Guarantee Schemes: ಬಿಜೆಪಿ ಆರೋಪಗಳನ್ನು ಸುಳ್ಳು ಎಂದು ಸಾಬೀತುಪಡಿಸಿವೆ: ಸಿದ್ದರಾಮಯ್ಯ
Team Udayavani, Aug 30, 2023, 3:10 PM IST
ಮೈಸೂರು: ವಿರೋಧಪಕ್ಷದ ಎಲ್ಲಾ ಆರೋಪಗಳನ್ನೂ ನಮ್ಮ ಗ್ಯಾರಂಟಿ ಯೋಜನೆಗಳು ಸುಳ್ಳು ಎಂದು ಸಾಬೀತು ಮಾಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಚಾರಿತ್ರಿಕ ಗೃಹಲಕ್ಷ್ಮಿ ಯೋಜನೆಯ ಉದ್ಘಾಟನಾ ಸಂಭ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾವು ಬಡವರ ಪರವಾದ, ಮಧ್ಯಮ ವರ್ಗದವರ ಪರವಾದ ಯೋಜನೆಗಳನ್ನು ರೂಪಿಸಿದಾಗ, ಘೋಷಿಸಿದಾಗ ಬಿಜೆಪಿ ನಾಯಕರು ಇನ್ನಿಲ್ಲದ ಆರೋಪಗಳನ್ನು ಮಾಡಿದರು. ಸುಳ್ಳುಗಳ ಸುರಿಮಳೆ ಸುರಿಸಿದರು. ಸ್ವತಃ ಪ್ರಧಾನಿ ಮೋದಿಯವರೇ ರಾಜ್ಯ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದರು. ಆದರೆ, ಈಗ ಗ್ಯಾರಂಟಿ ಯೋಜನೆಗಳು ಜಾರಿಯಾಗಿವೆ. ಪ್ರತಿದಿನ ಕೋಟಿಗೂ ಅಧಿಕ ಮಂದಿ ಪ್ರತಿ ದಿನ, ಪ್ರತಿ ತಿಂಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆಯುತ್ತಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮಾತುಗಳು ಸುಳ್ಳಾಗಿವೆ ಎಂದು ವಿವರಿಸಿದರು.
ನೂರು ದಿನಗಳ ಸಾಧನೆಯ ಪುಸ್ತಕ ಹೊರಗೆ ತಂದಿದ್ದೇವೆ. ಈ ಪುಸ್ತಕವನ್ನು ಮತ್ತು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟಿದ್ದ ಭರವಸೆಗಳನ್ನು ಪಟ್ಟಿ ಮಾಡಿ ನೋಡಿ. ನಿಮಗೂ “ನುಡಿದಂತೆ ನಡೆದ ನಮ್ಮ ಸರ್ಕಾರದ ಬಗ್ಗೆ ಹೆಮ್ಮೆ ಬರುತ್ತದೆ ಎಂದರು.
ಭಾರತದ ರಾಜಕೀಯ ಇತಿಹಾಸದಲ್ಲೇ ಒಂದೇ ಯೋಜನೆಯಲ್ಲಿ ಇಷ್ಟು ದೊಡ್ಡ ಪ್ರಮಾಣದ ಜನೋಪಯೋಗಿ ಕಾರ್ಯಕ್ರಮ ಜಾರಿ ಆಗಿಲ್ಲ. ಶಕ್ತಿಯೋಜನೆಯಿಂದ 48.5 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ ಅವರಿಗೆಲ್ಲಾ ಸಾವಿರಾರು ರೂಪಾಯಿ ಬಸ್ ಚಾರ್ಜ್ ಉಳಿತಾಯವಾಗಿದೆ.ಅನ್ನಭಾಗ್ಯಕ್ಕೆ ಅಕ್ಕಿ ಕೊಡಲು, ಕನ್ನಡ ನಾಡಿದ ಬಡವರು, ಮಧ್ಯಮ ವರ್ಗದವರು ಊಟ ಮಾಡಲು ಅಕ್ಕಿ ಕೊಡದೆ ಕೇಂದ್ರ ಸರ್ಕಾರ ನಮಗೆ ವಂಚಿಸಿತು. ನಾವು ಅಕ್ಕಿಯ ಬದಲಿಗೆ ಹಣ ಕೊಟ್ಟೆವು ಎಂದು ಹೇಳಿದರು.
ಪ್ರತೀ ದಿನ, ಪ್ರತೀ ತಿಂಗಳು ಕೋಟಿಗೂ ಅಧಿಕ ಕುಟುಂಬಗಳು ನಮ್ಮ ಗ್ಯಾರಂಟಿ ಯೋಜನೆಗಳ ಅನುಕೂಲ ಪಡೆದುಕೊಳ್ಳುತ್ತಿವೆ.ಪ್ರಧಾನ ಮಂತ್ರಿ ಮೋದಿಯವರೇ ನಮ್ಮ ಗ್ಯಾರಂಟಿ ಕಾರ್ಯಕ್ರಮಗಳ ಜಾರಿಯಿಂದ ಬಡವ ಮಧ್ಯಮ ವರ್ಗದವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ದಿವಾಳಿಯಾಗಲಿಲ್ಲ. ದಿವಾಳಿಯಾಗುತ್ತದೆ ಎನ್ನುವ ನಿಮ್ಮ ಮಾತು ಪರಮ ಸುಳ್ಳು ಎನ್ನುವುದು ಸಾಬೀತಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.