ಜಿಲ್ಲೆಯ ವಿವಿಧೆಡೆ ಭಾರಿ ಮಳೆ: ಜನ ಜೀವನ ಅಸ್ತವ್ಯಸ್ತ

Team Udayavani, Aug 16, 2017, 12:27 PM IST

mys5.jpg

ಮೈಸೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸೋಮವಾರ ಸಂಜೆ ವೇಳೆಗೆ ಆರಂಭವಾದ ಮಳೆ ಬೆಳಗಿನ ಜಾವದವರೆಗೂ ಧಾರಾಕಾರವಾಗಿ ಸುರಿಯಿತು. ಇದರ ಪರಿಣಾಮ ಮೈಸೂರಿನಲ್ಲಿ ಮನೆ ಕುಸಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ.

ಇನ್ನು ಬಾರಿ ಮಳೆಯು 71ನೇ ಸ್ವಾತಂತ್ರ್ಯೋತ್ಸವದ ಸಡಗರ, ಸಂಭ್ರಮಕ್ಕೂ ಅಡ್ಡಿಯುಂಟು ಮಾಡಿತು. ಜಿಲ್ಲಾಡಳಿತದಿಂದ ಮೈಸೂರಿನ ಬನ್ನಿಮಂಟಪ ಪಂಜಿನ ಕವಾಯತು ಮೈದಾನದಲ್ಲಿ ಏರ್ಪಡಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಮಳೆ ಅಡ್ಡಿಪಡಿಸಿತು. ರಾತ್ರಿಯಿಡಿ ಸುರಿದ ಮಳೆಯಿಂದಾಗಿ ಒಂದೆಡೆ ಮೈದಾನ ಕೆಸರುಗದ್ದೆಯಾಗಿ ಮಾರ್ಪಟ್ಟಿದ್ದರೆ, ಅಲ್ಲಲ್ಲಿ ನೀರು ನಿಂತಿದ್ದ ಕಾರಣ, ಪಥಸಂಚಲನವನ್ನು ರದ್ದುಪಡಿಸಲಾಯಿತು.

ಆದರೆ, ಶಾಲಾ ಮಕ್ಕಳ ನೃತ್ಯ ಕಾರ್ಯಕ್ರಮಕ್ಕೆ ಅವಕಾಶ ನೀಡಿದಾಗ ಮಕ್ಕಳು ಕೆಸರು ಗದ್ದೆಯಲ್ಲಿ ಎದ್ದು- ಬಿದ್ದು ಪ್ರದರ್ಶನ ನೀಡಿದರು. ಎಚ್‌.ಡಿ.ಕೋಟೆ, ನಂಜನಗೂಡು, ಹುಣಸೂರು ತಾಲೂಕುಗಳಲ್ಲೂ ಸೋಮವಾರ ರಾತ್ರಿ ಬಾರಿ ಮಳೆ ಸುರಿದ ಕಾರಣ, ಸ್ವಾತಂತ್ರ್ಯ ದಿನಾಚರಣೆ ಕಾರ್ಯ ಕ್ರಮವನ್ನು ತಡವಾಗಿ ನಡೆಸಲಾಯಿತು.

ನಗರದಲ್ಲಿ ಸೋಮವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ತಗ್ಗುಪ್ರದೇಶಗಳಲ್ಲಿನ ಅನೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಸಂಜೆ 5.40ರ ಸುಮಾರಿಗೆ ಆರಂಭಗೊಂಡ ಮಳೆಯ ಆರ್ಭಟ ಮಂಗಳವಾರ ಬೆಳಗ್ಗೆವರೆಗೂ ಮುಂದುವರಿಯಿತು.

ಹೀಗಾಗಿ ರಾತ್ರಿಯಿಡಿ ಸುರಿದ ಮಳೆಯಿಂದಾಗಿ ನಗರದ ಬನ್ನಿಮಂಟಪ, ಪಡುವಾರಹಳ್ಳಿ, ಬಂಬೂಬಜಾರ್‌, ಮೇದರಕೇರಿ, ಹನುಮಂತನಗರ, ಯಾ ದವಗಿರಿ, ಕೆಸರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿರುವ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅಲ್ಲಿನ ನಿವಾಸಿಗಳು ಪರದಾಡುವಂತಾಯಿತು.

