ಮರಗಳ ಸಂಖ್ಯೆ ಕಡಿಮೆಯಿಂದಾಗಿ ಅಂತರ್ಜಲ ಕುಸಿತ: ಸದ್ಗುರು ವಿಷಾದ

Team Udayavani, Sep 6, 2019, 5:11 AM IST

050919kpn86

ಮೈಸೂರು: ದೇಶದೆಲ್ಲೆಡೆ ಮರಗಳ ಸಂಖ್ಯೆ ಕಡಿಮೆಯಾಗಿದ್ದು, ಭೂಮಿಗೆ ಬಿದ್ದ ಮಳೆ ನೀರು ಹರಿದು ಹೋಗುತ್ತಿರುವ ಪರಿಣಾಮ ಅಂತರ್ಜಲ ಮಟ್ಟ ಕುಸಿದಿದೆ ಎಂದು ಸದ್ಗುರು ಹೇಳಿದರು.

ಗುರುವಾರ ನಗರದ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ನಡೆದ ‘ಕಾವೇರಿ ಕೂಗು’ ಅಭಿಯಾನದಲ್ಲಿ ಮಾತನಾಡಿದ ಅವರು, ಮರಗಳಿಲ್ಲದಿದ್ದರೆ ಮಳೆಯಿಲ್ಲ. ರೈತರಿಗೆ ಆದಾಯವಾಗುವ ರೀತಿಯಲ್ಲಿ ಯೋಜನೆ ರೂಪಿಸಿದರೆ ಮಾತ್ರ ದೇಶದ ಹಸಿರು ಹೊದಿಕೆ ಹೆಚ್ಚಿಸಬಹುದು.

ರೈತರು ತಮ್ಮಿಷ್ಟದ ಮರಗಳನ್ನು ಬೆಳೆದು, ತಮ್ಮಿಷ್ಟದಂತೆ ಕಡಿದು, ಮಾರುಕಟ್ಟೆಯಲ್ಲಿ ಮಾರುವಂತಾಗಬೇಕು. ರೈತನಿಗೆ ಮರ ಬೆಳೆಸುವುದು ಆದಾಯದ ಮೂಲ ಎಂದು ತಿಳಿಸುವ ತನಕ ಅರಣ್ಯ ಕೃಷಿ ಅಸಾಧ್ಯ. ಇದಕ್ಕಾಗಿ ಸರ್ಕಾರ ಸದ್ಯದ ಕಾನೂನನ್ನು ತಿದ್ದುಪಡಿ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಈಗಾಗಲೆ ಸರ್ಕಾರದೊಂದಿಗೆ ಮಾತುಕತೆ ನಡೆದಿದೆ. ಕೆಲವೇ ದಿನಗಳಲ್ಲಿ ಹೊಸ ಕಾನೂನು ಜಾರಿಗೆ ಬರಲಿದೆ ಎಂದರು.

ಬಳಿಕ ಮಾತನಾಡಿದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು, ದೇಶದ ಎಲ್ಲ ನದಿಗಳ ಪಾತ್ರದಲ್ಲಿ ನೀರಿನ ಸಂರಕ್ಷಣೆ ಮಾಡದ ಕಾರಣ ನದಿಗಳು ನಶಿಸುತ್ತಿವೆ. ಇದು ಮುಂದುವರಿದರೆ ಮುಂದಿನ ಪೀಳಿಗೆಗೆ ಜೀವನದಿಗಳನ್ನು ವಿಡಿಯೋಗಳಲ್ಲಿ ತೋರಿಸಬೇಕಾಗಿದೆ ಎಂದರು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿ, ನದಿಯ ಪಾತ್ರಗಳನ್ನು ರಕ್ಷಣೆ ಮಾಡಬೇಕು. ನೀರಿನ ಬಳಕೆಯ ಪ್ರಮಾಣ ಶೇ. 10ರಷ್ಟು ಹೆಚ್ಚಾಗಿದೆ. ನೀರಿನ ಮಿತ ಬಳಕೆಗೆ ಜನರು ಎಚ್ಚರಿಕೆ ವಹಿಸಬೇಕು. ಮರಗಳನ್ನು ನೆಡಬೇಕು. ಇದರಿಂದಾಗಿ ಮಣ್ಣಿನ ಸವಕಳಿಯನ್ನು ತಡೆಯಬಹುದಾಗಿದೆ. ಇದೇ ರೀತಿ ನೇತ್ರಾವತಿ ನದಿ ಉಳಿವಿಗಾಗಿ ಕರೆ ಕೊಡಬೇಕಿದೆ ಎಂದರು.

