![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Mar 5, 2023, 5:00 AM IST
ಮೈಸೂರು: ಬಿಜೆಪಿ ಪಕ್ಷದಲ್ಲಿ ತಮ್ಮನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳದ ಕಾರಣ ಮೌನವಾಗಿದ್ದೇನೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, 2016 ಹಾಗೂ 2022ರ ಪರಿಷತ್ ಚುನಾವಣೆಯಲ್ಲಿ ಪಕ್ಷ ತಮಗೆ ಟಿಕೆಟ್ ನಿರಾಕರಿಸಿತು. ಅನಂತರವೂ ಪಕ್ಷ ಸಂಘಟನೆಯಲ್ಲಿ ತಮ್ಮನ್ನು ಬಳಸಿಕೊಳ್ಳುವ ಕುರಿತು ಪಕ್ಷ ಆಸಕ್ತಿ ತೋರಿಲ್ಲ. ತಮ್ಮ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಆಗಬಾರದೆಂದು ಮಾಧ್ಯಮಗಳಿಂದ ದೂರ ಉಳಿದಿದ್ದೇನೆ ಎಂದರು.
ನಾನು ಇವತ್ತಿಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ನಾನು ಬೇರೆ ಯಾವುದೇ ಪಕ್ಷ ಸೇರಿಲ್ಲ, ಸೇರುವುದೂ ಇಲ್ಲ. ಬಿಜೆಪಿಯಲ್ಲಿ ಹಿರಿಯ ನಾಯಕರನ್ನು ಕಡೆಗಣಿಸುತ್ತಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಆಪ್ತ ಸ್ನೇಹಿತರಾದ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಚಿವರಾದ ಪರಮೇಶ್ವರ್, ಆರ್.ವಿ.ದೇಶಪಾಂಡೆ, ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರು ಕಾಂಗ್ರೆಸ್‌ಗೆ ಆಹ್ವಾನಿಸಿದರು. ಸಿದ್ಧಾಂತಗಳ ಆಧಾರದ ಮೇಲೆ ರಾಜಕಾರಣ ಮಾಡಿಕೊಂಡು ಬಂದಿರುವ ವ್ಯಕ್ತಿ ನಾನು. ಚುನಾವಣೆ ಅಥವಾ ಅಧಿಕಾರಕ್ಕಾಗಿ ರಾಜಕಾರಣ ಮಾಡಿದವನಲ್ಲ ಎಂದು ಮಧುಸೂದನ್ ಹೇಳಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.