ಮಾವುತರ ಕುಟುಂಬಗಳಿಗೆ ಆರೋಗ್ಯ ತಪಾಸಣೆ ಶಿಬಿರ
Team Udayavani, Sep 26, 2018, 11:36 AM IST
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ಗಜಪಡೆ ಜತೆಗೆ ಕಾಡಿನಿಂದ ನಾಡಿಗೆ ಆಗಮಿಸಿರುವ ಮಾವುತರು ಹಾಗೂ ಕಾವಾಡಿಗಳ ಕುಟುಂಬದವರಿಗೆ ಮಂಗಳವಾರ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು.
ಮೈಸೂರು ಕನ್ನಡ ವೇದಿಕೆ, ಅನಘ ಆಸ್ಪತ್ರೆ ಹಾಗೂ ನೆರವು ಟ್ರಸ್ಟ್ ಸಹಯೋಗದಲ್ಲಿ ಅರಮನೆ ಆವರಣದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬ ಸದಸ್ಯರಿಗೆ ರಕ್ತ ಪರೀಕ್ಷೆ, ಮಧುಮೇಹ ಪರೀಕ್ಷೆ, ರಕ್ತದೊತ್ತಡ, ಚರ್ಮ ಸಮಸ್ಯೆ, ಅಸ್ತಮಾ ಸೇರಿದಂತೆ ವಿವಿಧ ಪರೀಕ್ಷೆ ನಡೆಸಲಾಯಿತು. ಅಲ್ಲದೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಸದಸ್ಯರಿಗೆ ಉಚಿತವಾಗಿ ಔಷಧಿಯನ್ನು ನೀಡಲಾಯಿತು.
ಈ ವೇಳೆ ಮಾತನಾಡಿದ ಸಾಹಿತಿ ಬನ್ನೂರು ಕೆ.ರಾಜು, ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿಶ್ವದೆಲ್ಲೆಡೆ ಪ್ರಖ್ಯಾತಿ ಇದೆ. ದಸರಾ ನಮ್ಮ ಸಂಸ್ಕೃತಿ, ಪರಂಪರೆ, ಆಚಾರ ವಿಚಾರಗಳ ಪ್ರತೀಕವಾಗಿದೆ. ದಸರಾ ಮಹೋತ್ಸವದ ಆಕರ್ಷಕ ಜಂಬೂಸವಾರಿಯ ರೂವಾರಿಗಳಾದ ಗಜಪಡೆಯ ಆರೈಕೆ ಮಾಡುವ ಮಾವುತರು ಮತ್ತು ಕಾವಾಡಿಗಳು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಕೆಲಸ ಮಾಡುತ್ತಾರೆ.
ಹೀಗಾಗಿ ದಸರಾ ಆನೆಗಳನ್ನು ನೋಡಿಕೊಳ್ಳುವ ಮಾವುತರು, ಕಾವಾಡಿಗಳು ತಮ್ಮ ಆರೋಗ್ಯದ ಬಗ್ಗೆಯೂ ಕಾಳಜಿವಹಿಸಬೇಕಿದೆ. ಆದ್ದರಿಂದ ತಾಯಿ ಚಾಮುಂಡೇಶ್ವರಿ ಮಾವುತರು, ಕಾವಾಡಿಗಳಿಗೆ ಆರೋಗ್ಯ, ಆಯಸ್ಸು ನೀಡಲಿ ಎಂದು ಶುಭಕೋರಿದರು.
ಈ ಸಂದರ್ಭದಲ್ಲಿ ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಎಸ್.ಬಾಲಕೃಷ್ಣ, ಅನಘ ಆಸ್ಪತ್ರೆ ವೈದ್ಯ ಡಾ.ಮಹೇಶ್, ಸಂಜೀವ್ ಕುಮಾರ್, ಉತ್ತನಹಳ್ಳಿ ಶಿವಣ್ಣ, ಕಾವೇರಿಯಮ್ಮ, ನಾಲಾಬೀದಿ ರವಿ, ಬೋಗಾದಿ ಸಿದ್ದೇಗೌಡ, ಗುರುಬಸಪ್ಪ, ರಾಧಾಕೃಷ್ಣ, ಗೋಪಿ, ಬೀಡಾಬಾಬು, ಪಾಪಣ್ಣ ಇನ್ನಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
Formula E race; ಫಾರ್ಮುಲಾ-ಇ ರೇಸ್ ಪ್ರಕರಣ: ಕೆಟಿಆರ್ ಮೇಲೆ ಎಸಿಬಿ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.