ದಾನಿಗಳಿಂದ 250 ಜೀವರಕ್ಷಕ ಕಿಟ್ ಸಂಗ್ರಹ, ಹೆಣದ ಮುಂದೆ ಹಣ ಮಾಡಬೇಡಿ : ಎಂ.ಎಲ್.ಸಿ.ವಿಶ್ವನಾಥ್

Team Udayavani, May 24, 2021, 5:36 PM IST

h Vishwanath Statement on Covid 19 in Mysore

ಹುಣಸೂರು : ಮೊದಲೆಲ್ಲಾ 800 ರೂಗೆ ಸಿಗುತ್ತಿದ್ದ ಆಕ್ಸಿಜನ್ ಸಿಲಿಂಡರ್ ಈಗ 12 ಸಾವಿರಕ್ಕೇರಿದ್ದು, ಹೆಣದ ಮುಂದೆ ಹಣ ಮಾಡಲು ಹೊರಟಿರುವುದು ಬೇಸರದ ಸಂಗತಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದ್ದಾರೆ.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಫೀವರ್ ಕ್ಲೀನಿಕ್ ಕಟ್ಟಡ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ಎಂ.ಎಲ್.ಸಿ.ವಿಶ್ವನಾಥ್ ಮಾದ್ಯಮದವರ ಪ್ರಶ್ನೆಗೆ ಉತ್ತರಿಸಿ ಮಾತನಾಡಿ, ಕೊವಿಡ್ ಮಹಾಮಾರಿ ಎಲ್ಲೆಡೆ ಆವರಿಸಿರುವ ಸಂದರ್ಭದಲ್ಲಿ ದಾನಿಗಳು, ಸ್ನೇಹಿತರನ್ನು ಕೇಳಿದರೆ ಕೊಡುವವರಿದ್ದಾರೆ, ಆದರೆ ಯಾರೋ ಕೊಟ್ಟಿದ್ದನ್ನು ನಾನೆ ಕೊಟ್ಟೆ ಎನ್ನುವುದು ತರವಲ್ಲ. ಕಾರ್ಯಕರ್ತರು ನಮ್ಮ ಲೀಡರ್ ಕೊಟ್ಟಿದ್ದಾರೆಂದು ಬಿಂಬಿಸುವುದೂ ಸರಿಯಲ್ಲ. ಈ ವೇಳೆಯಲ್ಲಿ ಎಲ್ಲವನ್ನೂ ಮರೆಯಬೇಕು, ರಾಜಕಾರಣಿಗಳು, ಅಧಿಕಾರಿಗಳು, ಪೊಲೀಸ್ ಒಂದಾಗಿ ಸಂಕಷ್ಟಕ್ಕೊಳಗಾದವರ ನೆರವಿಗೆ ನಿಲ್ಲಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : 2019ರ ನವೆಂಬರ್ ನಲ್ಲಿಯೇ ಚೀನಾದ WIV ನ ಸಂಶೋಧಕರು ಹಾಸ್ಪಿಟಲ್ ಕೇರ್ ಕೋರಿದ್ದರು.! : WSJ

ಹಿಂದೆ ಸಾವಿರಕ್ಕೆ ಸಿಗುತ್ತಿದ್ದ ಒಂದು ಆಕ್ಸಿಜನ್ ಸಿಲೆಂಡರ್ ಕೋವಿಡ್ ಆರಂಭದಲ್ಲಿ ೧೨೦೦ಕ್ಕೇರಿತ್ತು. ಈಗ ೧೨ ಸಾವಿರ ನಿಗದಿ ಮಾಡಿದೆ. ಬಡವರ ಕಷ್ಟದಲ್ಲಿ ನೆರವಾಗಬೇಕೇ ವಿನಹ, ಯಾರೇ ಆಗಲಿ ಹೆಣದ ಮುಂದೆ ದುಡ್ಡು ಮಾಡೋದನ್ನು ನಿಲ್ಲಿಸಬೇಕೆಂದರು.

250 ಔಷಧ ಕಿಟ್ ವಿತರಣೆ:

ದೆಹಲಿಯಲ್ಲಿ ಸಂದೇಶ್ ಫಾರ್ಮಿಕಲ್ಸ್ ಹೊಂದಿರುವ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಸಂದೇಶ್‌, ತಾಲೂಕಿನ ಕೋವಿಡ್ ಸೋಂಕಿನಿಂದ ಹೋಂ ಐಸ್ಯೂಲೇಷನ್‌ ಗೊಳಗಾದವರಿಗಾಗಿ 250 ಜೀವರಕ್ಷಕ ಔಷಧ ಕಿಟ್ಟನ್ನು ಕೊಡುಗೆಯಾಗಿ ನೀಡುತ್ತಿದ್ದು. ಇದರಲ್ಲಿ ಕೊಯಮುತ್ತೂರು ಕಾಲೋನಿಯ ಕೆಲ ಸೋಂಕಿತರಿಗೆ ವಿತರಿಸಿ, ಉಳಿದವನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸಲಾಗುವುದೆಂದರು.

