9ರಿಂದ 12ನೇ ಕ್ಲಾಸ್‌ವರೆಗೆ ಸೆಮಿಸ್ಟರ್‌ ಪದ್ಧತಿ ಸಲ್ಲ


Team Udayavani, Jul 18, 2019, 3:00 AM IST

9rinda

ಮೈಸೂರು: ಶಿಕ್ಷಣ ಪಡೆದ ವ್ಯಕ್ತಿ ಜವಾಬ್ದಾರಿ ಮನುಷ್ಯನಾಗಬೇಕು ಮತ್ತು ಸಾಮಾಜಿಕ ಕಳಕಳಿ ಉಳ್ಳವನಾಗಬೇಕು ಎಂಬುದೇ ಹೊಸ ಶಿಕ್ಷಣ ನೀತಿಯ ಸ್ಪಷ್ಟ ಉದ್ದೇಶವಾಗಿದೆ ಎಂದು ಎಬಿಆರ್‌ಎಸ್‌ಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಸಿಂಧನಕೇರಾ ತಿಳಿಸಿದರು.

ಮೈಸೂರು ವಿಶ್ವವಿದ್ಯಾಲಯ ಕಾನೂನು ಶಾಲೆ ಹಾಗೂ ಮೈಸೂರು ವಿಶ್ವವಿದ್ಯಾಲಯ ಶೈಕ್ಷಿಕ ಸಂಘದ ಸಹಯೋಗದೊಂದಿಗೆ ಮಾನಸಗಂಗೋತ್ರಿಯ ಕಾನೂನು ಶಾಲೆಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ – 2019: ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರಾಮರ್ಶೆ ಅಗತ್ಯ: ಮೂರು ವರ್ಷ ಮೇಲ್ಪಟ್ಟ ಮಗು 15 ವರ್ಷಗಳ ವರೆಗೆ 4 ಹಂತದ ಶಿಕ್ಷಣ ಪಡೆಯಬೇಕು ಎಂಬ ಅಂಶವನ್ನು ಈ ನೀತಿ ಹೊಂದಿದೆ. ಪ್ರಾರಂಭದ 5 ವರ್ಷದ ಶಿಕ್ಷಣಕ್ಕೆ ಹಚ್ಚು ಒತ್ತು ನೀಡಲಾಗಿದೆ. ಇದು ಒಳ್ಳೆಯ ಬೆಳವಣಿಗೆ. ಆದರೆ 9ರಿಂದ 12ನೇ ತರಗತಿ ವರೆಗೆ ಸೆಮಿಸ್ಟರ್‌ ಪದ್ಧತಿ ಅಳವಡಿಸುವುದು ಸರಿಯಲ್ಲ. ಈ ಬಗ್ಗೆ ಮತ್ತೂಮ್ಮ ಪರಾಮರ್ಶೆ ಮಾಡಬೇಕಿದೆ ಎಂದು ಹೇಳಿದರು.

ಯಾವುದೇ ಒಂದು ದೇಶದ ಪ್ರಗತಿ ಮತ್ತು ದೊಡ್ಡ ಮಟ್ಟದ ಬದಲಾವಣೆ, ಆ ದೇಶದ ಶಿಕ್ಷಣ ವ್ಯವಸ್ಥೆಯ ಮೇಲೆ ನಿಂತಿರುತ್ತದೆ. ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಹತ್ತು ಮಂದಿಯಲ್ಲಿ ಕರ್ನಾಟಕ ರಾಜ್ಯದವರು ಮೂವರು ಇರುವುದು ಅಭಿನಂದನಾರ್ಹ ಸಂಗತಿ ಎಂದರು.

ಗುಣಮಟ್ಟದ ಶಿಕ್ಷಣ: ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ. ಹೇಮಂತ್‌ ಕುಮಾರ್‌ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪೂರಕ ವಾತಾವರಣ ನಿರ್ಮಾಣ ಮಾಡಬೇಕಾಗಿದ್ದು, ಈ ಬಗ್ಗೆ ಹೊಸ ಶಿಕ್ಷಣ ನೀತಿಯಲ್ಲಿ ಅವಕಾಶ ಕಲ್ಪಿಸಬೇಕಿದೆ ಎಂದು ಹೇಳಿದರು.

