ಶುದ್ಧ ನೀರು ನೀಡಿ ಮದ್ಯಕ್ಕೆ ಕಡಿವಾಣ ಹಾಕಿ 

Team Udayavani, Sep 11, 2017, 12:22 PM IST

mys6.jpg

ಹುಣಸೂರು: ಸರ್ಕಾರದ ವತಿಯಿಂದ ಹಳ್ಳಿಗಳಲ್ಲಿ ನೀಡಲು ಉದ್ದೇಶಿಸಿರುವ ಲೇಔಟ್‌ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ ಜಾಬಗೆರೆ ಕುಡಿಯುವ ಯೋಜನೆಯ ನೀರೊದಗಿಸಲು ನಿಗದಿತ ಅವಧಿಯೊಳಗೆ ಕ್ರಮ ಕೈಗೊಳ್ಳಬೇಕೆಂದು ತಾಪಂ ಇಒ ಕೃಷ್ಣಕುಮಾರ್‌ ಸೂಚಿಸಿದರು. ತಾಪಂ ಸಭಾಂಗಣದಲ್ಲಿ ಅಧ್ಯಕ್ಷೆ ಪದ್ಮಮ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದ ನಂತರ ಮಾತನಾಡಿದರು.

ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ್ದ ವೇಳೆ ಸೊಳ್ಳೆಪರದೆ ಬಳಸದಿರುವುದು, ಸ್ವತ್ಛತೆ ಕಾಪಾಡದಿರುವುದು ಹಾಗೂ ಮಾದಹಳ್ಳಿ ಹಾಡಿಯ ಕಾರ್ಯಕರ್ತೆ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದು ಕೂಡಲೇ ಕ್ರಮ ಕೈಗೊಳ್ಳಬೇಕೆಂದರು. ಮಹಿಳಾ ಮತ್ತು ಮಕ್ಕಳ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕೆಂದು ತಾಪಂ ಅಧ್ಯಕ್ಷೆ ಪದ್ಮಮ್ಮ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ತಾಕೀತು ಮಾಡಿದರೆ, ಪಶು ವೈದ್ಯಕೀಯ ಇಲಾಖೆ ವತಿಯಿಂದ ಹಾಲಿನ ಡೇರಿಗಳ ಮೂಲಕ ಹುಲ್ಲಿನ ಬೀಜ ವಿತರಿಸುವ ಬದಲಿಗೆ ನೇರವಾಗಿ ರೈತರಿಗೆ ವಿತರಿಸಬೇಕೆಂದು ಉಪಾಧ್ಯಕ್ಷ ಪ್ರೇಮಕುಮಾರ್‌ ಸೂಚನೆ ನೀಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಗಣಪತಿರಾವ್‌, ಮುಳ್ಳೂರು ಮಾರ್ಗ ಬಸ್‌ ಮತ್ತೆ ಆರಂಭಿಸಬೇಕೆಂದು ಸಂಚಾರ ನಿಯಂತ್ರಕ ನಟರಾಜ್‌ಗೆ ಸೂಚಿಸಿದರು. ಆರೋಗ್ಯಾಕಾರಿ ಡಾ.ದೇವತಾಲಕ್ಷಿ ಆರೋಗ್ಯ ಇಲಾಖೆ ಯೋಜನೆಗಳ ಸೌಲಭ್ಯ ಪಡೆಯಲು ಹಾಡಿ ಮಂದಿ ಬ್ಯಾಂಕ್‌ ಖಾತೆ ತೆರೆದಿಲ್ಲವೆಂಬ ಮಾಹಿತಿಗೆ, ಎಲ್ಲಾ ಬ್ಯಾಂಕುಗಳಿಗೆ ಶೂನ್ಯ ಖಾತೆ ತೆರೆಯಲು ಸೂಚಿಸಲಾಗುವುದೆಂದು ಇಒ ತಿಳಿಸಿದರು. ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ರಮೇಶ್‌, ನಗರದಲ್ಲಿನ ಶಿಥಿಲಗೊಂಡಿರುವ ರೇಷ್ಮೆ ಮಾರುಕಟ್ಟೆ ಕಟ್ಟಡ ಒಡೆದುಹಾಕಲು ತಾಂತ್ರಿಕ ತಜ್ಞರು ವರದಿ ನೀಡಿದ್ದಾರೆಂದರು.

ಕಾವೇರಿ-ಕಬಿನಿ ನೀರು: ತಾಪಂ ಒಂದು ಕೋಟಿ ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಿ ಅನುಮೋದನೆಗೆ ಕಳುಹಿಸಲಾಗಿದೆ. ಕಾವೇರಿ ನದಿಯಿಂದ ತಾಲೂಕಿನ ಹಿರಿಕ್ಯಾತನಹಳ್ಳಿ ಭಾಗದ 45 ಹಾಗೂ ಕಬಿನಿಯಿಂದ ಧರ್ಮಾಪುರ ಭಾಗದ 57 ಗ್ರಾಮಗಳಿಗೆ  ನೀರು ಪೂರೈಸುವ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗಾವಡಗೆರೆ ಬಳಿಯ ಜಾಬಗೆರೆಗೆ ಕಾವೇರಿ ನೀರು ಪೂರೆಸಲು 35 ಲಕ್ಷರೂ ವೆಚ್ಚದ ಯೋಜನೆ ಪೂರ್ಣಗೊಂಡಿದ್ದು, ವಿದ್ಯುತ್‌ ಸಂಪರ್ಕ ನೀಡುವುದು ಬಾಕಿ ಇದೆ ಎಂದು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಗಣಪತಿರಾವ್‌ ಇಂಡೋಲ್ಕರ್‌ ಪ್ರಶ್ನೆಗೆ ಜಿಪಂ ಎಇಇ ರಮೇಶ್‌ ಮಾಹಿತಿ ನೀಡಿದರು.