ಆದಿವಾಸಿಗಳಿಗೆ ಪಡಿತರ:

ತಾಲೂಕಿನ ಸುಮಾರು ಆರು ಸಾವಿರ ಆದಿವಾಸಿ ಕುಟುಂಬಗಳಿಗೆ ಹಾಗೂ ಆಶ್ರಮ ಶಾಲೆ ಮಕ್ಕಳಿಗೂ ಸರಕಾರದ ವತಿಯಿಂದಲೇ ಪ್ರತ್ಯೇಕ ಪಡಿತರ ವಿತರಿಸಲಾಗುತ್ತಿದೆ. ಇದೇ ಮಾದರಿಯಲ್ಲಿ ಜಿಲ್ಲಾದ್ಯಂತ ಆದಿವಾಸಿಗಳಿಗೆ ಕಿಟ್ ವಿತರಣೆಯಾಗುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಆದಿವಾಸಿಗಳು ಗೆಡ್ಡೆ-ಗೆಣಸು ಕಿತ್ತು ರಾಶಿಹಾಕಿರುವ ಬಗ್ಗೆ ವ್ಯಾಪಕ ಪ್ರಚಾರವಾಗುತ್ತಿರುವುದು ಬೇಸರದ ಸಂಗತಿ, ಈ ಬಗ್ಗೆ ಸುಖಾಸುಮ್ಮನೆ ಪ್ರಚಾರ ನೀಡಬಾರದೆಂದು ಮನವಿ ಮಾಡಿದರು.

ಸಮಾಜಾಯಿಷಿ ನೀಡಿದ ತಹಸೀಲ್ದಾರ್ ಬಸವರಾಜು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕಳೆದ ವರ್ಷದ್ದೆಂದು ಮಾಹಿತಿ ಪಡೆಯಲಾಗಿದೆ. ಆದರೆ ತಮಗೂ ವರ್ಷದ ಪಡಿತರ ಜೊತೆಗೆ ಹತ್ತು ಸಾವಿರ ರೂ ಪ್ಯಾಕೇಜ್ ಘೋಷಣೆ ಮಾಡಬೇಕು, ಅರಣ್ಯಹಕ್ಕು ಮಾನ್ಯತಾ ಕಾಯ್ದೆ ಜಾರಿಗೊಳಿಸಿಕೊಡಬೇಕೆಂದು ನ್ಯಾಯಾಧೀಶರೊಂದಿಗೆ ನೇರಳಕುಪ್ಪೆ ಹಾಡಿಗೆ ಭೇಟಿ ನೀಡಿದ್ದ ವೇಳೆ ಆದಿವಾಸಿಗಳು ಮನವಿ ಮಾಡಿದ್ದಾರೆ. ಈಗಾಗಲೆ ತಾಲೂಕಿನಾದ್ಯಂತ ಆದಿವಾಸಿಗಳಿಗೆ ಹಾಗೂ ಆಶ್ರಮ ಶಾಲಾ ಮಕ್ಕಳಿಗೆ ಪಡಿತರ ವಿತರಣೆಯಾಗುತ್ತಿದೆ ಎಂದರು.

ಎಂ.ಎಲ್.ಸಿ.ಯವರೊಂದಿಗೆ ತಾಲೂಕು ಬಿಜೆಪಿ ಅಧ್ಯಕ್ಷ ಹಳ್ಳದಕೊಪ್ಪಲುನಾಗಣ್ಣ, ಮಹಿಳಾ ಅಧ್ಯಕ್ಷೆ ಕಮಲಾಪ್ರಕಾಶ್, ನಗರಸಭೆ ಸದಸ್ಯರಾದ ಹರೀಶ್, ಸಾಯಿನಾಥ್, ಉಮೇಶ್, ಶ್ರೀನಿವಾಸ್, ರಮೇಶ್, ಮಾಜಿ ಅಧ್ಯಕ್ಷ ಶಿವಕುಮಾರ್, ಮುಖಂಡರಾದ ಹಳ್ಳಿಮನೆ ಸಂದೇಶ್(ಸ್ಯಾಂಡಿ), ಡಾ. ಶ್ರೀಕಾಂತ್, ಇಂಟೆಕ್‌ರಾಜು, ನಿಂಗರಾಜ್‌ ಮಲ್ಲಾಡಿ, ಬಲ್ಲೇನಹಳ್ಳಿ ಕೆಂಪರಾಜ್ ಇದ್ದರು.

ಇದನ್ನೂ ಓದಿ :  ಕೋವಿಡ್ ನಿಯಮದಿಂದ ತಪ್ಪಿಸಿಕೊಳ್ಳಲು ವಿಮಾನದಲ್ಲಿ ಮದುವೆ; ವೈರಲ್ ವಿಡಿಯೋದಿಂದ ತನಿಖೆಯ ಬಿಸಿ!

ಟಾಪ್ ನ್ಯೂಸ್

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಶಿಕ್ಷಣ ಸಚಿವರ ಮನವಿ

ಮಕ್ಕಳನ್ನು ಶಾಲೆಗೆ‌ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.