ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು?: ಎಚ್ ಡಿಕೆ ಪ್ರಶ್ನೆ
Team Udayavani, Nov 18, 2022, 11:50 AM IST
ಮೈಸೂರು: ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನಾನು ನೋಡಿದ್ದೇನೆ. ಸಂಸದರು ಕಣ್ಣೀರು ಹಾಕಿರುವುದನ್ನು ಗಮನಿಸಿದ್ದೇನೆ. ಇವರಿಗೆ ಮತ ನೀಡಿದ ಜನರ ಕತೆ ಏನು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು? ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ. ಜನರಿಗೆ ನೆರಳು ಕೊಡಿ. ಕೆಡವಿ ಹಾಕುವ ಕೆಲಸ ಮಾಡಬೇಡಿ ಎಂದು ಹೇಳಿದರು.
ಪಂಚರತ್ನ ಯಾತ್ರೆಗೂ ಮುನ್ನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಕೆ ಮಾಡಿದರು.
ಪಂಚರತ್ನ ಯಾತ್ರೆಗೆ ಮಳೆಯ ಸಮಸ್ಯೆಯಿಂದ ಮುಂದೂಡಲಾಗಿತ್ತು. ಮುಂದೆ ಯಾವುದೇ ಸಮಸ್ಯೆಯಾಗದಿರಲಿ ಎಂದು ನಂಜುಂಡೇಶ್ವರ ಹಾಗೂ ಚಾಮುಂಡಿ ತಾಯಿಯ ಆಶೀರ್ವಾದ ಪಡೆದಿದ್ದೇನೆ. ಇಂದಿನಿಂದ 36 ದಿನಗಳ ಕಾಲ ಮೊದಲ ಹಂತದ ಯಾತ್ರೆ ಆರಂಭವಾಗುತ್ತಿದೆ ಎಂದರು.
ಚಾಮುಂಡೇಶ್ವರಿ ಕ್ಷೇತ್ರದಲ್ಲೇ ಪಂಚರತ್ನ ಸಮಾರೋಪ ಸಮಾರಂಭ ಮಾಡುತ್ತೇವೆ. ಮಾರ್ಚ್ ನಲ್ಲಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತೇವೆ. 123 ಸ್ಥಾನಗಳ ಗುರಿ ಇಟ್ಟು ನಾವು ಹೊರಟಿದ್ದೇವೆ. ರಾಜಕಾರಣದಲ್ಲಿ ಮುಂದಿನ ದಿನಗಳಲ್ಲಿ ರಾಜಕೀಯ ಸಮೀಕರಣ ಆಗಬಹುದು. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಜನತಾ ಪರಿವಾರದಿಂದ ಹೋದವರೇ ಇದ್ದಾರೆ. ಮನಪರಿವರ್ತನೆಯಾಗಿ ಮತ್ತೆ ಪಕ್ಷಕ್ಕೆ ಬರಬಹುದು. ಬಂದಾಗ ಏನು ತೀರ್ಮಾನ ಮಾಡಬೇಕು ನೋಡೋಣ ಎಂದರು.
ಖಾಸಗಿ ಕಂಪನಿ ಮುಂದಿಟ್ಟುಕೊಂಡು ಮತದಾರರ ಡೇಟಾ ಸಂಗ್ರಹ ಮಾಡುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ಇದರಲ್ಲಿ ಕೆಲವು ತಪ್ಪುಗಳಾಗಿವೆ. ಸರ್ಕಾರದ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದಾರೆ. ಡೇಟಾ ಸಂಗ್ರಹ ಮಾಡುವ ಸಿಬ್ಬಂದಿಗಳು ಸರ್ಕಾರಿ ನೌಕರರು ಎಂದು ಮನೆಗಳಿಗೆ ಭೇಟಿ ಕೊಟ್ಟಿರುವ ಮಾಹಿತಿ ಇದೆ. ಸರ್ಕಾರದ ನಡವಳಿಕೆ ಪ್ರತಿಯೊಬ್ಬರಿಗೂ ಸಂಶಯ ಮೂಡುತ್ತದೆ. ಇದರಿಂದ ಬಿಜೆಪಿಯವರು ದೊಡ್ಡ ಸಾಧನೆ ಮಾಡುತ್ತಾರೆ ಎಂಬ ಗಾಬರಿ ನನಗೆ ಇಲ್ಲ. ಈ ಬಾರಿ ಬಿಜೆಪಿ ಏನೇ ಮಾಡಿದರೂ ನಾಡಿನ ಜನರು ಬೇಸತ್ತು ಹೋಗಿದ್ದಾರೆ. ಯಡಿಯೂರಪ್ಪ ಸಿಎಂ ಆಗಿದ್ದಾಗ 20 ವರ್ಷ ನಾವೇ ಅಧಿಕಾರ ನಡೆಸುತ್ತೇವೆ ಅಂತಿದ್ದರು ಈ ಬಾರಿ ಕುತಂತ್ರದಿಂದ ಅಧಿಕಾರ ಹಿಡಿಯಲು ಸಾಧ್ಯವಿಲ್ಲ ಎಂದರು.
ಪಟ್ಟಿ ಬಿಡುಗಡೆಗೆ ರೇವಣ್ಣ ತಕರಾರು: ಜೆಡಿಎಸ್ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಇಂದು ಸಮಯ ಪ್ರಸಕ್ತವಾಗಿಲ್ಲ ಎಂದು ನಮ್ಮ ಪಕ್ಷದ ಜ್ಯೋತಿಷಿ ರೇವಣ್ಣ ತಕರಾರು ತೆಗೆದಿದ್ದಾರೆ. 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ. ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.