ಪ್ರಮುಖ ಖಾತೆ ನೀಡಲು ಜಿಟಿಡಿ ಬೆಂಬಲಿಗರ ಪ್ರತಿಭಟನೆ
Team Udayavani, Jun 10, 2018, 12:43 PM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರಿಗೆ ಸಚಿವ ಸಂಪುಟದಲ್ಲಿ ಪ್ರಮುಖವಾದ ಖಾತೆ ನೀಡುವಂತೆ ಆಗ್ರಹಿಸಿ ಶಾಸಕರ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಚಿವ ಸಂಪುಟದಲ್ಲಿ ಜಿ.ಟಿ.ದೇವೇಗೌಡ ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಲಾಗುತ್ತಿದೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ನೂರಾರು ಕಾರ್ಯಕರ್ತರು ಶನಿವಾರ ಬೆಳಗ್ಗೆ ವಿಜಯನಗರದ ಸಚಿವರ ನಿವಾಸಕ್ಕೆ ಆಗಮಿಸಿದರು.
ಈ ವೇಳೆ ಜಿ.ಟಿ. ದೇವೇಗೌಡರಿಗೆ ಉನ್ನತ ಶಿಕ್ಷಣ ಖಾತೆ ನೀಡಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಪ್ರಬಲ ಪೈಪೋಟಿ ನೀಡಿ ಸೋಲಿಸಿರುವ ಜಿ.ಟಿ.ದೇವೇಗೌಡರಿಗೆ ಪ್ರಬಲ ಖಾತೆಯನ್ನೇ ನೀಡಬೇಕೆಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶಾಸಕ ಜಿ.ಟಿ.ದೇವೇಗೌಡರಿಗೆ ತಮ್ಮ ಸಂಪುಟದಲ್ಲಿ ಪ್ರಮುಖ ಖಾತೆ ನೀಡುವುದಾಗಿ ಚುನಾವಣಾ ಪ್ರಚಾರದ ವೇಳೆ ಘೋಷಿಸಿದ್ದರು. ಇದೀಗ ಉನ್ನತ ಶಿಕ್ಷಣ ಖಾತೆ ನೀಡಲಾಗಿದೆ. ಇದರಿಂದ ಜನಪರ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ.
ಅಂತಹ ಖಾತೆ ನೀಡುವ ಮೂಲಕ ಜಿ.ಟಿ.ದೇವೇಗೌಡ ಅವರನ್ನು ತುಳಿಯುವ ಪ್ರಯತ್ನ ಮಾಡಲಾಗುತ್ತಿದೆ. ಒಂದೊಮ್ಮೆ ಬೇರೆ ಖಾತೆ ನೀಡದೆ, ಇದೇ ಖಾತೆ ನೀಡಿದರೆ ಜಿ.ಟಿ.ದೇವೇಗೌಡರು ಸಚಿವ ಸ್ಥಾನ ನಿರಾಕರಿಸಿ ಶಾಸಕರಾಗಿಯೇ ಉಳಿದು, ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲಿ ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.
ಪುತ್ರನಿಂದ ಮನವೊಲಿಕೆ: ಬೆಂಬಲಿಗರು -ಜೆಡಿಎಸ್ ಕಾರ್ಯಕರ್ತರ ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಜಿ.ಟಿ.ದೇವೇಗೌಡರ ಪುತ್ರ ಹರೀಶ್‌ಗೌಡ, ಕುಮಾರಸ್ವಾಮಿ ಅವರು 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಬೇಕೆಂಬುದು ನಮ್ಮ ಆಸೆ.
ಹೀಗಾಗಿ ಕುಮಾರಸ್ವಾಮಿ ಅವರ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ. ಹೀಗಾಗಿ ಕಾರ್ಯಕರ್ತರ ಮನವಿಯನ್ನು ಕುಮಾರಸ್ವಾಮಿ ಅವರ ಗಮನಕ್ಕೆ ತರುತ್ತೇವೆ. ಖಾತೆ ವಿಷಯದಲ್ಲಿ ನಮ್ಮ ತಂದೆ ಅಥವಾ ನಮಗೆ ಯಾವುದೇ ಅಸಮಾಧಾನವಿಲ್ಲ. ಈ ಕುರಿತು ನಮ್ಮ ತಂದೆ ಎಲ್ಲೂ ಮಾತನಾಡಿಲ್ಲ.
ಆದ್ದರಿಂದ ಒಂದು ದಿನ ಕಾಲಾವಕಾಶ ನೀಡಿ. ವರಿಷ್ಠರು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು. ಅಲ್ಲಿಯವರೆಗೂ ಯಾವುದೇ ಪ್ರತಿಭಟನೆ ನಡೆಸುವುದು ಬೇಡ ಎಂದು ಮನವೊಲಿಸಿದರು. ಇದಕ್ಕೆ ಸ್ಪಂದಿಸಿದ ಪ್ರತಿಭಟನಾಕಾರರು, ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.