ಭಾರತದಲ್ಲಿ ಸ್ವಾತಂತ್ರ್ಯ ನಂತರ ಅನೇಕ ಶಿಕ್ಷಣ ನೀತಿಗಳನ್ನು ರೂಪಿಸಲಾಗಿದ್ದು, ಸಾಕಷ್ಟು ಬದಲಾವಣೆಗಳು ಆಗಿವೆ. 2019ರ ರಾಷ್ಟ್ರೀಯ ಶಿಕ್ಷಣ ನೀತಿಯ ಎಲ್ಲಾ ಅಂಶಗಳು ಅದ್ಭುತವಾಗಿದ್ದು, ಸಮರ್ಪಕವಾಗಿ ಜಾರಿಗೆ ತರುವ ಕೆಲಸ ಆಗಬೇಕಿದೆ. ಒಂದು ವೇಳೆ ಪೂರ್ಣಪ್ರಮಾಣದಲ್ಲಿ ಈ ಶಿಕ್ಷಣ ನೀತಿ ಜಾರಿಯಾದರೆ, ದೇಶದ ಸರ್ವತೋಮುಖ ಪ್ರಗತಿಗೆ ಸಹಕಾರಿಯಾಗಲಿದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಅರುಣ್‌ ಶಹಾಪುರ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬಂದ ನಂತರ ಮೆಕಾಲೆ ಶಿಕ್ಷಣ ನೀತಿಯನ್ನು ಅಳವಡಿಸಿಕೊಳ್ಳಲಾಗಿದೆ. ಇದರಿಂದ ಈ ಪರಿಸ್ಥಿತಿ ಬಂದಿದೆ ಎಂಬ ಮಾತುಗಳು ಭಾಷಣದಲ್ಲಿ ಕೇಳಿಬರುತ್ತಿದ್ದವು. ಆದರೆ, ಭಾರತ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಬಗ್ಗೆ ಯಾರೂ ಮಾತನಾಡುತ್ತಿರಲಿಲ್ಲ.

ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಭಾರತ ಕೇಂದ್ರಿತ ಶಿಕ್ಷಣ ವ್ಯವಸ್ಥೆ ಅಡಗಿರುವುದನ್ನು ಕಾಣಬಹುದಾಗಿದೆ. ಇದು ಅತ್ಯುತ್ತಮ ನೀತಿಯಾಗಿದ್ದು, ಪೂರ್ಣಪ್ರಮಾಣದಲ್ಲಿ ಜಾರಿಮಾಡಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಕಾನೂನು ಶಾಲೆಯ ನಿರ್ದೇಶಕ ಪ್ರೊ.ಸಿ. ಬಸವರಾಜು, ಪ್ರೊ. ವಿಶ್ವನಾಥ್‌, ಪ್ರೊ.ಜಿ.ಸಿ. ರಾಜಣ್ಣ ಇತರರಿದ್ದರು.

ರಾಜಕೀಯ ವಿಪ್ಲವದಿಂದ ಶಿಕ್ಷಣ ನೀತಿ ಚರ್ಚೆಯೇ ಇಲ್ಲ: ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಪ್ರತಿ ಬಂದು ಒಂದೂವರೆ ತಿಂಗಳಾದರು ಈ ಬಗ್ಗೆ ಯಾರೂ ಹೆಚ್ಚು ಚರ್ಚೆ, ಸಂವಾದ ಮಾಡುತ್ತಿಲ್ಲ. ಇಂದು ಚಿಂತನೆಯ ದಾರಿದ್ರ ಕಾಡುತ್ತಿದೆ. ಅಭಿಪ್ರಾಯಗಳನ್ನು ಅಭಿವ್ಯಕ್ತಗೊಳಿಸುವಲ್ಲಿ ನಾವೆಲ್ಲ ಹಿಂದೆ ಬಿದ್ದಿದ್ದೇವೆ. ಒಂದು ಕಡೆ ರಾಜಕೀಯ ವಿಪ್ಲವದಿಂದಾಗಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗೆಗೆ ನಡೆಯಬೇಕಾದ ಚರ್ಚೆ, ಸಂವಾದಗಳು ತೆರೆಮರೆಗೆ ಸರಿದಿವೆ ಎಂದು ವಿಧಾನ ಪರಿಷತ್‌ ಸದಸ್ಯ ಅರುಣ್‌ ಶಹಾಪುರ ಬೇಸರ ವ್ಯಕ್ತಪಡಿಸಿದರು.

ಈ ನೀತಿಯಲ್ಲಿ 3 ವರ್ಷದ ಮಗುವಿನಿಂದಲೇ ಶಿಕ್ಷಣ ನೀಡುವ ಬಗ್ಗೆ ಹೇಳಲಾಗಿದ್ದು, 6ನೇ ವರ್ಷದ ವರೆಗೆ ಆ ಮಗು ಅಕ್ಷರಾಭ್ಯಾಸ ಮತ್ತು ಸಂಖ್ಯೆಗಳನ್ನು ಗುರುತಿಸುವ ವಿಧಾನವನ್ನು ಕಲಿಯಬೇಕಿದೆ. ಇದರಿಂದ ಮಗು ಅಕ್ಷರ ಮತ್ತು ಸಂಖ್ಯೆಗಳ ಪರಿಪೂರ್ಣ ಜ್ಞಾನವನ್ನು ಪಡೆಯಲು ಸಹಾಯವಾಗುತ್ತದೆ. ಒಟ್ಟಾರೆ ಹೊಸ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಒಳ್ಳೆಯ ಅಂಶಗಳಿದ್ದು, ಈ ಬಗ್ಗೆ ಹೆಚ್ಚು ಚರ್ಚೆ, ಸಂವಾದಗಳು ನಡೆಯಬೇಕಿದೆ ಎಂದು ತಿಳಿಸಿದರು.

