CM ಸಿದ್ದರಾಮಯ್ಯರಿಂದ ದ್ವೇಷ ರಾಜಕಾರಣ: ಸಿ.ಟಿ.ರವಿ
Team Udayavani, Sep 16, 2024, 7:17 PM IST
ಮೈಸೂರು: ನಾವು ದ್ವೇಷದ ರಾಜಕಾರಣ ಮಾಡಲ್ಲ ಎಂದು ಹೇಳಿಕೆ ನೀಡುವ ಸಿಎಂ ಸಿದ್ದರಾಮಯ್ಯ, ಎಂದಿಗೂ ನುಡಿದಂತೆ ನಡೆದಿಲ್ಲ. ಹೇಳಿದ್ದೆಲ್ಲವನ್ನೂ ಅವರು ಉಲ್ಟಾ ಮಾಡಲಿದ್ದು, ಅವರ ನಡೆ ಹಾಗೂ ನುಡಿಯಲ್ಲಿ ಸಾಕಷ್ಟು ವ್ಯತ್ಯಾಸವಿದೆ. ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಕ್ಕಮಗಳೂರಿನಲ್ಲಿ ಪ್ಯಾಲೇಸ್ತೀನಿ ಬಾವುಟ ಹಾರಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಲೆನಾಡು ಭಯೋತ್ಪಾದಕ ಸ್ಲಿಪರ್ ಸೆಲ್‌ಗಳಾಗುತ್ತಿದ್ದು, ಭಯೋತ್ಪಾದಕ ಕೃತ್ಯವೆಸಗಲು ಇಲ್ಲಿ ತರಬೇತಿ ನೀಡಲಾಗುತ್ತಿದೆ. ಈ ಹಿಂದೆ ಕೊಪ್ಪದಲ್ಲಿ ಯಾಸೀನ್ ಭಟ್ಕಳ್ ನೇತೃತ್ವದಲ್ಲಿ ಭಯೋತ್ಪಾದಕ ತರಬೇತಿ ಶಿಬಿರ ನಡೆಸಲಾಗಿತ್ತು. ಅದನ್ನು ಭಜರಂಗದಳ ಪತ್ತೆ ಹಚ್ಚಿತ್ತು. ಇಂತಹ ಚಟುವಟಿಕೆಗಳು ದೇಶಕ್ಕೆ ಅಪಯಾಕಾರಿಯಾಗಿದ್ದು, ಇದರ ಹಿಂದಿನ ಜಾಲಾವನ್ನು ಸೂಕ್ತ ತನಿಖೆ ಮೂಲಕ ಪತ್ತೆ ಹಚ್ಚಬೇಕಿದೆ. ಯಾರೋ ಪ್ರಭಾವಿಗಳು ಹೇಳಿದ್ದಾರೆಂದು ಆರೋಪಿಗಳನ್ನು ಬಿಟ್ಟು ಕಳುಹಿಸಿರುವುದು ಸರಿಯಲ್ಲ ಎಂದರು.
ದೇಶಕ್ಕೆ ಹಾಕಿರುವ ಸವಾಲು:
ಮಂಗಳೂರಿನ ಬಿ.ಸಿ. ರೋಡ್‌ನಲ್ಲಿ ಹಿಂದುಗಳಿಗೆ ಸವಾಲು ಹಾಕಿರುವ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಇದು ಭಾರತದ ದೇಶಕ್ಕೆ ಹಾಕಿರುವ ಸಾವಲಿನ ಸಂಗತಿಯಾಗಿದೆ. ಯುದ್ಧವನ್ನು ನಾವು ಯುದ್ಧವಾಗಿಯೇ ಸ್ವೀಕರಿಸಿ ಉತ್ತರ ಕೊಡುತ್ತೇವೆ. ನಮ್ಮ ಪೂರ್ವಜರು ಕತ್ತಿ ತೋರಿಸಿದಾಗ ಕತ್ತಿಯಿಂದಲೇ ಉತ್ತರ ಕೊಟ್ಟಿದ್ದರು ಹಾಗೂ ಯುದ್ಧಕ್ಕೆ ಸವಾಲು ಹಾಕಿದಾಗ ಯುದ್ಧದಿಂದಲೇ ಗೆಲ್ಲಬೇಕಿದೆ ಹೊರತು, ಸಲಹೆಗಳಿಂದ ಪ್ರಯೋಜನವಾಗದು. ಆದ್ದರಿಂದ ನಾವು ಸಹ ಕತ್ತಿಯಿಂದಲೇ ಉತ್ತರ ಕೊಡುತ್ತೇವೆ. ಇಲ್ಲವಾದರೇ ಭಾರತ ಸಹ ಬಾಂಗ್ಲಾದೇಶ, ಪಾಕಿಸ್ತಾನದಂತೆ ಆಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.