ಗ್ರ್ಯಾಂಡ್ ಮಾಸ್ಟರ್ ತೇಜ್‌ಕುಮಾರ್‌ಗೆ ಪ್ರಶಸ್ತಿ
Team Udayavani, Jun 25, 2018, 2:14 PM IST
ಮೈಸೂರು: ನಗರದಲ್ಲಿ ನಡೆದ ಎರಡು ದಿನಗಳ ರಾಜ್ಯಮಟ್ಟದ ಕರ್ನಾಟಕ ರಾಜ್ಯ ಮುಕ್ತ ರ್ಯಾಪಿಡ್ ಚೆಸ್ ಟೂರ್ನಿಯಲ್ಲಿ ಗ್ರ್ಯಾಂಡ್ ಮಾಸ್ಟರ್ ಎಂ.ಎಸ್. ತೇಜ್‌ಕುಮಾರ್ ಪ್ರಶಸ್ತಿ ಮುಡಿಗೇರಿಸಿ ಕೊಂಡಿದ್ದಾರೆ.
ಮೈಸೂರು ಜಿಲ್ಲಾ ಚೆಸ್ ಸಂಸ್ಥೆ ಆಶ್ರಯದಲ್ಲಿ ನಗರದ ಮೈಸೂರು ವಿವಿ ಜಿಮ್‌ಖಾನಾ ಹಾಲ್‌ನಲ್ಲಿ ಭಾನುವಾರ ನಡೆದ ಟೂರ್ನಿಯ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿ ಎಂ.ಡಿ.ಚಿರಂತ್ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಟೂರ್ನಿಯ ಒಂಭತ್ತು ಸುತ್ತುಗಳಲ್ಲಿ ಒಟ್ಟಾರೆ 9 ಪಾಯಿಂಟ್‌ಗಳಿಂದ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾದ ತೇಜ್‌ಕುಮಾರ್, 15 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಪಡೆಯುವಲ್ಲಿ ಯಶಸ್ವಿಯಾದರು. ಉಳಿದಂತೆ 7.5 ಅಂಕಗಳನ್ನು ಪಡೆದ ಓಜಸ್ ಕುಲಕರ್ಣಿ(ದ್ವಿತೀಯ), ಡಿ.ಯಶಸ್(ತೃತೀಯ) ಹಾಗೂ ಎಂ.ಶಿವಾಂತ್(ನಾಲ್ಕನೇ) ಸ್ಥಾನ ಪಡೆದುಕೊಂಡರು.
ಅಲ್ಲದೆ ಟೂರ್ನಿಯಲ್ಲಿ ಬಾಲಕ ಹಾಗೂ ಬಾಲಕಿಯ ವಿಭಾಗದಲ್ಲಿ ನಡೆದ ಯು-7, ಯು-9, ಯು-11, ಯು-13 ಹಾಗೂ ಯು-15 ವಿಭಾಗದ ಸ್ಪರ್ಧಿಗಳಿಗೆ ಪ್ರಶಸ್ತಿ ನೀಡಲಾಯಿತು. ಎರಡು ದಿನಗಳ ಕಾಲ ನಡೆದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಮೈಸೂರು, ಮಂಗಳೂರು, ಶಿವಮೊಗ್ಗ, ಧಾರವಾಡ, ಹಾಸನ ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ 200ಕ್ಕೂ ಹೆಚ್ಚು ಸ್ಪರ್ಧಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.