ಗುಂಡ್ಲುಪೇಟೆಯಲ್ಲಿ ಗೆಲುವು ನನ್ನದೇ: ಕಾಂಗ್ರೆಸ್‌ನ ಗೀತಾ ವಿಶ್ವಾಸ
Team Udayavani, Apr 11, 2017, 12:59 PM IST
ಮೈಸೂರು: ಕ್ಷೇತ್ರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಪ್ರೀತಿಯನ್ನು ಸಾಬೀತು ಮಾಡಿದ್ದು, ಉಪ ಚುನಾವಣೆಯಲ್ಲಿ ಗೆಲ್ಲುತ್ತೇನೆ ಎಂದು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಗೀತಾ ಮಹದೇವಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನ ಕುವೆಂಪುನಗರದ ತಮ್ಮ ನಿವಾಸದಲ್ಲಿ ಸೋಮವಾರ ಸುದ್ದಿಗಾರ ರೊಂದಿಗೆ ಮಾತನಾಡಿ, ಉಪ ಚುನಾವಣೆ ಹಿನ್ನೆಲೆ ಕ್ಷೇತ್ರದೆಲ್ಲೆಡೆ ನಡೆಸಿದ ಪ್ರಚಾರದ ಸಂದರ್ಭ ದಲ್ಲಿ ಎಲ್ಲಾ ಕಡೆಗಳಲ್ಲಿ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದು, ಇದರಿಂದ ಕಾಂಗ್ರೆಸ್‌ಗೆ ಹೆಚ್ಚಿನ ಲಾಭವಾಗಲಿದೆ.
ಪ್ರಚಾರದ ಸಂದರ್ಭದಲ್ಲಿ ತಾವು ಹೋದಲ್ಲೆಲ್ಲಾ ಜನರು ಹೆಚ್ಚಿನ ಪ್ರೀತಿ ತೋರಿಸಿದ್ದು, ಮತದಾನದ ದಿನದಂದು ಮತ ಹಾಕುವ ಮೂಲಕ ಅದನ್ನು ಸಾಬೀತುಪಡಿಸಿದ್ದಾರೆ. ಆದ್ದರಿಂದ ಉಪ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದರು. ಹೊಸ ಅನುಭವ: ಉಪ ಚುನಾವಣೆಯ ಹಿನ್ನೆಲೆ ಕ್ಷೇತ್ರದೆಲ್ಲೆಡೆ ನಿರಂತರ ಪ್ರಚಾರ ನಡೆಸಿದ್ದು, ಹೊಸ ಅನುಭವ ನೀಡಿದೆ.
ತಮ್ಮ ಯಜಮಾನರು ಇದ್ದಾಗ ಎಂದಿಗೂ ಚುನಾವಣಾ ಪ್ರಚಾರ ಮಾಡಿರಲಿಲ್ಲ. ಎಲ್ಲೆಡೆ ತೆರಳಿ ಪ್ರಚಾರ ನಡೆಸುವುದೇ ಚುನಾವಣೆಯ ಅತ್ಯಂತ ಕಷ್ಟಕರವಾದ ಪ್ರಕ್ರಿಯೆಯಾಗಿದೆ. ಪ್ರಚಾರ ಕಾರ್ಯದ ನಂತರ ನಡೆಯುವುದು ಪರೀಕ್ಷೆಯಾಗಿದ್ದು, ಇದು ಮುಗಿದರೆ ಫಲಿತಾಂಶ ಬಂದ ಹಾಗೆ ಎಂದು ಗೀತಾ ಮಹದೇವಪ್ರಸಾದ್ ಹೇಳಿದರು.
ಮೊಮ್ಮಗನೊಂದಿಗೆ ಆಟವಾಡಿದ ಗೀತಾ
ಕಳೆದ ಕೆಲವು ದಿನಗಳಿಂದ ರಂಗೇರಿಸಿದ್ದ ಉಪಚುನಾವಣೆ ಪ್ರಚಾರ ಕಾರ್ಯದಲ್ಲಿ ಅತ್ಯಂತ ಒತ್ತಡದಲ್ಲಿದ್ದ ಗುಂಡ್ಲುಪೇಟೆ ಕಾಂಗ್ರೆಸ್ ಅಭÂರ್ಥಿ ಡಾ. ಗೀತಾ ಮಹದೇವಪ್ರಸಾದ್, ಚುನಾವಣೆ ಮುಗಿದ ಹಿನ್ನೆಲೆ ಸೋಮವಾರ ಇಡೀ ದಿನ ಕುಟುಂಬಸ್ಥರೊಂದಿಗೆ ಕಾಲಕಳೆದರು.
ಕುವೆಂಪುನಗರದ ತಮ್ಮ ನಿವಾಸದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆದ ಗೀತಾ, ಮೊಮ್ಮಗ ಇಷ್ಟಾರ್ಥ್ ಜತೆಗೆ ಆಟವಾಡುತ್ತಾ, ಸೊಸೆ ವಿದ್ಯಾಗಣೇಶ್ ಅವರೊಂದಿಗೆ ಮಾತುಕತೆ ನಡೆಸುತ್ತಾ ಚುನಾವಣೆಯ ಆಯಾಸ ಹಾಗೂ ಒತ್ತಡಗಳನ್ನು ಮರೆತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.