ಕೊಳ್ಳೇಗಾಲ ಶಾಸಕ ಎನ್‌.ಮಹೇಶ್‌ ಹಾಗೂ ಸಂಸದ ಪ್ರತಾಪ್‌ ಸಿಂಹ ಮಾತನಾಡಿ, ರೈತರು ಅರಣ್ಯ ಕೃಷಿ ಮಾಡುವುದರಿಂದ ಆದಾಯದೊಂದಿಗೆ ನದಿಗಳನ್ನು ರಕ್ಷಿಸ ಬಹುದಾಗಿದೆ. ಹಾಗಾಗಿ, ನದಿಗಳ ರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಇದೇ ಸಂದರ್ಭದಲ್ಲಿ ‘ಉದಯವಾಣಿ’ ಜತೆ ಮಾತನಾಡಿದ ಸದ್ಗುರು, ಸಸಿಗಳನ್ನು ಬೆಳೆಸಿ ರೈತರಿಗೆ ಆರ್ಥಿಕವಾಗಿ ಲಾಭ ಮಾಡಿಕೊಳ್ಳುವುದರ ಜತೆಗೆ ಪರಿಸರ ಮತ್ತು ನದಿಗಳ ಸಂರಕ್ಷಣೆ ಅಭಿಯಾನದ ಉದ್ದೇಶವಾಗಿದೆ. ರೈತರು ಕೂಡ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದು, ಸೆ.4ರಂದು 3.5 ಲಕ್ಷ ಮತ್ತು ಸೆ.5ರಂದು 2.5 ಲಕ್ಷ ಸಸಿಗಳು ದೇಣಿಗೆ ಸಿಕ್ಕಿವೆ. ಈ ಪ್ರಗತಿಯನ್ನು ಗಮನಿಸಿದರೆ ಅಭಿವೃದ್ಧಿ ಖಂಡಿತ. ಇದು ಒಂದು ದಿನದ ಕೆಲಸವಲ್ಲ, 12 ವರ್ಷಗಳ ಕಾಲ ನಡೆಯಲಿರುವ ಸುದೀರ್ಘ‌ ಕೆಲಸವಾಗಿದೆ ಎಂದರು.

32 ನರ್ಸರಿಗಳು ನಮ್ಮ ಬಳಿ ಈಗಾಗಲೇ ಇವೆ. ಇನ್ನುಳಿದಂತೆ 5ರಿಂದ 10 ಸಾವಿರ ರೈತರನ್ನು ನರ್ಸರಿ ಅಭಿವೃದ್ಧಿಗೆ ಬಳಸಲು ತೀರ್ಮಾನಿಸಿದ್ದೇವೆ. ರೈತ ತನ್ನ ನರ್ಸರಿಯಲ್ಲಿ ಬೆಳೆಸಿದ ಸಸಿಗಳನ್ನು ಕೊಳ್ಳದಿದ್ದರೆ ಅವರಿಗೆ ನಷ್ಟವಾಗುವ ಸಾಧ್ಯತೆಯಿದ್ದು, ಮೊದಲಿಗೆ ಹಣ ಸಂಗ್ರಹದ ಕೆಲಸ ಮಾಡುತ್ತಿದ್ದೇವೆ. ನಮ್ಮ ಬಳಿ ಸಂಗ್ರಹವಾಗಿರುವಷ್ಟು ಹಣಕ್ಕೆ ಅನುಗುಣವಾಗಿ ನರ್ಸರಿಗಳ ಅಭಿವೃದ್ಧಿ ಕೆಲಸ ಮಾಡಲಿದ್ದೇವೆ ಎಂದು ಸದ್ಗುರು ಹೇಳಿದರು.

ಸಣ್ಣ ರೈತರಿಗೆ ಟಿಂಬರ್‌ ಬೋರ್ಡ್‌ನಿಂದ ಸಾಕಷ್ಟು ಅನುಕೂಲವಾಗಲಿದೆ. ದೊಡ್ಡ ರೈತರು ಬೆಳೆದ ಮರಗಳನ್ನು ಬೃಹತ್‌ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಶಕ್ತಿ ಇರುತ್ತದೆ. ಸಣ್ಣ ರೈತರಿಗೆ ಇದು ಕಷ್ಟ. ಈ ಕಾರಣದಿಂದ ಟಿಂಬರ್‌ ಬೋರ್ಡ್‌ ನಿಂದ ಮಾರಾಟ ಮಾಡಲು ಅವಕಾಶ ಸಿಗಲಿದೆ. ಟಿಂಬರ್‌ ಬೋರ್ಡ್‌, ಅರಣ್ಯ ಕೃಷಿ ಉತ್ಪನ್ನಗಳ ಮಾರುಕಟ್ಟೆಯ ಮಾರಾಟ, ಸಾಗಾಟ, ಬೆಲೆ ನಿಯಂತ್ರಣ ಸೇರಿದಂತೆ ರೈತಪರ ಕೆಲಸವನ್ನು ಮಾಡಲಿದೆ ಎಂದು ವಿವರಿಸಿದರು.

-ಲೋಕೇಶ್‌ ರಾಮ್‌

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.