ಎಪಿಎಂಸಿಗಳ ಸೌಲಭ್ಯಕ್ಕೆ ಅನುದಾನ
Team Udayavani, May 9, 2020, 5:17 AM IST
ಮೈಸೂರು: ರಾಜ್ಯದ ಎಲ್ಲಾ ಎಪಿಎಂಸಿಗೆ ಬೇಕಾದ ಮೂಲ ಸೌಕರ್ಯದೊಂದಿಗೆ ಇನ್ನಿತರ ಅಭಿವೃದ್ಧಿಗೆ 200 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ರೈತರ ಹಿತದೃಷ್ಟಿಯಿಂದ ಹಲವು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ನಗರದ ಬಂಡೀಪಾಳ್ಯ ಎಪಿಎಂಸಿ ಪ್ರಾಂಗಣದಲ್ಲಿ ಧಾನ್ಯವರ್ತಕರ ಸಂಘದಿಂದ ಆರಂಭಿಸಿದ ಭೋಜನ ಮಂದಿರವನ್ನು ರೈತರಿಗೆ ಸ್ವತಃ ಉಪಹಾರ ಬಡಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ರೈತರು, ಗ್ರಾಹಕರು, ವರ್ತಕರು ಉತ್ತಮ ವಾತಾವರಣದಲ್ಲಿ ದವಸ, ಧಾನ್ಯ ಮಾರಾಟ ಮಾಡುವ ಜತೆಗೆ ಬೇಕಾದ ಗೋದಾಮು, ಕೋಲ್ಡ್ ಸ್ಟೋರೇಜ್ ಒದಗಿಸಬೇಕಾಗಿದೆ. ಅದಕ್ಕಾಗಿ ಎಪಿಎಂಸಿಗೆ ಬೇಕಾದ ಸೌಕರ್ಯ ಒದಗಿಸಲು 200 ಕೋಟಿ ನೀಡಲಾಗಿದೆ ಎಂದು ಹೇಳಿದರು.
ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಆರಂಭಿಸಲಾಗಿರುವ ಕ್ಯಾಂಟೀನ್‌ಗಾಗಿ ತಾತ್ಕಾಲಿಕವಾಗಿ ಜಾಗ ನೀಡಲು ಎಪಿಎಂಸಿ ನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ. ಕ್ಯಾಂಟೀನ್‌ನನಿರ್ವಹಣೆ, ಗುಣಮಟ್ಟ ಹಾಗೂ ರೈತರೆಲ್ಲರಿಗೂ ಆಹಾರ ಸಿಗುತ್ತದೆಯೇ ಎಂಬ ಅಂಶವನ್ನು ಕೆಲ ಸಮಯಗಳ ಕಾಲ ನಿಗಾ ವಹಿಸಲಾಗುತ್ತದೆ. ಅವರ ಸೇವೆ ತೃಪ್ತಿಕರವಾಗಿದ್ದರೆ ಜಾಗದ ಖಾಯಂ ಮಂಜೂರಾತಿಗೆ ನಿರ್ಧರಿಸಲಾಗುವುದು ಎಂದರು.
ಚರ್ಚಿಸಿ ನಿರ್ಧಾರ: ಎಪಿಎಂಸಿಗೆ ಹೊಂದಿಕೊಂಡಂತೆ ಇರುವ 8 ಎಕರೆ ಮುಡಾ ಜಾಗ ಕೊಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಡನೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು. ಸಚಿವ ಭೈರತಿ ಬಸವರಾಜ್, ಶಾಸಕ ಜಿ.ಟಿ. ದೇವೇಗೌಡ, ಎಚ್.ವಿ. ರಾಜೀವ್, ಸಂಸದ ಪ್ರತಾಪಸಿಂಹ, ಎಪಿಎಂಸಿ ಅಧ್ಯಕ್ಷ ಆನಂದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.