ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಗಿಡಮರ ಬೆಳೆಸಿ
Team Udayavani, Sep 8, 2019, 3:00 AM IST
ಮೈಸೂರು: ಇತ್ತೀಚಿನ ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮರಗಳ ಸಂಖ್ಯೆ ಕ್ಷೀಣಿಸುತ್ತಿದ್ದು, ಈ ಬಗ್ಗೆ ಎಲ್ಲರೂ ಗಮನಹರಿಸುವುದು ಅಗತ್ಯವಿದೆ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಶ್ರೀಮನ್ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಶ್ರೀ ಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್, ಶ್ರೀ ವಾಣಿವಿಲಾಸ ಅರಸು ಬಾಲಿಕಾ ಪದವಿಪೂರ್ವ ಮತ್ತು ಮಹಿಳಾ ಪ್ರಥಮ ದರ್ಜೆ ಕಾಲೇಜು ವತಿಯಿಂದ ವಾಣಿವಿಲಾಸ ಕಾಲೇಜು ಆವರಣದಲ್ಲಿ ನಡೆದ ಶ್ರೀ ವಾಣಿ ಫೆಸ್ಟ್-2019ರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಷ್ಟ ಸರಿಪಡಿಸಿ: ಪರಿಸರದ ಬಗ್ಗೆ ನಾವು ಹೆಚ್ಚಿನ ಕಾಳಜಿ ವಹಿಸಬೇಕಿದೆ. ನಾಡಿನಲ್ಲಿ ಸಂಭವಿಸುತ್ತಿರುವ ಅತಿವೃಷ್ಟಿ-ಅನಾವೃಷ್ಟಿಯನ್ನು ಹತೋಟಿಗೆ ತರಲು ಹೆಚ್ಚು, ಹೆಚ್ಚು ಗಿಡಗಳನ್ನು ನೆಟ್ಟು ಒಳ್ಳೆಯ ವಾತಾವರಣ ಸೃಷ್ಟಿಸಬೇಕಿದೆ. ಆಗಿರುವ ನಷ್ಟವನ್ನು ಹೇಗೆ ಸರಿಪಡಿಸಬೇಕಿದೆ. ಯಾವ ಕಾರ್ಯಕ್ರಮ ಮಾಡಿದರೂ ಪರಿಸರಕ್ಕೆ ಹಾನಿಯಾಗದಂತೆ ನೋಡಿಕೊಳ್ಳಬೇಕು. ಹಿಂದಿನ ದಿನಗಳಿಗಿಂತ ಇಂದು ಶೇ.80ರಷ್ಟು ಹಸಿರು ಕಡಿಮೆಯಾಗಿದೆ. ರೈತರಿಗೆ ಸಮರ್ಪಕ ನೀರು ಪೂರೈಕೆ ಮಾಡಲಾಗುತ್ತಿಲ್ಲ. ಈ ಕುರಿತು ಎಲ್ಲರೂ ಗಮನಹರಿಸುವುದು ಅಗತ್ಯ ಎಂದರು.
ಮೈಸೂರು ಅಭಿವೃದ್ಧಿ: ಶ್ರೀ ವಾಣಿವಿಲಾಸ ಸನ್ನಿಧಾನ ಅವರು 10 ವರ್ಷ ರೀಜೆಂಟರಾಗಿ ಕಾರ್ಯನಿರ್ವಹಿಸಿದಾಗ ಮೈಸೂರು ಎಷ್ಟೊಂದು ಅಭಿವೃದ್ಧಿಯಾಗಿದೆ. ದಕ್ಷಿಣ ಏಷಿಯಾದಲ್ಲಿ ಮೊದಲ ಬಾರಿ ವಿದ್ಯುತ್ ಬೀದಿದೀಪಗಳು ಬಳಕೆಗೆ ಬಂದಿತು. ಶಿವನಸಮುದ್ರದಲ್ಲಿ ಪ್ರಥಮ ಜಲವಿದ್ಯುತ್ ಸ್ಥಾವರ ನಿರ್ಮಾಣವಾಯಿತು. ನೀರಾವರಿ ಯೋಜನೆಗಳು ರೂಪುಗೊಂಡು ರೈತರಿಗೆ ಸಹಾಯವಾಯಿತು. ಇನ್ನು ಜಯಚಾಮರಾಜೇಂದ್ರ ಒಡೆಯರ್ ಅವರ ಕಾಲದಲ್ಲಿ ಕೈಗಾರಿಕೆ, ಶಿಕ್ಷಣ, ಸಾಹಿತ್ಯ, ಸಂಗೀತ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿಯಾಯಿತು. ಇವರಿಬ್ಬರನ್ನು ನಾವು ಎಂದೆಂದಿಗೂ ನೆನೆಯಬೇಕು ಎಂದು ಹೇಳಿದರು.
ಆಹಾರ ಮಳಿಗೆ: “ವಾಣಿ ಫೆಸ್ಟ್’ನಲ್ಲಿ ವಿದ್ಯಾರ್ಥಿನಿಯರು ವಿವಿಧ ಆಹಾರ ಮಳಿಗೆಗಳನ್ನು ತೆರೆದಿದ್ದರು. ಜೊತೆಗೆ ಮನರಂಜನಾ ಕಾರ್ಯಕ್ರಮಗಳನ್ನು ನಡೆಸಿ ಸಂಭ್ರಮಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಉಪಾಧ್ಯಕ್ಷೆ ಭಾರತಿ ರಾಜೇ ಅರಸ್, ಆಡಳಿತ ಮಂಡಳಿ ಕಾರ್ಯದರ್ಶಿ ಮಹೇಶ್ ಎನ್.ಅರಸ್, ಸಹಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಟ್ರಸ್ಟಿಗಳಾದ ಬಾಲಚಂದ್ರ ರಾಜೇ ಅರಸ್, ಪದ್ಮಶ್ರೀ ಅರಸ್, ಪದವಿ ಕಾಲೇಜಿನ ಡೀನ್ ಮಲ್ಲಿಕಾರ್ಜುನ್, ಪ್ರಾಂಶುಪಾಲರಾದ ಅನಿತಾ ಹಾಗೂ ಭಾಗ್ಯಶ್ರೀ, ಪ್ರೌಢಶಾಲಾ ಮುಖ್ಯಶಿಕ್ಷಕಿ ಅನ್ನಪೂರ್ಣ, ಕಮಲ, ಸರಿತಾ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.