ಜೆಡಿಎಸ್‌ನ 7 ಬಂಡಾಯ ಶಾಸಕರಿಗೆ ಕೈ ಟಿಕೆಟ್
Team Udayavani, May 9, 2017, 3:45 AM IST
ಮೈಸೂರು/ಮಂಡ್ಯ: ಜೆಡಿಎಸ್‌ನ ಏಳು ಬಂಡಾಯ ಶಾಸಕರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದಲೇ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಡ್ಯ ತಾಲೂಕಿನ ಕೋಡಿಕೊಪ್ಪಲು ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಜೆಡಿಎಸ್‌ನ ಎಲ್ಲಾ 7 ಬಂಡಾಯ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಲಾಗುವುದು. ಎಲ್ಲರಿಗೂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದಲೇ ಟಿಕೆಟ್ ನೀಡಲಾಗುವುದು ಎಂದು ಘೋಷಿಸಿದರು.
ಬಳಿಕ, ಮೈಸೂರಿನಲ್ಲಿ ಮಾತನಾಡಿದ ಸಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದರು. ಸಚಿವ ತನ್ವೀರ್‌ಸೇs…, ಎಂ.ಕೃಷ್ಣಪ್ಪವಿರುದ್ಧ ಯಾರೋ ಆರೋಪ ಮಾಡಿದಾಕ್ಷಣ ಅವರು ಭ್ರಷ್ಟರಾಗುವುದಿಲ್ಲ. ಇಷ್ಟಕ್ಕೂ ಭ್ರಷ್ಟಾಚಾರದ ವಿರುದ್ಧ ಮಾತನಾಡಲು ಬಿಜೆಪಿ ನಾಯಕರಿಗೆ ಯಾವ ನೈತಿಕತೆ ಇದೆ. ಬಿಜೆಪಿ ಆಡಳಿತಾವಧಿಯಲ್ಲಿ ಭ್ರಷ್ಟಾಚಾರ ಮಾಡಿ ಎಷ್ಟು ಜನ ಜೈಲಿಗೆ ಹೋಗಿದ್ದರು ಎಂದು ಪ್ರಶ್ನಿಸಿದರು.
ಅಂಬರೀಶ್‌ಗೆ ಕಮಲಮ್ಮನ ಜೈಕಾರ
ಅಂಬರೀಶ್ ಹಾಜರಾಗುವ ಕಡೆಗಳಲ್ಲೆಲ್ಲಾ ಈ ಮಹಿಳೆ ಇದ್ದೇ ಇರುತ್ತಾರೆ. ಕೈಯ್ಯಲ್ಲೊಂದು ಹಾರ ಹಿಡಿದು ಬಂದು ಎಂತಹ ಜನಸಾಗರವಿದ್ದರೂ ಅದನ್ನು ಬೇಧಿಸಿಕೊಂಡು ಹೋಗಿ ಅಂಬರೀಶ್‌ಗೆ ಹಾರ ಹಾಕಿ ಆಶೀರ್ವಾದ ಪಡೆದು ಬರುವುದು ಈಕೆಯ ಸಂಪ್ರದಾಯ. ಅದರಂತೆ ಮಂಡ್ಯ ತಾಲೂಕಿನ ಕೋಡಿಕೊಪ್ಪಲು ಗ್ರಾಮದಲ್ಲಿ ಬೀರೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಕಮಲಾ, ಹಾರ ಹಾಕಲು ಅವಕಾಶ ಕೋರಿದರು. ಅದಕ್ಕೆ ಸಮ್ಮತಿಸಿದ ಅಂಬರೀಶ್, “ಕಮಲಮ್ಮ ಬಾರಮ್ಮ’ ಎಂದು ವೇದಿಕೆಗೆ ಕರೆದರು. ವೇದಿಕೆಗೆ ಬಂದ ಕಮಲಮ್ಮ, ಮೊದಲು ಅಂಬರೀಶ್‌ಗೆ ಹಾರ ಹಾಕಿ ಆಶೀರ್ವಾದ ಪಡೆದು “ಮಂಡ್ಯದ ಹುಲಿ’ಗೆ ಜೈ, ಅಂಬರೀಶಣ್ಣಂಗೆ ಜೈ’ ಎಂದು ಘೋಷಣೆ ಕೂಗಿದರು. “ನನಗೆ ಜೈಕಾರ ಹಾಕಿದ್ದು ಸಾಕು, ಹೋಗಿ ಸಿಎಂಗೆ ಹಾರ ಹಾಕು’ ಎಂದಾಗ, ಮುಖ್ಯಮಂತ್ರಿ ಬಳಿ ತೆರಳಿ ಅವರಿಗೂ ಹಾರ ಹಾಕುವ ಮೂಲಕ ಮನದಾಸೆ ಈಡೇರಿಸಿಕೊಂಡರು.
