ರಸಗೊಬ್ಬರ ಪೂರೈಕೆಗೆ ಸರ್ಕಾರ ಬದ್ಧ: ಪ್ರಕಾಶ
Team Udayavani, Aug 30, 2020, 1:03 PM IST
ಪಿರಿಯಾಪಟ್ಟಣ: ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಡಾ.ಕೆ . ಪ್ರಕಾಶ್ ಬಾಬು ರಾವ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗತ್ತಿನಾದ್ಯಂತ ಕೋವಿಡ್ ಆವರಿಸಿ ಜನತೆಯನ್ನು ಸಂಕಷ್ಟಕ್ಕೆ ದೂಡಿದೆ. ಅನ್ನದಾತನಿಗೆ ಕೃಷಿ ಚಟುವಟಿಕೆಯಲ್ಲಿ ಯಾವುದೇ ಸಮಸ್ಯೆ ಬಾರದಂತೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುತ್ತಿದೆ. ಆದರೆ, ಕೆಲವು ಖಾಸಗಿ ರಸಗೊಬ್ಬರ ಪೂರೈಕೆ ಮಾಡುವ ಅಂಗಡಿಗಳ ಮಾಲಿಕರು ಅಧಿಕ ಹಣ ಮಾಡುವ ಉದ್ದೇಶ ದಿಂದ ರೈತರಿಗೆ ರಿಯಾಯ್ತಿ ದರದಲ್ಲಿ ನೀಡಬೇಕಾದ ರಸಗೊಬ್ಬರ ವನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದು, ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.
ರೈತರಿಗೆ ವಂಚಿಸಿದರೆ ಕ್ರಮ: ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರಮೇಶಕುಮಾರ್, ಕಳೆದ ಮೂರು ದಿನಗಳ ಹಿಂದೆ ಪಿರಿಯಾ ಪಟ್ಟಣ ತಾಲೂಕಿನ ಕುಂದನಹಳ್ಳಿ ಗ್ರಾಮದ ಜಮೀನಿನ ಕೋಳಿ ಫಾರ್ಮ್ನಲ್ಲಿ ಕೆಲವು ಕೇರಳ ಮೂಲದ ವ್ಯಕ್ತಿಗಳು ಸರ್ಕಾರ ರೈತರಿಗೆ ರಿಯಾಯ್ತಿ ದರದಲ್ಲಿ ವಿತರಿಸಲು ಇಟ್ಟಿದ್ದ ಯೂರಿಯಾ ರಸಗೊಬ್ಬರವನ್ನು ಅಕ್ರಮವಾಗಿ ಶೇಖರಿಸಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲವನ್ನು ತಾಲೂಕು ಆಡಳಿತ, ಕೃಷಿ ಇಲಾಖೆ, ಪೊಲೀಸ್ ಇಲಾಖೆ ತನಿಖೆ ಮಾಡಿ ಮೂವರನ್ನು ಬಂಧಿಸಿದೆ. ಇಂತಹ ಕೃತ್ಯದಲ್ಲಿ ಭಾಗಿಯಾಗಿರುವವರ ಪರವಾನಗಿ ರದ್ದುಗೊಳಿಸುವ ಮೂಲಕ ರೈತರಿಗೆ ವಂಚನೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಜಿಲ್ಲಾ ಗ್ರಾಮಾಂತರ ಘಟಕದ ಉಪಾಧ್ಯಕ್ಷ ಎಂ. ಎಂ.ರಾಜೇಗೌಡ, ಹುಣಸೂರು ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ನಾಗಣ್ಣಗೌಡ, ತಾಲೂಕು ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಸಿ.ವೀರಭದ್ರ, ಬೆಮ್ಮತ್ತಿ ಚಂದ್ರು, ತಾಲೂಕು ರೈತ ಮೋರ್ಚಾ ಅಧ್ಯಕ್ಷ ಬೆಕ್ಕರೆ ಮಹದೇವ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.