Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Team Udayavani, May 19, 2024, 8:27 PM IST

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

ಹುಣಸೂರು:ವರುಣನ ಅಬ್ಬರಕ್ಕೆ ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದ ತಂಬಾಕು, ಶುಂಠಿ ಬೆಳೆ ಜಲಾವೃತವಾಗಿದೆ. ಕೆರೆ ಕಟ್ಟೆಗಳು ತುಂಬಿವೆ. ಜೊತೆಗೆ ಜಮೀನಿನ ಮಣ್ಣನನ್ನು ಸಹ ಹೊತ್ತೊಯ್ದಿದೆ.

ಕಳೆದ ಹತ್ತು ದಿನಗಳಿಂದ ಸುರಿಯುತ್ತಿರುವ ಸತತ ಮಳೆಯಿಂದ ಸಾಕಷ್ಟು ಅನಾಹುತ ಸೃಷ್ಟಿಸಿತ್ತು. ಭಾನುವಾರ ಮಧ್ಯಾಹ್ನ ಒಂದೂವರೆ ಗಂಟೆ ಕಾಲ ಸುರಿದ ಮಳೆಯು ತಾಲೂಕಿನ ಹನಗೋಡು ಹೋಬಳಿಯ ಕರಣಕುಪ್ಪೆ, ಕಲ್ಲಹಳ್ಳಿ, ಕೊತ್ತೆಗಾಲ, ಚಿಲ್ಕುಂದ ಗ್ರಾ.ಪಂ.ವ್ಯಾಪ್ತಿಯ ಹರೀನಹಳ್ಳಿ, ಕಣಗಾಲು, ಮುತ್ತುರಾಯನಹೊಸಹಳ್ಳಿ, ಆಡಿಗನಹಳ್ಳಿ, ಚಿಲ್ಕುಂದದದಲ್ಲಿ ಮತ್ತೆ ಬೆಳೆಗಳು ಕೊಚ್ಚಿ ಹೋಗಿದ್ದು, ಈ ಗ್ರಾಮಗಳಲ್ಲೇ ಅಪಾರ ನಷ್ಟವಾಗಿದ್ದು, ಗಾಯದ ಮೇಲೆ ಬರೆ ಎಳೆದಂತಾಗಿದ್ದು ಗ್ರಾಮಸ್ಥರು ನಲುಗಿ ಹೋಗಿದ್ದಾರೆ.

ಭಾನುವಾರ ಭಾರೀ ಮಳೆ:
ಭಾನುವಾರ ಮಧ್ಯಾಹ್ನ ಕಣಗಾಲು, ಹರೀನಹಳ್ಳಿ, ಮುತ್ತುರಾಯನಹೊಸಹಳ್ಳಿ, ಕಲ್ಲಹಳ್ಳಿ, ಹುಣಸೇಗಾಲ, ಅತ್ತಿಕುಪ್ಪೆ, ಚಿಲ್ಕುಂದ, ಕೊತ್ತೆಗಾಲ, ಆಡಿಗನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಭಾರೀ ಮಳೆಯಿಂದ ಅಪಾರ ಹಾನಿ ಉಂಟಾಗಿದ್ದು, ಕೃಷಿಕರು ಸಂಕಟ ಎದುರಿಸುತ್ತಿದ್ದಾರೆ.

ನೂರಾರು ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ್ದ ತಂಬಾಕು ಬೆಳೆ, ಬಿತ್ತನೆ ಮಾಡಿದ್ದ ಶುಂಠಿ ಬೆಳೆಯನ್ನು ಮಳೆನೀರು ಕೊಚ್ಚಿ ಹೊತ್ತೊಯ್ದಿದೆ. ಹೊಲಗಳಲ್ಲಿ ಮಣ್ಣು ಹಳ್ಳ ಸೇರಿದೆ, ರಸ್ತೆಯಲ್ಲಿ ನೀರು ಹರಿದು ಹಾಳಾಗಿದೆ. ಈ ಭಾಗದಲ್ಲೇ ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ.

ತುಂಬಿದ ಕೆರೆಗಳು:
ಮುತುರಾಯನಹೊಸಹಳ್ಳಿಯ ಬೆಟ್ಟದಿಂದ ಅಪಾರ ಪ್ರಮಾಣದ ನೀರು ಹರಿದು ಕಣಗಾಲಿನ ಗೆಂಡೆಕೆರೆ, ಚನ್ನಮ್ಮನಕಟ್ಟೆ, ಹರೀನಹಳ್ಳಿಕೆರೆ, ಮುತತ್ತುರಾಯನಹೊಸಹಳ್ಳಿಕೆರೆ, ಆಡಿಗನಹಳ್ಳಿಕೆರೆ, ನಾಗಮಂಗಲ ಕೆರೆ, ಕಲ್ಲಹಳ್ಳಿಯ ನಾಲ್ಕು ಕೆರೆಗಳು, ಅಲ್ಲದೆ ಚಿಲ್ಕುಂದದ ಬಹುತೇಕ ಕೆರೆ ಕಟ್ಟೆಗಳು ಭರ್ತಿಯಾಗಿವೆ. ಅನೇಕ ಕೆರೆಗಳ ಏರಿ, ಕೋಡಿ ಮೇಲೆ, ಕಣಗಾಲು ಹುನುಗನಹಳ್ಳಿ ರಸ್ತೆ ಮೇಲೆ ನೀರು ಹರಿದಿದೆ.

ಮೀನು ಹಿಡಿದ ಗ್ರಾಮಸ್ಥರು:
ಕೆರೆಕಟ್ಟೆಗಳಿಗೆ ಅಪಾರ ಪ್ರಮಾಣದ ಮಳೆ ನೀರು ಹರಿದು ಬಂದಿದ್ದರಿಂದ ಹರೀನಹಳ್ಳಿ ಕೆರೆಯಲ್ಲಿ ಮಳೆ ನಿಂತ ನಂತರ ಸುತ್ತಮುತ್ತಲ ಗ್ರಾಮಸ್ಥರು ಕೂನಿ ಹಾಕಿ ಮೀನು ಹಿಡಿದರು. ಮಕ್ಕಳು ನೀರಿನಲ್ಲಿ ಮಿಂದೆದ್ದರು. ಈ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಸರಕಾರ ಸೂಕ್ತ ಪರಿಹಾರ ನೀಡುಬೇಕೆಂದು ನೊಂದ ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.