ಜೆಡಿಎಸ್‌ನಿಂದ ಸ್ಪರ್ಧಿಸಲ್ಲ: ಚಲುವರಾಯಸ್ವಾಮಿ
ಮಂಡ್ಯ: ಮುಂಬರುವ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಲ್ಲ. ಜೆಡಿಎಸ್ ವರಿಷ್ಠರು ತಮ್ಮನ್ನು ಈಗಾಗಲೇ ಅಮಾನತು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಮ್ಮ ನಾಯಕರು ಎಂದು ಬಂಡಾಯ ಶಾಸಕ ಎನ್.ಚಲುವರಾಯಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ನಾಗಮಂಗಲ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ. ಬೇರೆ ಕಡೆ ಹೋಗಲ್ಲ. ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನೀಡುತ್ತಿದ್ದು, ಅವರು ಮತ್ತೂಮ್ಮೆ ಮುಖ್ಯಮಂತ್ರಿಯಾದರೆ ಈ ರಾಜ್ಯ ಸುಭೀಕ್ಷವಾಗಿರುತ್ತದೆ ಎಂದರು.
ಯಾರೂ ಕಾಂಗ್ರೆಸ್ ಬಿಡಲ್ಲ
ಮೈಸೂರು: “ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ಸೇರುವ ವಿಚಾರ ನನಗೆ ಗೊತ್ತಿಲ್ಲ. ಆದರೆ, ರಾಜ್ಯದ ಯಾವ ನಾಯಕರೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ’ ಎಂದು ಸಿದ್ದರಾಮಯ್ಯ ತಿಳಿಸಿದರು.
ದುಬೈ ಪ್ರವಾಸದಿಂದ ಬಂದ ನಂತರ ವಿಶ್ವನಾಥ್ ಜತೆ ಮಾತನಾಡುವುದಾಗಿ ಕುರುಬರ ಸಂಘದ ನಿಯೋಗಕ್ಕೆ ಭರವಸೆ ನೀಡಿದ್ದೀರಲ್ಲಾ ಎಂಬ ಪ್ರಶ್ನೆಗೆ, “ಯಾರು ಹೇಳಿದವರು? ನಾನು ಯಾರ ಜತೆಯೂ ಮಾತನಾಡಿಲ್ಲ’ ಎಂದರು.
ಸಿಎಂ ಸಭೆಗೆ ಹೋಗದಂತೆ ದಲಿತ ಮುಖಂಡರ ತಡೆ
ಕೆ.ಆರ್.ಪೇಟೆ: ಮಂಡ್ಯ ಜಿಲ್ಲೆಯ ಬಸರಾಳು ಗ್ರಾಮದಲ್ಲಿ ಸೋಮವಾರ ಆಯೋಜಿಸಿದ್ದ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ತಾಲೂಕು ದಲಿತ ಸಂಘಟನೆಯ ಮುಖಂಡರನ್ನು ಪಟ್ಟಣ ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು. ಸಿಎಂ ಸಭೆಯಲ್ಲಿ ದಸಂಸ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಬಹುದೆಂಬ ಮಾಹಿತಿ ಮೇರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಈ ಕ್ರಮ ಕೈಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.