1001 ಸುಮಂಗಲಿಯರಿಗೆ ಸ್ವರ್ಣಗೌರಿ ಬಾಗಿನ ಅರ್ಪಣೆ
Team Udayavani, Aug 23, 2017, 12:30 PM IST
ಮೈಸೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ನಗರದ ಜಗನ್ಮೋಹನ ಅರಮನೆಯಲ್ಲಿ 1001 ಸುಮಂಗಲಿಯರಿಗೆ ಸ್ವರ್ಣಗೌರಿ ಬಾಗಿನ ಸಮರ್ಪಣಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಶ್ರೀ ಅಭಯಂ ಧಾರ್ಮಿಕ ದ್ವಿಮಾಸ ಪತ್ರಿಕೆ, ಸೈಕಲ್ ಬ್ರ್ಯಾಂಡ್ ಅಗರಬತ್ತಿ ಹಾಗೂ ಸಿರಿ ವಾಹಿನಿಯ ಸಹಯೋಗದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಉಡುಪಿ ಭಂಡಾರಕೇರಿ ಮಠದ ವಿದ್ಯೆàಶತೀರ್ಥ ಶ್ರೀಪಾದಂಗಳವರು 1001 ಸುಮಂಗಲಿಯರಿಗೆ ಬಾಗಿನ ವಿತರಿಸಿ ಆಶೀರ್ವದಿಸಿದರು.
ದಾಂಪತ್ಯ ಸಂತೋಷವಾಗಿರಲಿ: ಕಾರ್ಯಕ್ರಮ ಉದ್ಘಾಟಿಸಿದ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ಮಾತನಾಡಿ, ವಿವಾಹಿತ ಮಹಿಳೆಯರಿಗೆ ಗೌರಿ ಹಬ್ಬದಂದು ಬಾಗಿನ ನೀಡುವುದು ಅತ್ಯಂತ ಶ್ರೇಷ್ಠ ಸಂಪ್ರದಾಯವಾಗಿದೆ. ಇದರಿಂದ ಅವರ ದಾಂಪತ್ಯ ಜೀವನ ಸಂತೋಷದಿಂದ ಕೂಡಿರಲಿದ್ದು, ಬಾಗಿನ ಸ್ವೀಕರಿಸಿದ ಮಹಿಳೆಯರನ್ನು ದೇವತೆಯ ಸ್ವರೂಪದಲ್ಲಿ ಕಾಣಬೇಕಿದೆ.
ಸುಮಂಗಲಿಯರ ಆಶೀರ್ವಾದ ಸಿಕ್ಕರೆ ಕೋಟಿ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬುದು ನಂಬಿಕೆ ಎಂದರು. ಸಮಾಜ ಸೇವಕ ಕೆ.ರಘುರಾಂ ಮಾತನಾಡಿ, ಬಾಗಿನ ಅರ್ಪಿಸುವುದು ಪುಣ್ಯದ ಕಾರ್ಯವಾಗಿದ್ದು, ಈ ಬಾರಿ ತಾಯಿ ಗೌರಿಯ ಆಶೀರ್ವಾದದಿಂದ ರಾಜ್ಯಕ್ಕೆ ಒಳ್ಳೆಯದಾಗಲಿ. ಇಂದಿನ ಸಮಾಜದಲ್ಲಿ ಧಾರ್ಮಿಕ ಆಚರಣೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡುವ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಂಗೀಪುರ ನಂಬಿ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಮೈಲ್ಯಾಕ್ ಕಾರ್ಖಾನೆ ನಿರ್ದೇಶಕ ಹುಯಿಲಾಳು ರಾಮಸ್ವಾಮಿ, ಕಲಾವಿದರ ಸಂಘದ ಕಾರ್ಯಾಧ್ಯಕ್ಷ ಎಂ.ಬಸವೇಗೌಡ, ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ಅಧ್ಯಕ್ಷೆ ಯಮುನಾ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Surathkal: ಬೇಕು ವ್ಯವಸ್ಥಿತ ಒಳಚರಂಡಿ; ಸೋರುತ್ತಿರುವ ವೆಟ್‌ವೆಲ್‌ಗಳಿಂದ ಮಾಲಿನ್ಯ
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.