ಖಾಸಗಿ ವಿವಿಯಂತೆ ಸರ್ಕಾರಿ ವಿವಿಗಳಿಗೂ ವ್ಯಾಪ್ತಿ ವಿಸ್ತರಿಸಲಿ: ಮೈಸೂರು ವಿವಿಯಲ್ಲಿ ಕಳೆದ 10 ವರ್ಷಗಳಿಂದ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ನೇಮಕಾತಿಯಾಗಿಲ್ಲ. ಇದರಿಂದ ಗುಣಮಟ್ಟದ ಶಿಕ್ಷಣ ನೀಡಲು ಹೇಗೆ ಸಾಧ್ಯ?, ಈ ನಿಟ್ಟಿನಲ್ಲಿ ಕೆಲವು ವಿಚಾರದಲ್ಲಿ ರಾಜ್ಯ ವಿವಿಗಳಿಗೂ ಸ್ವಾಯತ್ತೆ ನೀಡಬೇಕು.

ರಾಜ್ಯ ವಿವಿಗಳಿಗೆ ಭೌಗೋಳಿಕ ಚೌಕಟ್ಟನ್ನು ಹಾಕಿರುವುದನ್ನು ಸಡಿಲಿಸಿ, ಖಾಸಗಿ ವಿವಿಗಳಂತೆ ಎಲ್ಲಾ ಕಡೆ ಸ್ನಾತಕೋತ್ತರ ಕೇಂದ್ರ ತೆರೆಯಲು ಅವಕಾಶ ಮಾಡಿಕೊಡುವ ಅಂಶಗಳನ್ನು 2019ರ ಶಿಕ್ಷಣ ನೀತಿಯಲ್ಲಿ ಸೇರಿಸಬೇಕಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಜಿ. ಹೇಮಂತ್‌ ಕುಮಾರ್‌ ತಿಳಿಸಿದರು.

ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಕೇಂದ್ರೀಯ ವಿವಿ, ರಾಜ್ಯ ವಿವಿ ಹಾಗೂ ಖಾಸಗಿ ವಿವಿ ಎಂಬ ಮೂರು ವಿಧದ ವಿಶ್ವವಿದ್ಯಾಲಯಗಳಿವೆ. ಕೇಂದ್ರೀಯ ವಿವಿಗೆ ಕೇಂದ್ರ ಸರ್ಕಾರ ಸಾಕಷ್ಟು ಅನುದಾನ ನೀಡುವುದಲ್ಲದೇ, ಸಾಕಷ್ಟು ಸೌಲಭ್ಯಗಳು ಇವೆ. ಖಾಸಗಿ ವಿವಿಗಳಲ್ಲಿ ಬಂಡವಾಳ ಸಾಕಷ್ಟಿದ್ದು, ಸಂಪನ್ಮೂಲ ಕೊರತೆ ಇರುವುದಿಲ್ಲ.

ಆದರೆ ಇವೆರೆಡರ ಮಧ್ಯೆ ರಾಜ್ಯ ವಿವಿಗಳು ತಬ್ಬಲಿಯಾಗಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸಮರ್ಪಕ ಅನುದಾನ ಹಾಗೂ ಸೌಲಭ್ಯಗಳಿಲ್ಲದೇ ಸಮಸ್ಯೆ ಎದುರಿಸುತ್ತಿದ್ದು, ಕೇಂದ್ರೀಯ ಮತ್ತು ಖಾಸಗಿ ವಿವಿಗಳ ಜೊತೆ ಸಮನಾಗಿ ಸ್ಪರ್ಧೆಗೆ ಇಳಿಯಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

Bhairathi Ranagal Trailer: ʼರೋಣಪುರʼದ ರಣ ಬೇಟೆಗಾರ ಈ ʼಭೈರತಿ ರಣಗಲ್ʼ; ಟ್ರೇಲರ್‌ ಔಟ್

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್‌ ಐಆರ್‌ ದಾಖಲು-HDK ಎ1

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

4(1)

Mudbidri: ರಸ್ತೆಯಲ್ಲೆಲ್ಲ ಹೊಂಡಗಳು ಸಾರ್‌ ಹೊಂಡಗಳು!

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

Anthamthana Kannada Movie: ಶೂಟಿಂಗ್‌ನತ್ತ ಅಣ್ತಮ್ತನ

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

3

Mangaluru: ಬೇಕು ಇಂದೋರ್‌ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.