ಸರ್ಕಾರದ ಯೋಜನೆಗಳು ಸಂಪೂರ್ಣ ಸದ್ಬಳಕೆಯಾಗಬೇಕು
Team Udayavani, Feb 7, 2020, 3:00 AM IST
ತಿ.ನರಸೀಪುರ: ಮಹಿಳೆಯರ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳು ಸಂಪೂರ್ಣವಾಗಿ ಸದ್ಬಳಕೆಯಾದಾಗ ಮಾತ್ರ ಮಹಿಳಾ ಸಬಲೀಕರಣ ಸಾಧ್ಯವಾಗುತ್ತದೆ ಎಂದು ಮೈಸೂರು ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ಎಸ್.ಸಿದ್ದರಾಮಪ್ಪ ಹೇಳಿದರು.
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈಸೂರು ನೆಹರು ಯುವ ಕೇಂದ್ರ, ತಿ.ನರಸೀಪುರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳು ಹಾಗೂ ನಯನ ನಾಟ್ಯ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಷಯಾಧಾರಿತ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ ಹಾಗೂ ಫಿಟ್ ಇಂಡಿಯಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾರತಮ್ಯ ತೊಲಗಲಿ: ಮಹಿಳೆಯರು ಸಮಾಜದ ಎಲ್ಲಾ ಸ್ಥರಗಳಲ್ಲಿಯೂ ಪುರುಷರಷ್ಟೇ ಶ್ರಮಿಸುತ್ತಿದ್ದಾರೆ. ತೋರಿಕೆಗಷ್ಟೇ ಸಭೆ-ಸಮಾರಂಭಗಳಲ್ಲಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎನ್ನುತ್ತಾರೆ. ಪತಿ, ಮಕ್ಕಳು ಹಾಗೂ ಮನೆಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಕೌಟುಂಬಿಕವಾಗಿಯೂ ಸೈ ಎನಿಸಿಕೊಂಡಿದ್ದಾರೆ. ತಾರತಮ್ಯ ನಿವಾರಣೆಯಾಗಿ, ಸರ್ಕಾರದ ಯೋಜನೆಗಳು ಉಪಯೋಗವಾದಾಗ ಮಹಿಳೆಯರ ಸಬಲೀಕರಣ ಸಾಧ್ಯವಾಗುತ್ತದೆ ಎಂದರು.
ಶಿಕ್ಷಣದ ಕಾರ್ಯಕ್ರಮ ಅಗತ್ಯ: ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿ ಹೆಣ್ಣಿಗೆ ಪೂಜ್ಯನೀಯವಾದ ಸ್ಥಾನವಿದೆ. ಆಧುನಿಕತೆ ಸೋಗಿಗೆ ಮಹಿಳೆಯರು ಮಾರು ಹೋಗಿದ್ದರಿಂದ ದೇಸಿಯ ಆಚಾರ-ವಿಚಾರ ಅದಲು ಬದಲಾಗಿದೆ. ಅಲ್ಲದೆ ಆಹಾರ ಪದ್ಧತಿ ಕೂಡ ಬದಲಾದ ಪರಿಣಾಮ ಸಂಸ್ಕೃತಿ ಮತ್ತು ಆರೋಗ್ಯ ಎರಡು ಹಾಳಾಗಿವೆ. ಇಂಥ ಸನ್ನಿವೇಶದಲ್ಲಿ ವಿಷಯಾಧಾರಿತ ಜಾಗೃತಿ ಹಾಗೂ ಶಿಕ್ಷಣದ ಕಾರ್ಯಕ್ರಮ ಪ್ರತಿಯೊಬ್ಬರಿಗೂ ಅಗತ್ಯವಿದೆ ಎಂದು ತಿಳಿಸಿದರು.
ಸಂಜೀವಿನಿ ಸಂಯೋಜಕಿ ರೂಪಾಶ್ರೀ, ಎಂ.ಸುರೇಶ್, ಎಚ್.ಟಿ.ಸ್ವಾಮಿ, ಎಂ.ಎನ್.ಮಹದೇವಸ್ವಾಮಿ, ಮೋಹನಕುಮಾರಿ, ಮಧುಶ್ರೀ, ಆರ್ಥಿಕ ಸಾಕ್ಷರತಾ ಅಧಿಕಾರಿ ಸೀತಾರಾಮ, ಮಹೇನ ನಾಟ್ಯ ಟ್ರಸ್ಟ್ ಅಧ್ಯಕ್ಷ ಕಿರಣ್ ಕುಮಾರ್, ನನ್ನವ್ವ ಸಾಂಸ್ಕೃತಿಕ ಕಲಾತಂಡದ ಅಧ್ಯಕ್ಷ ವೈ.ಜಿ.ಮಹದೇವ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ
Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!
Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ
AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.