ಮದ್ಯಮಾರಾಟ: ತಾಲೂಕಿನಲ್ಲಿ ತಿಂಗಳಿಗೆ ಸುಮಾರು 3 ಲಕ್ಷ ಲೀಟರ್‌ಗೂ ಹೆಚ್ಚು ಮದ್ಯ ಮಾರಾಟವಾಗುತ್ತಿದೆ. ಸುಪ್ರೀಂಕೋರ್ಟ್‌ ತೀರ್ಪಿನ ನಂತರ ಮುಚ್ಚಲಾಗಿದ್ದ 13 ಬಾರ್‌ಗಳು ಮತ್ತೆ ಆರಂಭಗೊಂಡಿವೆ ಎಂದು ಅಬಕಾರಿ ನಿರೀಕ್ಷಕ ಧರ್ಮರಾಜ್‌ ಪ್ರಶ್ನೆಯೊಂದಕ್ಕೆ ಮಾಹಿತಿ ನೀಡಿದರು.

ಶಾಲೆ ಬಿಟ್ಟ ಹಾಡಿ ಮಕ್ಕಳ ಗಣತಿ: ತಾಲೂಕಿನಲ್ಲಿ 54 ಹಾಡಿಗಳಿದ್ದು, ಅನೇಕ ಆದಿವಾಸಿ ಮಕ್ಕಳು ಶಾಲೆಯಿಂದ ವಂಚಿತಾಗಿರುವುದು ತಿಳಿದು ಬಂದಿದೆ. ಜಿಲ್ಲಾಕಾರಿಗಳ ಸೂಚನೆ ಮೇರೆಗೆ 81 ಶಿಕ್ಷಕ 27 ತಂಡ ಹಾಡಿಗಳಲ್ಲಿ ಸೆ.21 ರಿಂದ 28 ರವರೆಗೆ ಗಣತಿ ಕಾರ್ಯ ನಡೆಸಲಾಗುವುದು.  ಚಿಕ್ಕ ಹುಣಸೂರು ಆದರ್ಶ ಶಾಲೆ ಪಕ್ಕ ಹೆಣ್ಣುಮಕ್ಕಳ ಹಾಸ್ಟೆಲ್‌ ನಿರ್ಮಿಸಿದ್ದು, ಪಕ್ಕದಲ್ಲಿ ಸ್ಮಶಾನಕ್ಕೆ ಸ್ಥಳ ನೀಡುವ ಮಾಹಿತಿ ಬಂದಿದೆ. ಇದನ್ನು ನೀಡಬಾರದೆಂದು ಬಿಇಒ ಎಸ್‌.ರೇವಣ್ಣ ಕೋರಿದರು.

ದೊಂಬರ ಕಾಲೋನಿ ಸಕ್ರಮ: ಬಹು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ಮರದೂರು ಗ್ರಾಪಂ ದೊಂಬರ ಕಾಲೋನಿ ಸರ್ಕಾರಿ ಭೂಮಿಯಲ್ಲಿ ಅನಧಿಕೃತವಾಗಿ ವಾಸಮಾಡುತ್ತಿದ್ದ 24 ಕುಟುಂಬಗಳನ್ನು ಸಕ್ರಮಗೊಳಿಸಲಾಗಿದೆ. ಶೀಘ್ರ ಹಕ್ಕುಪತ್ರ ವಿತರಿಸಲಾಗುವುದು. ಹಬ್ಬನಕುಪ್ಪೆ ಪರಿಶಿಷ್ಟರಿಗೆ ಭೂಮಿ ನೊಂದಣಿ ಮಾಡಿಕೊಡಲಾಗಿದೆ. ಕಟ್ಟೆಮಳಲವಾಡಿ, ಬಿಳಿಗೆರೆ, ಜಾಬಗೆರೆ, ಚಿಕ್ಕಬೀಚನಹಳ್ಳಿ ಸೇರಿದಂತೆ 10 ಗ್ರಾಮಗಳಲ್ಲಿ  ಎಲ್ಲ ಜನಾಂಗದವರಿಗೆ ವಿತರಿಸಲು ನಿವೇಶನ ರಚನೆ ಕಾರ್ಯ ಶೀಘ್ರ ಮುಗಿಸಬೇಕೆಂದು ಜಿಪಂ ಎಇಇಗೆ ಇಒ ತಿಳಿಸಿದರು.

ಟಾಪ್ ನ್ಯೂಸ್

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.