ಸರ್ಕಾರಿ ವೈದ್ಯರು ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಸಾಧ್ಯತೆ
Team Udayavani, Jun 27, 2023, 12:57 PM IST
ಮೈಸೂರು: ಆರೋಗ್ಯ ಇಲಾಖೆಯಲ್ಲಿನ ಅರೆಕಾಲಿಕ ವೈದ್ಯರು ಖಾಸಗಿ ನರ್ಸಿಂಗ್ ಹೋಂಗಳಲ್ಲಿ ಕೆಲಸ ಮಾಡುವುದಕ್ಕೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಮೈಸೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ವೈದ್ಯರ ಕೊರತೆಯಿದ್ದ ಕಾರಣ ಎರಡು ಕಡೆಗಳಲ್ಲಿ ಕೆಲಸ ಮಾಡಲು ಅವಕಾಶ ಕೊಡಲಾಗಿತ್ತು. ಈಗ ಅಂತಹ ಸಮಸ್ಯೆಗಳಿಲ್ಲ. ಹೀಗಾಗಿ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಆದೇಶಿಸುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದರು.
ಸಚಿವರಾದ ಬಳಿಕ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಸಂಸದ ಪ್ರತಾಪ ಸಿಂಹ ಸ್ವಾಗತಿಸಿದರು.
ಇದನ್ನೂ ಓದಿ:ಪ್ರವಾಸಿಗರ ಆಕರ್ಷಣೆಯ ಪ್ರವಾಸಿ ತಾಣವಾಗುತ್ತಿರುವ ದಾಂಡೇಲಿಯ ಮೊಸಳೆ ಪಾರ್ಕ್
ಚಾಮರಾಜನಗರ ಆಕ್ಸಿಜನ್ ದುರಂತ ವಿಚಾರದ ಮರು ತನಿಖೆಗೆ ಒಪ್ಪಿಗೆ ಕೊಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಯಾವ ಅಂಶಗಳ ಆಧಾರದ ಮೇಲೆ ಮರು ತನಿಖೆಯಾಗಬೇಕು ಎಂಬ ಚಾರ್ಜ್ ಫ್ರೇಮ್ ಮಾಡಿಕೊಡಿ ಎಂದು ಸರ್ಕಾರದಿಂದ ಮತ್ತೆ ಪತ್ರ ಬಂದಿದೆ. ಈಗ ನಾವು ತನಿಖೆಯಾಗಬೇಕಿರುವ ಚಾರ್ಜ್ ಫ್ರೇಮನ್ನು ಸಿದ್ಧ ಮಾಡುತ್ತಿದ್ದೇವೆ. ಚಾರ್ಜ್ ಫ್ರೇಮ್ ಪ್ರತಿಯನ್ನು ಶೀಘ್ರದಲ್ಲೇ ಸರ್ಕಾರಕ್ಕೆ ಕಳುಹಿಸುತ್ತೇವೆ. ಸರ್ಕಾರ ನಂತರ ತೀರ್ಮಾನ ಕೈಗೊಳ್ಳುತ್ತದೆ. ಕಾಲ ಮಿತಿಯ ಒಳಗಡೆ ಈ ಬಗ್ಗೆ ಮರು ತನಿಖೆಯಾಗಬೇಕೆಂಬುದು ನಮ್ಮ ಉದ್ದೇಶ ಎಂದರು.
ಕಾಂಗ್ರೆಸ್ ನವರಿಂದ ಬಂದವರಿಂದ ಬಿಜೆಪಿ ಶಿಸ್ತು ಕೆಟ್ಟಿತ್ತು ಎಂಬ ಕೆ.ಎಸ್ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ನಿಂದ ಬಂದ ಶಾಸಕರಿಂದ ಸರ್ಕಾರ ಮಾಡಿ 40, 50% ಕಮಿಷನ್ ಹೊಡೆದು ಈಗ ಈ ಮಾತು ಆಡಿದರೆ ಅವರನ್ನು ಯಾರು ನಂಬುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
JDS: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆ ಈಗಿಲ್ಲ, ಎಪ್ರಿಲ್‌ನಲ್ಲಿ: ಎಚ್.ಡಿ.ಕುಮಾರಸ್ವಾಮಿ
CM Post: ಸಭೆಗೆ ಮುನ್ನಾದಿನ ಉಭಯ ಬಣಗಳ ವಾಕ್ಸಮರ!
Mass Marriage: ಹೆಚ್ಚು ಮಕ್ಕಳು ಬೇಡ, ಎರಡೇ ಸಾಕು: ಸಿಎಂ ಸಿದ್ದರಾಮಯ್ಯ ಸಲಹೆ
MUST WATCH
ಹೊಸ ಸೇರ್ಪಡೆ
SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!
Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ
ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?
Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.