ಗ್ರಾಪಂನಲ್ಲಿ ಗೆದ್ದು ಕಾಂಗ್ರೆಸ್ ಬಲಪಡಿಸಿ: ಧ್ರುವ
Team Udayavani, Dec 13, 2020, 7:13 PM IST
ನಂಜನಗೂಡು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದು ಪಕ್ಷದ ಅಡಿಪಾಯ ಭದ್ರಗೊಳಿಸುವುದರ ಜೊತೆಗೆ ನೀವು ಕೂಡ ಬಲಿಷ್ಠರಾಗಿ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ ಮನವಿ ಮಾಡಿದರು.
ನಗರದ ಕನಕ ಭವನದಲ್ಲಿ ಶನಿವಾರ ನಡೆದ ವರುಣಾವಿಧಾನಸಭಾ ಕ್ಷೇತ್ರದ ಗ್ರಾಮ ಜನಾಧಿಕಾರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಯಾ ಗ್ರಾಮದ ಜನತೆ ಒಂದಾಗಿ ಚರ್ಚಿಸಿ ಮಿಸಲಾತಿಯ ಆಧಾರದಲ್ಲಿ ಅಭ್ಯರ್ಥಿಗಳಾಗಿರುವ ನಿಮ್ಮ ಬೆಂಬಲಕ್ಕೆ ನಾವಿದ್ದೇವೆ. ಯಾವುದೇ ಕಾರಣಕ್ಕೂ ನಿಮ್ಮ ನಿಮ್ಮಲ್ಲಿ ಪೈಪೋಟಿ ಆಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ನೀವು ಅಧಿಕಾರ ಪಡೆದರೆ ಮಾತ್ರ ಪಕ್ಷದ ಅಧಿಕಾರದ ಹಾದಿ ಸುಲಭವಾಗಲಿದೆ. ಬಿಜೆಪಿ ಸರ್ಕಾರವು ವರುಣಾ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುವ ಬದಲು ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರು ಆಗಿದ್ದ ಅನುದಾನವನ್ನೂ ವಾಪಸ್ ಪಡೆದಿದೆ. ಬಿಜೆಪಿ ಅಧಿಕಾರದಲ್ಲಿ ಮುಂದುವರಿದರೆ ಈಗಾಗಲೆ 10 ಕೆಜಿಯಿಂದ 5ಕ್ಕೆ ಇಳಿದಿರುವಪಡಿತರಅಕ್ಕಿ ಸಂಪೂರ್ಣವಾಗಿ ಸ್ಥಗಿತವಾಗುವ ಸಾಧ್ಯತೆ ಇದೆ.ಈ ಜನ ವಿರೋಧಿ ಧೋರಣೆಯನ್ನು ಗ್ರಾಮಾಣ ಜನತೆಗೆ ತಿಳಿಸುವುದೇ ನಮ್ಮ ನೀತಿಯಾಗಬೇಕು ಎಂದರು.
ಜೆಡಿಎಸ್ ದುರ್ಬಲ: ಜಿಲ್ಲಾಧ್ಯಕ್ಷ ವಿಜಯ ಕುಮಾರ್, ಜೆಡಿಎಸ್ ದುರ್ಬಲವಾಗಿರುವ ಈ ಭಾಗದಲ್ಲಿ ಬಿಜೆಪಿ ನಮಗೆ ಲೆಕ್ಕಕ್ಕಿಲ್ಲ. ಆದರೂ ನಾವು ಎಚ್ಚರಿಕೆವಹಿಸಬೇಕು ಎಂದರು. ಸಮಾವೇಶದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯಧರ್ಮಸೇನಾ, ಮಾಜಿ ಶಾಸಕ ಕಳಲೆ ಕೇಶವ ಮೂರ್ತಿ, ಮುಖಂಡರಾದ ಎಸ್.ಸಿ.ಬಸವರಾಜು, ಬಿ.ಎಂ.ರಾಮು, ಮಾರುತಿ, ಗುರುಪಾದಸ್ವಾಮಿ, ನಂಜಪ್ಪ, ತಗಡೂರು ಬ್ಲಾಕ್ ಅಧ್ಯಕ್ಷ ರಂಗಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ಯೋಗಾನರಸಿಂಹಸ್ವಾಮಿ ದೇಗುಲದಲ್ಲಿ ಭಕ್ತರಿಗೆ 2 ಲಕ್ಷ ಲಡ್ಡು ವಿತರಣೆ
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ
Hunsur: ಹುತಾತ್ಮ ಧಿವಿನ್ ಅಂತಿಮ ದರ್ಶನ ಪಡೆದ ಗ್ರಾಮಸ್ಥರು
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.