ಜನತಾ ಜಲಧಾರೆ ಯಶಸ್ಸಿಗಾಗಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ಕುಮಾರಸ್ವಾಮಿ
Team Udayavani, May 13, 2022, 12:03 PM IST
ಮೈಸೂರು: ಬೆಂಗಳೂರಿನ ಹೊರವಲಯದಲ್ಲಿ ನಡೆಯುತ್ತಿರುವ ಜೆಡಿಎಸ್ ನ ಮಹತ್ವಾಕಾಂಕ್ಷೆಯ ಜನತಾ ಜಲಧಾರೆ ಸಮಾವೇಶ ಹಿನ್ನೆಲೆಯಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕುಮಾರಸ್ವಾಮಿ ಅವರ ಜೊತೆ ಜೆಡಿಎಸ್ ನ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಆಗಮಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ ಡಿಕೆ, ಬೆಂಗಳೂರಿನ ಹೊರವಲಯದ ನೆಲಮಂಗಲದಲ್ಲಿ ಇಂದು ನಡೆಯುವ ಜನತಾ ಜಲಧಾರೆ ಕಾರ್ಯಕ್ರಮ ಯಶಸ್ವಿಯಾಗಲೆಂದು ತಾಯಿ ಚಾಮುಂಡೇಶ್ವರಿಯನ್ನು ಬೇಡಿದ್ದೇನೆ. ತಾಯಿ ಅನುಗ್ರಹದಿಂದ ಸಮಾವೇಶ ಯಶಸ್ವಿಯಾಗುತ್ತದೆ ಎಂದರು.
ನಮ್ಮ ಜೆಡಿಎಸ್ ಪಕ್ಷದ ಜನತಾ ಜಲಧಾರೆ ವಾಹನದ ಮೂಲಕ ನಾಡಿನ ನೀರಾವರಿ ಯೋಜನೆ ಹಾಗೂ ಜೆಡಿಎಸ್ ಪಕ್ಷದ ನೀರಾವರಿ ಯೋಜನೆಗಳ ಕನಸ್ಸನ್ನು ರಾಜ್ಯಾದ್ಯಂತ ಜನತೆಗೆ ತಿಳಿಸಲಾಗಿದೆ ಎಂದು ಹೇಳಿದರು.
ಜನತಾ ಜಲಧಾರೆ ಕಾರ್ಯಕ್ರಮ ಆರಂಭವಾದ ದಿನದಿಂದ ಈ ತನಕ ರಾಜ್ಯದಲ್ಲಿ ನಿರಂತರವಾಗಿ ಉತ್ತಮ ಮಳೆಯಾಗುತ್ತಿದೆ. ಇದು ಶುಭ ಸೂಚಕ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಪ್ರಕಟಿಸಬೇಕಷ್ಟೇ. ಈ ಬಗ್ಗೆ ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರ ಜೊತೆ ಚರ್ಚಿಸಿ ತೀರ್ಮಾನ ಮಾಡಲಾಗುವುದು. ಈಗಾಗಲೇ ನಮ್ಮ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕೆಲಸ ಆರಂಭಿಸಿದ್ದಾರೆ ಎಂದು ತಿಳಿಸಿದರು.
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಹೆಚ್ ಡಿಕೆ ಹೇಳಿದರು.
ಮಾಜಿ ಸಚಿವ ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಮುಂತಾದವರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ 9 ಗಂಟೆ ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ
MUST WATCH
ಹೊಸ ಸೇರ್ಪಡೆ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.