ಉತ್ತಮ ಕಾನೂನೂ ತಿದ್ದುಪಡಿ: ವಿಷಾದ


Team Udayavani, Jun 18, 2017, 12:21 PM IST

mys6.jpg

ಮೈಸೂರು: ದೇಶದ ಬಹುತೇಕ ಕಾನೂನುಗಳು ಉತ್ತಮವಾಗಿದ್ದರೂ, ಅನುಷ್ಠಾನಗೊಂಡ ಕೆಲವೇ ವರ್ಷಗಳಲ್ಲಿ ತಿದ್ದುಪಡಿಯಾಗಿ ಮೂಲೆಗುಂಪಾಗುತ್ತಿವೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಸುಬ್ರೋ ಕಮಲ್‌ ಮುಖರ್ಜಿ ಹೇಳಿದರು. 

ಕುವೆಂಪು ನಗರದಲ್ಲಿರುವ ಜೆಎಸ್‌ಎಸ್‌ ಕಾನೂನು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 10ನೇ ಪದವಿ ದಿನಾಚರಣೆಯಲ್ಲಿ ರ್‍ಯಾಂಕ್‌ ಪಡೆದವರಿಗೆ ಪದವಿ ಹಾಗೂ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ದೇಶದಲ್ಲಿ ಅನೇಕ ಹೊಸ ಕಾನೂನುಗಳು ಸಮಾಜದ ಸ್ವಾಸ್ಥ ಕಾಪಾಡಲು ಹಾಗೂ ಜನರ ಅನುಕೂಲಕ್ಕಾಗಿ ಜಾರಿಯಾಗುತ್ತವೆ.

ಆದರೆ ಬಹುತೇಕ ಕಾನೂನುಗಳು ಜಾರಿಗೊಂಡು ಅನುಷ್ಠಾನಗೊಳ್ಳುವ ಕೆಲವೇ ವರ್ಷ ಅಥವಾ ತಿಂಗಳ ಮೊದಲೇ ತಿದ್ದುಪಡಿ ಆಗುತ್ತಿರುವುದು ದುರಾದೃಷ್ಟಕರ ಸಂಗತಿ. ದೇಶದ ಅನೇಕರು ಸಂವಿಧಾನದಿಂದ ತಮಗೆ ದೊರೆಯುವ ಹಕ್ಕುಗಳಿಗಾಗಿ ಹೋರಾಡುತ್ತಾರೆ. ಆದರೆ ಮೂಲ ಕರ್ತವ್ಯ ಹಾಗೂ ಅವುಗಳ ಪಾಲನೆಯ ಬಗ್ಗೆ ಯಾರೊಬ್ಬರೂ ಚಿಂತಿಸುವುದಿಲ್ಲ. ಆದರೆ ದೇಶದ ಜನತೆ ತಮ್ಮ ಹಕ್ಕನ್ನು ಪಡೆಯುವ ಜತೆಗೆ ಕರ್ತವ್ಯಗಳನ್ನು ಸಹ ತಪ್ಪದೇ ಪಾಲಿಸಬೇಕೆಂದು ಹೇಳಿದರು.

ತಂತ್ರಜ್ಞಾನ ಬಳಿಸಿಕೊಳ್ಳಿ: ಆಧುನಿಕ ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದು, ಎಲ್ಲಾ ವಿಷಯಕ್ಕೆ ಸಂಬಂಧಿಸಿದ ಮಾಹಿತಿಗಳು ಕ್ಷಣದಲ್ಲೇ ಅಂಗೈಯಲ್ಲಿಯೇ ಲಭಿಸುತ್ತದೆ. ಈ ಹಿನ್ನೆಲೆಯಲ್ಲಿ ಕಾನೂನು ವಿದ್ಯಾರ್ಥಿಗಳು ಆಧುನಿಕ ತಂತ್ರಜ್ಞಾನವನ್ನು ಸಮರ್ಪಕ ರೀತಿಯಲ್ಲಿ ಬಳಸಿಕೊಂಡು ಸಮಾಜದ ಎಲ್ಲಾ ವಿಷಯಗಳ ಬಗ್ಗೆ ಅರಿಯಬೇಕು. ಕಾನೂನು ವಿದ್ಯಾರ್ಥಿಗಳು ನಿತ್ಯವೂ ಹೊಸ ವಿಷಯಗಳನ್ನು ಕಲಿಯಬೇಕು. ಶ್ರದ್ಧೆ ಹಾಗೂ ನಿರಂತರ ಪರಿಶ್ರಮದಿಂದ ಅಧ್ಯಯನ ಮಾಡಿದಾಗ ನ್ಯಾಯ ಒದಗಿಸಲು ಸಾಧ್ಯ ಎಂದು ತಿಳಿಸಿದರು.

