ಸರ್ಕಾರಿ ನೌಕರರ ಮುಷ್ಕರ: ಜನತೆ ಪರದಾಟ

Team Udayavani, Mar 2, 2023, 2:43 PM IST

tdy-14

ಮೈಸೂರು: ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿ ಹಾಗೂ ವೇತನ ಪರಿಷ್ಕರಣೆಗೆ ಆಗ್ರಹಿಸಿ ಸರ್ಕಾರಿ ನೌಕರರು ಬುಧವಾರ ನಡೆಸಿದ ಮುಷ್ಕರದಿಂದ ಆರೋಗ್ಯ ಇಲಾಖೆಯ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಜಿಲ್ಲೆಯ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ ಉಂಟಾಯಿತು.

ಸರ್ಕಾರಿ ನೌಕರರು ಬುಧವಾರ ಮಧ್ಯಾಹ್ನದವರೆಗೆ ನಡೆಸಿದ ಮುಷ್ಕರದಿಂದ ನಗರದ ಕೆ.ಆರ್‌.ಆಸ್ಪತ್ರೆ, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನ್ಯಾಯಾಲಯ, ಜಿಲ್ಲಾಧಿಕಾರಿ ಕಚೇರಿ, ಮೈಸೂರು ಮಹಾನಗರ ಪಾಲಿಕೆಯ ಮುಖ್ಯ ಕಚೇರಿ ಹಾಗೂ ವಲಯ ಕಚೇರಿಗಳಲ್ಲಿ ಸರ್ಕಾರಿ ಸೇವೆ ಸಿಗದೆ ಸಾರ್ವಜನಿಕರು ಪರದಾಡಿದ ದೃಶ್ಯ ಕಂಡಬಂದಿತು.

ಬಣಗುಟ್ಟಿದ ಕಚೇರಿಗಳು: ಜಿಲ್ಲಾಧಿಕಾರಿ ಕಚೇರಿ, ಪಾಲಿಕೆ ಕಚೇರಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಗಳು ಸೇರಿದಂತೆ ಸರ್ಕಾರಿ ಕಚೇರಿಗಳು ಜನರಿಲ್ಲದೇ ಬಣಗುಟ್ಟಿದವು. ಖಾತೆ ಬದಲಾವಣೆ, ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ಅರ್ಜಿ ಸಲ್ಲಿಸಲು ಪಾಲಿಕೆ ಮುಖ್ಯ ಕಚೇರಿಗೆ ಬಂದಿದ್ದವರು ವಾಪಸ್‌ ತೆರಳಿದರು. ಹಾಗೆಯೇ ನಿತ್ಯ ನೂರಾರು ಮಂದಿಯಿಂದ ತುಂಬಿರುತ್ತಿದ್ದ ಜಿಲ್ಲಾಧಿಕಾರಿ ಕಚೇರಿಯೂ ಸಿಬ್ಬಂದಿ ಇಲ್ಲದೇ ಬಣಗುಟ್ಟಿದರೆ, ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಲು ಅರ್ಜಿ ಹಿಡಿದು ಬಂದಿದ್ದ ಸಾರ್ವಜನಿಕರು ನಿರಾಸೆಯಿಂದ ಮನೆಯತ್ತ ತೆರಳಿದರು. ಮೈಸೂರು ಪಾಲಿಕೆ ನೌಕರರ ಸಂಘದ ಸದಸ್ಯರು, ಮೈಸೂರು ವಿಶ್ವವಿದ್ಯಾಲಯ ನೌಕರರ ಸಂಘದವರು ಮುಷ್ಕರಕ್ಕೆ ಬೆಂಬಲ ನೀಡಿದರು.

ಆಸ್ಪತ್ರೆಗಳೂ ಖಾಲಿ ಖಾಲಿ: ಹೊರರೋಗಿಗಳಿಂದ ಗಿಜಿಗುಡುತ್ತಿದ್ದ ನಗರದ ಕೆ.ಆರ್‌. ಆಸ್ಪತ್ರೆ, ಜಿಲ್ಲಾಸ್ಪತ್ರೆ, ಜಯನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಮುಷ್ಕರ ಹಿನ್ನೆಲೆ ಆರೋಗ್ಯ ಸೇವೆ ವ್ಯತ್ಯಯವಾಗಿತ್ತು. ಹೆರಿಗೆ ಆಸ್ಪತ್ರೆಯಲ್ಲಿ ರೋಗಿಗಳನ್ನು ಮಂಗಳವಾರದಿಂದಲೇ ದಾಖಲಿಸಿಕೊಂಡಿರಲಿಲ್ಲ. ಕೆ.ಆರ್‌.ಆಸ್ಪತ್ರೆಯ ಒಪಿಡಿ ಬಂದ್‌ ಹಿನ್ನೆಲೆ ಚಿಕಿತ್ಸೆ ಲಭ್ಯವಾಗದೇ ರೋಗಿಗಳು ಸಂಕಷ್ಟಕ್ಕೀಡಾದರು. ರಕ್ತದೊತ್ತಡ, ಮಧುಮೇಹ ಪರೀಕ್ಷೆಗೆಂದು ಬಂದವರು ಖಾಸಗಿ ಆಸ್ಪತ್ರೆಗಳಿಗೆ ತೆರಳಿದರು.

ನೌಕರರ ಬೇಡಿಕೆ ಈಡೀರಿಸುವ ಸಂಬಂಧ ಸರ್ಕಾರ ಭವಸೆ ನೀಡಿದ ಹಿನ್ನೆಲೆ ಮಧ್ಯಾಹ್ನಕ್ಕೆ ಮುಷ್ಕರ ವಾಪಾಸ್‌ ಪಡೆದಿದ್ದರಿಂದ ಮಧ್ಯಾಹ್ನದಿಂದಲೇ ಎಲ್ಲಾ ಸರ್ಕಾರಿ ಕಚೇರಿ, ಆಸ್ಪತ್ರೆಗಳಲ್ಲಿ ಸೇವೆ ಪುನಾರಂಭವಾಯಿತು.

ಟಾಪ್ ನ್ಯೂಸ್

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್‌ಗೆ ಮೆಸೇಜ್‌!

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್‌ಬಾಟ್‌ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್‌.ರೆಹಮಾನ್‌ ತಂಡದ ಸದಸ್ಯೆ ಮೋಹಿನಿ

4-panaji

Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!

3-raichur

Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.