ಹುಣಸೂರಿನಲಿ ಸರಳ ಹನುಮ ಜಯಂತಿ


Team Udayavani, Dec 28, 2020, 5:54 PM IST

ಹುಣಸೂರಿನಲಿ ಸರಳ ಹನುಮ ಜಯಂತಿ

ಹುಣಸೂರು: ರಾಜ್ಯಾದ್ಯಂತ ಹೆಸರು ಮಾಡಿದ್ದ ಹುಣಸೂರು ಹನುಮ ಜಯಂತಿಯನ್ನು ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಸ್ವಾಮೀಜಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಪೂಜಾಕಾರ್ಯದಲ್ಲಿ ಸಮಿತಿ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.

ನಗರದ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಮುಂಜಾನೆಯಿಂದಲೇ ಹನುಮ ಯಜ್ಞ ನಡೆಸಲಾಯಿತು. ದೇವಾಲಯದಲ್ಲಿ ಮಾದಹಳ್ಳಿಯ ಸಾಂಬಸದಾಶಿವ ಸ್ವಾಮೀಜಿ, ಗಾವಡಗೆರೆ ನಟರಾಜಸ್ವಾಮೀಜಿ ಸಾನ್ನಿಧ್ಯದಲ್ಲಿಅಭಿಷೇಕ, ವಿಶೇಷ ಪೂಜೆ ನಡೆಸಲಾಯಿತು. ಈ ವೇಳೆ ಶಾಸಕರಾದ ಎಚ್‌.ಪಿ.ಮಂಜುನಾಥ್‌, ಎಚ್‌. ವಿಶ್ವನಾಥ್‌, ಸಂಸದ ಪ್ರತಾಪಸಿಂಹ, ಹನುಮಂತೋತ್ಸವ ಸಮಿತಿ ಗೌರವಾಧ್ಯಕ್ಷ ಯೋಗಾನಂದಕುಮಾರ್‌, ಅಧ್ಯಕ್ಷ ವಿ.ಎನ್‌.ದಾಸ್‌ ಭಾಗವಹಿಸಿದ್ದರು.

ನಂತರ ಅಲಂಕೃತ ಪಲ್ಲಕ್ಕಿಯಲ್ಲಿರಿಸಿದ್ದ ಪಂಚಲೋಹದ ಆಂಜನೇಯ, ಶ್ರೀ ರಾಮಲಕ್ಷ್ಮಣ ಸೀತಾ ಸಮೇತ ಆಂಜನೇಯ ಉತ್ಸವ ಮೂರ್ತಿಯನ್ನು ದೇವಾಲಯದ ಆವರಣದಲ್ಲಿ ಪ್ರದಕ್ಷಿಣೆ ಹಾಕಿದರು. ಈ ವೇಳೆ ಮಾತನಾಡಿದ ಸಂಸದ ಪ್ರತಾಪಸಿಂಹ, ಹಿಂದಿನ ಹನುಮಂತೋತ್ಸವದ ವೇಳೆ ಜರುಗಿದ ಘಟನೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಕರಣಗಳನ್ನು ಸರ್ಕಾರ ಹಿಂಪಡೆದಿದೆ. ಎಲ್ಲಾ ರಸ್ತೆಗಳಲ್ಲಿಮೆರವಣಿಗೆ ನಡೆಸಲು ಅನುಮತಿ ನೀಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದ್ದು, ಮುಂದೆ ವಿಜೃಭಣೆಯಿಂದ ಮೆರವಣಿಗೆ ನಡೆಸಲಾಗುವುದು ಎಂದರು.

ಶಾಸಕ ಎಚ್‌.ಪಿ.ಮಂಜುನಾಥ್‌ ಮಾತನಾಡಿ, ಕೋವಿಡ್‌ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದ್ದು, ಮುಂದೆ  ಪಕ್ಷಾತೀತವಾಗಿಎಲ್ಲರೊಡಗೂಡಿ ಅದ್ಧೂರಿಯಾಗಿ ಆಚರಿಸೋಣ. ತಾಲೂಕಿನ ಜನತೆ ಕೊರೊನಾ ಮತ್ತಷ್ಟು ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು. ಈ ವೇಳೆ ರಾಮಸೇನೆ ಜಿಲ್ಲಾಧ್ಯಕ್ಷ ಅನಿಲ್‌ ಕುಮಾರ್‌, ತಾಲೂಕು ಬಿಜೆಪಿ ಅಧ್ಯಕ್ಷ ನಾಗಣ್ಣಗೌಡ, ನಗರಸಭೆ ಅಧ್ಯಕ್ಷೆ ಅನುಷಾ, ಉಪಾಧ್ಯಕ್ಷ ದೇವನಾಯಕ, ತಾಪಂ ಅಧ್ಯಕ್ಷೆ ಪದ್ಮಮ್ಮ, ಸದಸ್ಯ ಗಣೇಶಕುಮಾರಸ್ವಾಮಿ, ಉದ್ಯಮಿ ಎಚ್‌.ಪಿ.  ಅಮರ್‌ನಾಥ್‌ ಇತರರಿದ್ದರು.

