆಲ್‌ಗಳು ಬರಿದಾಗಿದ್ದು, ತೀವ್ರ ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಸಮರ್ಪಕ ನೀರು ಸರಬರಾಜು ಮಾಡುವ ಜತೆಗೆ ಬೋರ್‌ವೆಲ್‌ಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಲಕ್ಷ್ಮೀನಾರಾಯಣ್ ಮಾತನಾಡಿ, ಗ್ರಾಮಲೆಕ್ಕಿಗರು ಹಾಗೂ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಹಳ್ಳಿಗಳಿಗೆ ಹೋಗದೆ ಕಚೇರಿಯಲ್ಲೇ ಕುಳಿತು ನೀರು ಸರಬರಾಜಿನ ದಾಖಲೆ ಸಿದ್ಧಪಡಿಸಿಬಿಡುತ್ತಾರೆ. ಹೀಗಾಗಿ ಟ್ಯಾಂಕರ್ ನೀರು ಸರಬರಾಜಾಗಿದ್ದಕ್ಕೆ ಆ ಗ್ರಾಮದ ಯಜಮಾನರಿಂದ ಸಹಿ ಪಡೆಯುವ ವ್ಯವಸ್ಥೆ ಜಾರಿಗೆ ತನ್ನಿ ಇದರಿಂದ ಸರ್ಕಾರಕ್ಕೂ ಒಳ್ಳೆಯ ಹೆಸರು ಬರುತ್ತೆ ಎಂದರು.
ಸಚಿವ ಮಹದೇವಪ್ಪ, ಪ್ರತಿ ಹಳ್ಳಿಯಲ್ಲೂ ಟ್ಯಾಂಕರ್ ನೀರು ಸರಬರಾಜಿನ ಸಂಬಂಧ ಎಷ್ಟು ಟ್ರಿಪ್ ಟ್ಯಾಂಕರ್ ಬರಬೇಕು ಎಂಬ ಬಗ್ಗೆ ಫಲಕಗಳನ್ನು ಅಳವಡಿಸುವಂತೆ ಹೇಳಿದರು.
ಮೈಸೂರು ಮಹಾ ನಗರಪಾಲಿಕೆಯ 65 ವಾರ್ಡ್‌ಗಳ ಪೈಕಿ 56 ವಾರ್ಡ್‌ಗಳಿಗೆ ನಿತ್ಯ ನೀರು ಸರಬರಾಜು ಮಾಡಲಾಗುತ್ತಿದ್ದು, ಇನ್ನುಳಿದ ವಾರ್ಡ್‌ಗಳಿಗೆ 22 ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್‌ಗಳಿಗೆ ಜಿಪಿಎಸ್ ಅಳವಡಿಸಿರುವುದರಿಂದ ದುರ್ಬಳಕೆ ತಡೆ ಸಾಧ್ಯವಾಗಿದೆ ಎಂದು ಪಾಲಿಕೆ ಆಯುಕ್ತ ಜಿ.ಜಗದೀಶ್ ಮಾಹಿತಿ ನೀಡಿದರು.
ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ಪ್ರಸಾದ ಮೂರ್ತಿ ಮಾತನಾಡಿ, ಜಿಲ್ಲೆಯಲ್ಲಿ 27 ಮೇವು ಬ್ಯಾಂಕ್ ತೆರೆಯಲಾಗಿದ್ದು, 1330 ಟನ್ ಮೇವು ಖರೀದಿಸಲಾಗಿದ್ದು, ಈವರೆಗೆ 31 ಸಾವಿರ ರೈತರಿಗೆ 978.51 ಟನ್ ಮೇವು ಮಾರಾಟ ಮಾಡಲಾಗಿದೆ. ಇನ್ನೂ 351 ಟನ್ ಮೇವು ದಾಸ್ತಾನಿದೆ. ಕಳೆದ 15 ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿರುವುದರಿಂದ ಹಸಿರು ಚಿಗುರುತ್ತಿದ್ದು, ಜತೆಗೆ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ 36 ಸಾವಿರ ಮಿನಿಕಿಟ್‌ಗಳನ್ನು ಹಂಚಿಕೆ ಮಾಡಿರುವುದರಿಂದ ಮೇವಿನ ಕೊರತೆ ಎದುರಾಗುವುದಿಲ್ಲ ಎಂದರು.
ನರೇಗಾ, ಗ್ರಾಮೀಣ ಕುಡಿಯುವ ನೀರಿನ ಯೋಜನೆ, ಕೆರೆ ಸಂಜೀವಿನಿ, ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಇನ್‌ಫುಟ್ ಸಬ್ಸಿಡಿ ವಿತರಣೆ, ಮುಂಗಾರು ಪೂರ್ವ ಬಿತ್ತನೆ, ರೈತರ ಆತ್ಮಹತ್ಯೆ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿಪರಿಶೀಲನೆ ನಡೆಸಿದರು. ಜಿಪಂ ಸಿಇಒ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಹುಣಸೂರು ಉಪ ವಿಭಾಗಾಧಿಕಾರಿ ಸೌಜನ್ಯ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.