ಹಾಸನ: ಟಾಟಾಸುಮೋ ಗೆ ಕ್ವಾಲಿಸ್ ಡಿಕ್ಕಿ; 5 ಜನ ದುರ್ಮರಣ, 13 ಮಂದಿಗೆ ಗಂಭೀರ ಗಾಯ
Team Udayavani, Feb 21, 2021, 10:03 AM IST
ಹಾಸನ: ಟಾಟಾಸುಮೋಗೆ ಕ್ವಾಲಿಸ್ ಡಿಕ್ಕಿಯಾದ ಪರಿಣಾಮ 5 ಜನ ಸಾವನ್ನಪ್ಪಿ, 13 ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ – 75 ರಲ್ಲಿ ಭಾನುವಾರ ಬೆಳಿಗ್ಗೆ (ಫೆ. 21) ನಡೆದಿದೆ.
ಮೃತಪಟ್ಟವರನ್ನು ಪ್ರದೀಪ್ ಕುಮಾರ್, ಚಂದ್ರಶೇಖರ್, ನವೀನ್ ಕುಮಾರ್, ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ.
ಕ್ವಾಲಿಸ್ ವಾಹನದಲ್ಲಿ ಎಂಟು ಮಂದಿ ಕೆಜಿಎಫ್ನಿಂದ ಉಡುಪಿಗೆ ಮದುವೆಗೆ ತೆರಳುತ್ತಿದ್ದರು. ಟಾಟಾಸುಮೋದಲ್ಲಿ ಹತ್ತು ಮಂದಿ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ರಸ್ತೆಯಲ್ಲಿ ಹಂಪ್ಸ್ ಇದ್ದ ಕಾರಣ ಟಾಟಾಸುಮೋ ವಾಹನ ಸ್ಲೋ ಆದಾಗ ಹಿಂಬದಿಯಿಂದ ಬಂದ ಕ್ವಾಲಿಸ್ ಡಿಕ್ಕಿ ಹೊಡೆದಿದೆ. 5 ಜನ ದುರ್ಮರಣವನ್ನಪ್ಪಿದ್ದು, ಮಹಿಳೆಯರು, ಮೂವರು ಮಕ್ಕಳು ಸೇರಿ 13 ಮಂದಿಗೆ ತೀವ್ರ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಕಾಸ್ ಗಂಜ್ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ ಕೌಂಟರ್ ಮೂಲಕ ಹತ್ಯೆಗೈದ ಯುಪಿ ಪೊಲೀಸರು
ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಭೇಟಿ ನೀಡಿದ್ದು, ಹಾಸನ ಸಂಚಾರಿ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಪ್ಲಿಫ್ ಕಾರ್ಟ್ ‘ಕೂಲಿಂಗ್ ಡೇಸ್ ಸೇಲ್’: AC, Refrigerator ಮುಂತಾದವುಗಳಿಗೆ ಭರ್ಜರಿ ಆಫರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.