ಹನುಮ ಜಯಂತ್ಯುತ್ಸವ: ಪಾನಕ, ಮಜ್ಜಿಗೆ ವಿತರಣೆ :

ಕೆ.ಆರ್‌.ನಗರ: ಪಟ್ಟಣದ ಆಂಜನೇಯ ಬಡಾವಣೆಯ ಮಾರುತಿ ಯುವಕರ ಸಂಘದ ವತಿಯಿಂದ ಹನುಮ ಜಯಂತ್ಯುತ್ಸವವನ್ನು ಕೋವಿಡ್ ಹಿನ್ನೆಲೆ ಸರಳವಾಗಿ ನಡೆಸಲಾಯಿತು.

ಮಾರುತಿ ಯುವಕರ ಸಂಘದ ಅಧ್ಯಕ್ಷ ಗೌತಮ್‌ಜಾಧವ್‌ ನೇತೃತ್ವದಲ್ಲಿ ಬೆಳಗ್ಗೆ 11 ಗಂಟೆಗೆ ನಡೆದ ಹನುಮೋತ್ಸವಕ್ಕೆ ದೇವಾಲಯದ ಪ್ರಧಾನ ಅರ್ಚಕ ಶ್ರೀನಿವಾಸಭಟ್ಟ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಸಾ.ರಾ.ಮಹೇಶ್‌, ಜಿಲ್ಲಾ ಪಂಚಾಯ್ತಿ ಸದಸ್ಯ ಡಿ.ರವಿಶಂಕರ್‌, ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಹೊಸಹಳ್ಳಿ ವೆಂಕಟೇಶ್‌ ಸೇರಿದಂತೆ ಮತ್ತಿತರರ ಗಣ್ಯರು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಜಯಂತಿ ಅಂಗವಾಗಿ ದೇವಾಲಯಕ್ಕೆ ಪುಷ್ಪಾಲಂಕಾರ ಮತ್ತು ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಸಂಜೆ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು.ಮೆರವಣಿಗೆಯಲ್ಲಿ ಪಾಲ್ಗೊಂ ಡಿದ್ದ ಭಕ್ತಗಣ ಕೇಸರಿ ಶಾಲು, ರುಮಾಲು ಧರಿಸಿ ಬಾವುಟವನ್ನು ಹಿಡಿದು ದೇವರ ನಾಮ ಜಪಿಸುತ್ತಾ ಕುಣಿದು ಕುಪ್ಪಳಿಸಿ ಭಕ್ತಿಯ ಪರಾಕಾಷ್ಠೆ  ತೋರಿದರು. ದೇವಾಲಯದ ಭಕ್ತರು ಆಂಜನೇಯ ಸ್ವಾಮಿಗೆ ಹಾಲಿನ ಮತ್ತು ಪಂಚಾಮೃತ ಅಭಿಷೇಕ ನೆರವೇರಿಸಿದರು. ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಗೆ ಪಾನಕ, ಮಜ್ಜಿಗೆ, ಪ್ರಸಾದ, ಅನ್ನ ಸಂತರ್ಪಣೆ ನಡೆಯಿತು.ಈ ವೇಳೆ ಮಾರುತಿ ಯುವಕರ ಸಂಘದ ಕಾರ್ಯದರ್ಶಿ ಮಂಜುಕೆಂಚಿ, ಪದಾಧಿಕಾರಿಗಳಾದ ಎಸ್‌.ಯೋಗಾನಂದ, ದರ್ಶನ್‌, ಐ.ಟಿ.ಸುನೀಲ್‌, ನಿತೀಶ್‌ಪಾಂಡೆ, ವಿನಯ್‌, ಪುನೀತ್‌, ಮನು, ಪುಟ್ಟಸ್ವಾಮಿ, ಮಂಜುನಾಥ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ  

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Commonwealth ಸಂಸದೀಯ ಸಭೆ; ಸ್ಪೀಕರ್‌ ಯು.ಟಿ. ಖಾದರ್‌ ಭಾಗಿ

Apologize or give 5 crores: Another threat to actor Salman

Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.