ಪಠ್ಯದ ಜತೆಗೆ ದೈಹಿಕ ಸದೃಢತೆಗೂ ಆದ್ಯತೆ ನೀಡಿ


Team Udayavani, Apr 15, 2017, 12:48 PM IST

mys4.jpg

ಮೈಸೂರು: ಕೊಡವ ಸಮಾಜ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್‌ ಹಾಗೂ ಮೈಸೂರು ಜಿಲ್ಲಾ ಬ್ಯಾಡ್ಮಿಂಟನ್‌ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ ಮೂರು ದಿನಗಳ ಮೈಸೂರು ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಗೆ ಚಾಲನೆ ದೊರೆಯಿತು.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಕೊಡವ ಸಮಾಜ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್‌ ನಡೆಸುತ್ತಿರುವ ಪಂದ್ಯಾವಳಿ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಿ. ರಂದೀಪ್‌ ಮಾತನಾಡಿ, ಪ್ರಸ್ತುತ ಯುವಕರು ಹೆಚ್ಚಾಗಿ ಕ್ರೀಡೆಯಲ್ಲಿ ತೊಡಗುತ್ತಿರುವುದು ಸಂತಸದ ಸಂಗತಿಯಾಗಿದ್ದು, ಕ್ರೀಡೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು.

ಹೀಗಾಗಿ ಶಿಕ್ಷಣದಲ್ಲಿ ಮಾತ್ರವಲ್ಲದೆ, ಕ್ರೀಡಾ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು. ಇದಕ್ಕೆ ಪೋಷಕರು ಪೋ›ತ್ಸಾಹ ನೀಡಬೇಕು. ಪಾಶ್ಚಿಮಾತ್ಯ ದೇಶಗಳಲ್ಲಿ ಸದೃಢತೆಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ನಾವು ಅವರಂತೆ ಸದೃಢತೆಗೆ ಆದ್ಯತೆ ನೀಡುವ ಮೂಲಕ ಮಾದರಿಯಾಗಬೇಕು ಎಂದು ತಿಳಿಸಿದರು.

ಪತ್ರಿಕೋದ್ಯಮಿ ರಾಜಶೇಖರ ಕೋಟಿ ಮಾತನಾಡಿ, ಆರೋಗ್ಯದಲ್ಲಿ ಸದೃಢತೆ ಕಾಪಾಡಿಕೊಳ್ಳಲು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕಿದ್ದು, ಅದರಲ್ಲೂ ಬ್ಯಾಡ್ಮಿಂಟನ್‌ ಅತ್ಯಂತ ಚಾಣಾಕ್ಷತೆ ಯಿಂದ ಆಡುವ ಆಟವಾಗಿದ್ದು, ಪ್ರತಿನಿತ್ಯ ಬ್ಯಾಡ್ಮಿಂಟನ್‌ ಆಡುವುದರಿಂದ ಆರೋಗ್ಯ ಕಾಪಾಡಿಕೊಳ್ಳಬಹುದು. 

ಪ್ರಸ್ತುತ ಮಕ್ಕಳು, ಪೋಷಕರಲ್ಲಿ ಬ್ಯಾಡ್ಮಿಂಟನ್‌ ಬಗ್ಗೆ ಆಸಕ್ತಿ ಹೆಚ್ಚುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.ಮೂರು ದಿನಗಳು ನಡೆಯುವ ಪಂದ್ಯಾವಳಿಯಲ್ಲಿ ಮೈಸೂರು, ಕೊಡಗು, ಚಾಮರಾಜನಗರದಿಂದ ಅಂದಾಜು 250 ಆಟಗಾರರು ಭಾಗವಹಿಸಿದ್ದು, ಸಿಂಗಲ್ಸ್‌ ಹಾಗೂ ಡಬಲ್ಸ್‌ ವಿಭಾಗಗಳಲ್ಲಿ ಪಂದ್ಯಗಳು ನಡೆಯಲಿದೆ.

ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ ನಿರ್ದೇಶಕ ಎಂ. ಕೃಷ್ಣಯ್ಯ, ರಾಜ್ಯ ಬ್ಯಾಡ್ಮಿಂಟನ್‌ ಅಸೋಸಿಯೇಷನ್‌ ಉಪಾಧ್ಯಕ್ಷ ಎಸ್‌.ಜಿ. ಪ್ರಭು, ಕೊಡವ ಸಮಾಜದ ಅಧ್ಯಕ್ಷ ಮೂವೇರ ಕೆ.ಕುಟ್ಟಪ್ಪ, ಕೊಡವ ಸಮಾಜ ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಲಬ್‌ನ ಅಧ್ಯಕ್ಷ ಮಾಚಿಮಾಡ ಪಿ.ನಾಣಯ್ಯ, ಉಪಾಧ್ಯಕ್ಷ ಕೆ.ಡಿ.ಮುತ್ತಪ್ಪ ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

5

Puttur: ಗ್ರಾಮ ಚಾವಡಿಗೆ 150 ವರ್ಷ ಹಳೆಯ ಕಟ್ಟಡವೇ ಗತಿ!

4

Sullia: ಉಪಟಳ ಮಾಡುವ ಕೋತಿಗಳಿಗೆ ಶಾಕ್‌ ಟ್ರೀಟ್‌ಮೆಂಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.