ಹುಣಸೂರು ಹಲವೆಡೆ ಆಲಿಕಲ್ಲು ಮಳೆ


Team Udayavani, Apr 14, 2018, 12:51 PM IST

m3-hunasuru.jpg

ಹುಣಸೂರು: ತಾಲೂಕಿನ ಕೆಲವೆಡೆಗಳಲ್ಲಿ ಗುರುವಾರ ರಾತ್ರಿ ಗುಡುಗು, ಸಿಡಿಲು, ಬಿರುಗಾಳಿ ಸಹಿತ ಬಿದ್ದ ಆಲಿಕಲ್ಲು ಮಳೆಗೆ ತಾಲೂಕಿನ ಗಾವಡಗೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ಹಾನಿಯಾಗಿದೆ. 

ತಾಲೂಕಿನ ಗಾವಡಗೆರೆ ಹೋಬಳಿಯ ಮೋದೂರು, ಹಿರಿಕ್ಯಾತನಹಳ್ಳಿ, ಚಿಟ್ಟಕ್ಯಾತನಹಳ್ಳಿಯಲ್ಲಿ 30ಕ್ಕೂ ಹೆಚ್ಚು ಮನೆಗಳ ಚಾವಣೆ ಹಾರಿಹೋಗಿದೆ. ಜಮೀನನಲ್ಲಿದ್ದ ಮರಗಳು ಧರೆಗುರುಳಿದ್ದು, ತಂಬಾಕು ಸಸಿ ಮಡಿಗಳು ನಾಶವಾಗಿವೆ. ಲಕ್ಷಾಂತರ ರೂ. ನಷ್ಟ ಉಂಟಾಗಿದೆ.

ಮೋದೂರು ಗ್ರಾಪಂ ವ್ಯಾಪ್ತಿಯ ಮೋದೂರು ಎಂ.ಕೊಪ್ಪಲು ಗ್ರಾಮದಲ್ಲಿ ಮಳೆ ಮತ್ತು ಬಿರುಗಾಳಿಯ ಅನಾಹುತಕ್ಕೆ 25ಕ್ಕೂ ಹೆಚ್ಚು ಮನೆಗಳು ಜಖಂಗೊಂಡಿವೆ. ಮನೆಗಳ ಚಾವಣಿಯ ಕಲಾ°ರ್‌ ಶೀಟ್‌ಗಳು-ಹೆಂಚು ಬಿರುಗಾಳಿಯ ರಭಸಕ್ಕೆ ಹಾರಿಹೋಗಿವೆ. ಇನ್ನು ಕೆಲವು ಮನೆಗಳ ಹೆಂಚುಗಳು ಪುಡಿಪುಡಿಯಾಗಿ ಬಿದ್ದಿವೆ. ಮರೀಗೌಡರ ಮನೆ ಸಂಪೂರ್ಣ ಕುಸಿದಿದ್ದು, ಸೂರಿಲ್ಲದೆ ಸಂಕಷ್ಟದ ಸ್ಥಿತಿ ಎದುರಿಸುತ್ತಿದ್ದಾರೆ.

ಎಲ್ಲೆಲ್ಲಿ ಹಾನಿ: ಮೋದೂರು ಎಂ.ಕೊಪ್ಪಲು ಗ್ರಾಮದ ಕೃಷ್ಣಾಚಾರಿ, ಲೋಕೇಶ್‌, ರಾಮಕೃಷ್ಣ, ಕರೀಗೌಡ, ಶೇಖರ್‌, ಕಾಳಮ್ಮ, ಸಣ್ಣರಾಮೇಗೌಡ, ರಾಜೇಗೌಡ, ರವಿಕುಮಾರ್‌, ಮರೀಗೌಡ, ಬೋರೇಗೌಡ, ಬೀಡೀಗೌಡ, ಎಸ್‌.ಸ್ವಾಮಿ, ನಿಂಗೇಗೌಡ, ಹಾಳೇಗೌಡರ ಮನೆಗಳು ಜಖಂಗೊಂಡಿದ್ದರೆ, ಶಂಷಾದ್‌ ಅವರ ಮನೆಯ ಗೋಡೆ ಕುಸಿದಿದೆ.

ಹಿರೀಕ್ಯಾತನಹಳ್ಳಿಯ ಚಿಕ್ಕಮ್ಮನವರ ಮನೆ, ಚಿಟ್ಟಕ್ಯಾತನಹಳ್ಳಿಯಲ್ಲಿ ಯಶೋದಾ ಮತ್ತು ಮಂಜುಳಾರ ಮನೆಗಳು ಹಾನಿಗೀಡಾಗಿದ್ದು, ಮಂಜುಳಾರ ಮನೆ ಗೋಡೆ ನೆಲಕ್ಕಚ್ಚಿದೆ. ಮರೂರಿನ ತಗಾಯಮ್ಮನವರ ಮನೆ ಹೆಚ್ಚು ಹಾನಿಗೊಳಗಾಗಿದೆ. ಗ್ರಾಮದ ಜಮೀನಿನಲ್ಲಿ ಹಾಗೂ ಮನೆಗಳ ಬಳಿ ಹಾಕಿಕೊಂಡಿದ್ದ ನುಗ್ಗೇಮರ, ಚಾಲಿಮರ, ಬಿಳಿಜಾಲಮರ, ಹುಣಸೆ, ಹಲಸಿನ ಮರಗಳು ನೆಲಕ್ಕಚ್ಚಿವೆ. ತಂಬಾಕು ಸಸಿಮಡಿಗಳು ಮರಬಿದ್ದ ಪರಿಣಾಮ ಸಂಪೂರ್ಣ ನಾಶವಾಗಿದೆ.

ಅಧಿಕಾರಿಗಳ ಭೇಟಿ: ಹಾನಿಗೀಡಾದ ಪ್ರದೇಶಗಳಿಗೆ ಗ್ರಾಮಲೆಕ್ಕಾಧಿಕಾರಿಗಳಾದ ಪಯೋನಿ, ನಾಗರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಹಜರ್‌ ನಡೆಸಿದ್ದಾರೆ. ಪರ್ಯಾಯ ವ್ಯವಸ್ಥೆ ಕಲ್ಪಿಸಿ: ಚಾವಣಿ ಹಾರಿ ಹೋಗಿ ನಿರಾಶ್ರಿತರಾಗಿರುವ ಕುಟುಂಬಗಳಿಗೆ ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕು, ಸೂಕ್ತ ಪರಿಹಾರ ನೀಡುವಂತೆ ನೊಂದ ಕುಟುಂಬಗಳು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.