ಯಡಿಯೂರಪ್ಪ, ವಿಜಯೇಂದ್ರ, ಶ್ರೀನಿವಾಸ ಪ್ರಸಾದ್ ನನಗೆ ಹಣ ಕೊಡಲು ಬಂದಿದ್ದರು: ವಿಶ್ವನಾಥ್
Team Udayavani, Dec 15, 2022, 2:59 PM IST
ಮೈಸೂರು: ಯಡಿಯೂರಪ್ಪ, ಅವರ ಮಗ ವಿಜಯೇಂದ್ರ ಹಾಗು ಶ್ರೀನಿವಾಸಪ್ರಸಾದ್ ಅವರು ನನಗೆ ಹಣ ಕೊಡಲು ಬಂದಿದ್ದರು. ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ಹಣದ ಆಮಿಷ ಒಡ್ಡಿದ್ದರು ಎಂದು ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೊಸ ಬಾಂಬ್ ಸಿಡಿದ್ದಾರೆ.
ಎಷ್ಟು ಹಣ ಕೊಡಲು ಬಂದಿದ್ದರು, ನೀವು ಹಣ ಹಣಪಡೆದುಕೊಂಡಿರಾ ಎಂಬ ಪ್ರಶ್ನೆಗೆ ಸೂಕ್ತ ಉತ್ತರ ನೀಡದೇ, ‘ಈ ಬಗ್ಗೆ ಬಾಂಬೆ ಡೈರೀಸ್ ನೋಡಿ. ಬಾಂಬೆ ಡೈರೀಸ್ ನ ಮೊದಲ ಅಧ್ಯಾಯದಲ್ಲೇ ಈ ವಿಚಾರವಿದೆ ಎಂದು ಕುತೂಹಲ ಹುಟ್ಟುಹಾಕಿದರು.
ನಾನು ಹಾಗು ಶ್ರೀನಿವಾಸಪ್ರಸಾದ್ ಹಳೆಯ ಸ್ನೇಹಿತರು, ಬಹು ಕಾಲದ ಒಡನಾಡಿಗಳು. ಅದೆಲ್ಲವನ್ನು ಮರೆತು ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ರನ್ನು ನಾನು ಭೇಟಿ ಮಾಡಿದ್ದನ್ನೇ ಘೋರ ಅಪರಾಧ ಎಂಬಂತೆ ಶ್ರೀನಿವಾಸಪ್ರಸಾದ್ ಬಿಂಬಿಸುತ್ತಿರುವುದು ಅವರ ವ್ಯಕ್ತಿತ್ವಕ್ಕೆ ಸರಿಯಲ್ಲ. ಯಾರನ್ನು ಮೆಚ್ಚಿಸಲು ನನ್ನ ವಿರುದ್ದ ಮುಗಿಬಿದ್ದಿದ್ದೀರಿ ಎಂದು ತಿರುಗೇಟು ನೀಡಿದರು.
ಇದನ್ನೂ ಓದಿ:ಅಯೋಧ್ಯೆ: ರಾಮಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯ ಸಮರ್ಪಿಸಿದ ರಾಮನಗರದ ಭಕ್ತರು
ಸಂಸತ್ ಸದಸ್ಯರಾಗಿರುವ ನೀವು ನಿಮ್ಮ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನ ನೀಡುವ ಬದಲು ಏಕಾಏಕಿ ನನ್ನ ವಿರುದ್ಧ ಏಕೆ ತಿರುಗಿ ಬಿದ್ದಿದ್ದೀರಿ. ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಿದೆ, ಆ ವೇಳೆ ನಂಜನಗೂಡು ಕ್ಷೇತ್ರದ ಶಾಸಕರಾಗಿರುವ ನಿಮ್ಮ ಅಳಿಯನಿಗೆ ಅವಕಾಶ ಸಿಗಲೆಂದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿ ನರಸೀಪುರ ಕ್ಷೇತ್ರದಲ್ಲಿ ನಿಮ್ಮ ಮಗಳಿಗೆ ಟಿಕೆಟ್ ಸಿಗಲೆಂದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಲ್ಲಿ ನಿಮ್ಮ ಮತ್ತೊಬ್ಬ ಅಳಿಯನಿಗೆ ಟಿಕೆಟ್ ಕೊಡಿಸುವ ಸಲುವಾಗಿ ನನ್ನನ್ನು ಈ ರೀತಿ ಟೀಕಿಸಿದ್ದೀರಾ ಶ್ರೀನಿವಾಸಪ್ರಸಾದ್ ಅವರೇ ಎಂದು ವಿಶ್ವನಾಥ್ ಕುಟುಕಿದರು.
ನೀವು ಹುಟ್ಟಿ ಬೆಳೆದ ಅಶೋಕಪುರಂಗೆ ನಿಮ್ಮ ಕೊಡುಗೆಯಾದರೂ ಏನು? ಯಾರಿಗೋ ಕಲ್ಲು ಹೊಡೆದರೇ ಅದು ಮತ್ತೆ ನಿಮಗೇ ಹೊಡೆಯತ್ತದೇ ಎಂಬುದನ್ನು ಮರೆಯಬೇಡಿ ಶ್ರೀನಿವಾಸಪ್ರಸಾದ್ ಅವರೇ ಎಂದು ವಿಶ್ವನಾಥ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.