ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಗೋಲ್‌ಮಾಲ್‌

Team Udayavani, Nov 4, 2017, 11:45 AM IST

m2-mata-patti.jpg

ಮೈಸೂರು: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾರೀ ಗೋಲ್‌ಮಾಲ್‌ ನಡೆದಿದ್ದು, ಬಿಜೆಪಿ ಮತದಾರರನ್ನು ಗುರಿಯಾಗಿಸಿಕೊಂಡಿರುವ ಸ್ಥಳೀಯ ಕಾಂಗ್ರೆಸ್‌ ಶಾಸಕ ಎಂ.ಕೆ.ಸೋಮಶೇಖರ್‌ ಮತದಾರರ ಪಟ್ಟಿಯನ್ನು ತಿರುಚಿಸಿದ್ದಾರೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಆರೋಪಿಸಿದರು.

ಬೂತ್‌ ಕ್ಯಾಪcರಿಂಗ್‌ ಮಾಡುವುದರಲ್ಲಿ ಕಾಂಗ್ರೆಸ್‌ ಪಿತಾಮಹ. ಹೀಗಾಗಿ ರಾಜ್ಯದಲ್ಲಿ ಚುನಾವಣೆ ಘೋಷಣೆಗೂ ಮೊದಲೇ ಮತಪಟ್ಟಿಯಲ್ಲಿ ಮತದಾರರ ಹೆಸರನ್ನು ಡಿಲೀಟ್‌ ಮಾಡಲಾಗಿದೆ. ಪರಿಷ್ಕೃತ ಮತದಾರರಪಟ್ಟಿಯಲ್ಲಿ ಬದುಕಿರುವವರನ್ನು ಸತ್ತಿದ್ದಾರೆಂದು ಬದಲಿಸಿದ್ದಾರೆ. ತರಾತುರಿಯಲ್ಲಿ ನಡೆದಿರುವ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಈ ಲೋಪ ಕಂಡುಬಂದಿದೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಯಾವ ಕ್ಷೇತ್ರ ಹಾಗೂ ಬೂತ್‌ಗಳಲ್ಲಿ ಬಿಜೆಪಿಗೆ ಹೆಚ್ಚು ಮತಬಂದಿದೆ ಅಂತಹ ಕಡೆ ಮತದಾರರ ಪಟ್ಟಿ ತಿರುಚಿದ್ದಾರೆ ಎಂದು ಆರೋಪಿಸಿದ ಅವರು,  ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌, ತಮ್ಮ ಪಕ್ಷದ ಶಾಸಕರು ಮತದಾರರ ಪಟ್ಟಿ ತಿರುಚುತ್ತಿರುವ ಬಗ್ಗೆ ಏಕೆ ಮೌನವಹಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಮತದಾರರ ಪಟ್ಟಿಯಲ್ಲಿನ ಅಕ್ರಮ ಕೇವಲ ನಗರದ ಕೆ.ಆರ್‌.ಕ್ಷೇತ್ರ ಮಾತ್ರವಲ್ಲದೆ, ಎನ್‌.ಆರ್‌.ಕ್ಷೇತ್ರ, ಚಾಮರಾಜ ಮತ್ತು ಚಾಮುಂಡೇಶ್ವರಿ ಕ್ಷೇತ್ರದಲ್ಲಿಯೂ ನಡೆದಿರುವ ದಾಖಲೆ ಲಭ್ಯವಾಗಿದೆ. ಅಲ್ಲದೆ ರಾಜ್ಯದ ಎಲ್ಲಾ 224 ವಿಧಾನಸಬಾ ಕ್ಷೇತ್ರಗಳಲ್ಲೂ ಈ ರೀತಿಯ ಅಕ್ರಮ ನಡೆದಿರುವ ಅನುಮಾನ ವ್ಯಕ್ತವಾಗಿದ್ದು, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಯಬೇಕಿದೆ ಎಂದು ಒತ್ತಾಯಿಸಿದರು.

ತಾನೇ ಸಿಎಂ ಆಗಿದ್ದಾರೆ: ನಗರದ 3 ವಿಧಾನಸಭಾ ಕ್ಷೇತ್ರಕ್ಕೂ ತಾನೇ ಮುಖ್ಯಮಂತ್ರಿ ಎಂದುಕೊಂಡಿರುವ ಶಾಸಕ ಎಂ.ಕೆ.ಸೋಮಶೇಖರ್‌, ಕೆ.ಆರ್‌.ಕ್ಷೇತ್ರದ 4794, ಚಾಮರಾಜ ಕ್ಷೇತ್ರದ 5,642 ಮತ್ತು ಎನ್‌.ಆರ್‌.ಕ್ಷೇತ್ರದ 3,416 ಮಂದಿಯ ಹೆಸರು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಹೇಳಿದರು. ಇದಕ್ಕೆ ಪಾಲಿಕೆ ತಹಶೀಲ್ದಾರ್‌ ಅಸ್ಲಾಂ ಸಹಕರಿಸಿದ್ದಾರೆ.

ಹೀಗಾಗಿ ಮತದಾರರಪಟ್ಟಿಯನ್ನು ತಿರುಚಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡುತ್ತಿದ್ದಂತೆ ಅವರು ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಆಗಿದ್ದಾರೆ ಎಂದು ದೂರಿದರು. ಸುದ್ದಿಗೋಷ್ಠಿಯಲ್ಲಿ ನಗರ ಪಾಲಿಕೆ ಸದಸ್ಯರಾದ ಬಿ.ವಿ.ಮಂಜುನಾಥ್‌, ಶಿವಕುಮಾರ್‌, ಬಿಜೆಪಿ ಮುಖಂಡ ರಾಜೇಂದ್ರ ಇದ್ದರು.

ಟಾಪ್ ನ್ಯೂಸ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.