ರ್‍ಯಾಂಕ್‌ ಪಡೆದವರು: ಬಿಬಿಎಎಲ್‌ಎಲ್‌ಬಿ ವಿಭಾಗದಲ್ಲಿ ಜಿ.ಅನುಷಾ(1), ಅಭಿನವ್‌ ಸಿವಾಚ್‌(2), ಕೀರ್ತಮ ರಮೇಶ್‌(3), ಸುಜಿ ಚೆರಿಯನ್‌(4), ಸಲೋನಿಕ ವಿನಿತಾ ಮೊನಿಸ್‌(5). ಬಿಎಎಲ್‌ಎಲ್‌ಬಿ ವಿಭಾಗದಲ್ಲಿ ಸೈಯದ್‌ ಕುದ್ರತ್‌ (1), ಪಾತಿಮತ್‌ ಶುವೈನ (2), ಮುಟ್ಸೆಕಡೊಮೊ ಜಿಕಮೈ ಟಿನೆಶೆ (3), ಶ್ರೀನಿವಾಸ ಪಾಟೀಲ್‌ (4). ಎಲ್‌ಎಲ್‌ಬಿ ವಿಭಾಗದಲ್ಲಿ ಭವ್ಯಾ ಬಿ.ಚೆಂಗಪ್ಪ(1), ಎಂ.ಸಿ.ದೇಚಮ್ಮ (2), ಎಸ್‌.ಪಿ.ಆದಿತ್ಯರಾವ್‌(3), ಪಿ.ದುರೈಸ್ವಾಮಿ (4), ಎನ್‌.ಗೀತಾ (4). ಎಲ್‌ಎಲ್‌ಎಂ ವಿಭಾಗದಲ್ಲಿ ಆಲ್ಟ್ರ್ಟ್‌ ಮೇನ (1), ಇಂದುಲೇಖ ಮನೋಜ್‌ (2).

ಸಮಾರಂಭದಲ್ಲಿ ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ.ಬೆಟಸೂರಮಠ, ಪ್ರಾಂಶುಪಾಲ ಪ್ರಭುಸ್ವಾಮಿ, ಡಾ.ಕೆ.ಸುರೇಶ್‌ ಇತರರು ಇದ್ದರು.

ದೇಶದಲ್ಲಿರುವ ಭ್ರಷ್ಟಾಚಾರ ನಿಯಂತ್ರಿಸಲು ಲೋಕಾಯುಕ್ತ ಸಂಸ್ಥೆಯಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರ ಅಗತ್ಯ. ಯುವಪೀಳಿಗೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಕೈಜೋಡಿಸಬೇಕು. ಈ ಹಿಂದೆ ವಕೀಲ ವೃತ್ತಿಗೆ ಅಷ್ಟೊಂದು ಬೇಡಿಕೆ ಇರಲಿಲ್ಲ, ಈಗ ಬೇಡಿಕೆ ಹೆಚ್ಚಾಗಿದೆ. ಕಾನೂನು ವ್ಯಾಸಂಗ ಮಾಡುವವರ ಸಂಖ್ಯೆ ದ್ವಿಗುಣವಾಗಿದೆ.
-ನ್ಯಾ.ಪಿ.ವಿಶ್ವನಾಥ ಶೆಟ್ಟಿ, ಕರ್ನಾಟಕ ಲೋಕಾಯುಕ್ತ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.