ಶರತ್ ಹತ್ಯೆ ಪ್ರಕರಣ ಎನ್‌ಐಎಗೆ ಕೊಡಿ
Team Udayavani, Jul 12, 2017, 12:09 PM IST
ಮೈಸೂರು: ರಾಜ್ಯದಲ್ಲಿ ನಡೆದಿರುವ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ಕ್ಕೆ ಒಪ್ಪಿಸುವಂತೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಹಿಂಜಾವೇ ಮೈಸೂರು ಘಟಕದ ಕಾರ್ಯಕರ್ತರು, ಇತ್ತೀಚೆಗೆ ಹತ್ಯೆಗೀಡಾದ ಬಂಟ್ವಾಳದ ಬಿ.ಸಿ.ರಸ್ತೆ ನಿವಾಸಿ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಮನ ಸಲ್ಲಿಸಿದರು.
ಪ್ರತಿಭಟನಾಕಾರರು ಮಾತನಾಡಿ, ಶರತ್ ಕೊಲೆ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಪ್‌ಐ ಹಾಗೂ ಕೆಎಪ್‌ಡಿ, ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿದರು.
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕರಾವಳಿ ಬಾಗದಲ್ಲಿ ಜಿಹಾದಿ ಪ್ರೇರಿತ ಮನಸ್ಥಿತಿಯುಳ್ಳವರಿಂದ ಇಂತಹ ಹೀನ ಕೃತ್ಯಗಳು ನಡೆಯುತ್ತಿವೆ. ಅಂತಹವರನ್ನು ಗುರುತಿಸಿ ಹಕ್ಕಿಕ್ಕುವ ಕೆಲಸ ಆಗಬೇಕಿದೆ. ಮಂಗಳೂರು ಪ್ರಕರಣದಲ್ಲಿ ಜಿಲ್ಲಾಡಳಿತದ ವೈಫಲ್ಯವಿದ್ದು, ರಾಜ್ಯ ಸರ್ಕಾರ ಕೂಡ ಇಲ್ಲಿ ವಿಫಲವಾಗಿದೆ. ಕೂಡಲೇ ರಾಜ್ಯಪಾಲರು ಮಧ್ಯ ಪ್ರವೇಶಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.
ಮಾಜಿ ಸಚಿವ ಎಸ್.ಸುರೇಶ್‌ಕುಮಾರ್ ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗಲಭೆಯ ಹಿಂದೆ ಬಿಜೆಪಿ ಕೈವಾಡವಿದ್ದರೆ ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು. ಗಲಭೆಯ ಹಿಂದೆ ರಾಜ್ಯ ಸರ್ಕಾರದ ಕೈವಾಡವಿದ್ದು, ಕೇರಳದ ನಂಟು ಸಹ ಇದೆ.
ಈ ಹಿಂದೆ ಮಡಿಕೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ನಡೆದಂತೆ ದಕ್ಷಿಣ ಕನ್ನಡದಲ್ಲೂ ಕೇರಳದಿಂದ ಬಂದವರು ಗಲಭೆಗೆ ಕಾರಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಸಚಿವರ ಕೆಲಸ ಮಾಡುವ ಬದಲಿಗೆ ಓಟ್ ಬ್ಯಾಂಕ್ ಉಸ್ತುವಾರಿ ಸಚಿವರಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಗಲಭೆಗಳನ್ನು ಹುಟ್ಟು ಹಾಕುತ್ತಿರುವ ಪಿಎಫ್ಐ, ಎಸ್‌ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು. ಶರತ್ ಮಡಿವಾಳ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವೇದಿಕೆಯ ಸಂಯೋಜಕ ಎಸ್. ಕುಮಾರ್, ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಎಚ್.ಮಂಜುನಾಥ್, ನಗರಪಾಲಿಕೆ ಸದಸ್ಯ ನಂದೀಶ್‌ಪ್ರೀತಂ, ಮುಖಂಡರಾದ ಗಿರಿಧರ್ ತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.