ಇನ್ನೂ ಕೆಲವು ಕಡೆಗಳಲ್ಲಿ ಮಳೆಯಿಂದಾಗಿ ಅನೇಕ ರಸ್ತೆಗಳು ಜಲಾವೃತಗೊಂಡಿದ್ದ ಪರಿಣಾಮ ವಾಹನ ಸವಾರರು ಪಡುವಂತಾಯಿತು. ಭಾರಿ ಮಳೆಯಿಂದಾಗಿ ಅರಮನೆ ಮುಂಭಾಗದ ದೊಡ್ಡಕೆರೆ ಮೈದಾನದಲ್ಲಿ ನೀರು ನಿಂತು ಕೆರೆಯಂತಾಗಿದೆ. ಬೆಂಗಳೂರು- ಊಟಿ ಹೆದ್ದಾರಿಯ ಅರಮನೆ ಮುಂಬಾಗದ ರಸ್ತೆ ಬದಿಗಳಲ್ಲಿ ಹಾಕಲಾಗಿದ್ದ ಕಾಂಕ್ರೀಟ್‌ ಸ್ಲಾಬ್‌ಗಳು ಕಿತ್ತು ಬಿದ್ದಿವೆ.

ವ್ಯಕ್ತಿ ಸಾವು: ಮಳೆಯಿಂದಾಗಿ ಮನೆಯ ಗೋಡೆ ಕುಸಿದು ವ್ಯಕ್ತಿಯೊಬ್ಬ ಮಲಗಿದ್ದಲ್ಲೇ ಮೃತಪಟ್ಟಿರುವ ಘಟನೆ ಗಾಂಧಿನಗರದ ಲಿಡ್ಕರ್‌ ಕಾಲೋನಿಯಲ್ಲಿ ನಡೆದಿದೆ.
ಗಾಂಧಿ ನಗರದ ಲಿಡ್ಕರ್‌ ಕಾಲೋನಿ ನಿವಾಸಿ ಮದಂಧರ್‌ ಅಲಿಯಾಸ್‌ ಮಗ್ಗಿ (42) ಮೃತ ದುರ್ದೈವಿ. ಕೋಳಿ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮದಂಧರ್‌, ಮೊಹಿನ್‌ ಎಂಬುವರ ಮನೆಯಲ್ಲಿ ವಾಸವಾಗಿದ್ದ. ಸೋಮವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದ ಮದಂಧರ್‌ ನಿದ್ರೆಗೆ ಜಾರಿದ್ದಾರೆ.

ಸೋಮವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚರಂಡಿ ನೀರು ನುಗ್ಗಿಮೊಹಿನ್‌ ಮನೆ ಜಲಾವೃತಗೊಂಡಿದ್ದು,  ಗೋಡೆ ಶಿಥಿಲಗೊಂಡು ಮನೆಯ ಮಣ್ಣಿನ ಗೋಡೆ ಕುಸಿದು ಬಿದ್ದ ಪರಿಣಾಮ ಮನೆಯೊಳಗೆ ಮಲಗಿದ್ದ ಮದಂಧರ್‌ ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಾಲಿಕೆಯ ಧನುಷ್‌ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿ ತೆರವು ಕಾರ್ಯಾಚರಣೆ ನಡೆಸಿದರು. ಈ ಸಂಬಂಧ ಎನ್‌.ಆರ್‌. ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರವು ಮಳೆ: ಮಂಗಳವಾರ ಸಂಜೆ 5.30ರ ಸುಮಾರಿಗೆ ಆರಂಭವಾದ ಮಳೆ ಧಾರಾಕಾರವಾಗಿ ಸುರಿಯಿತು. ಹೀಗಾಗಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಗರದ ಬಹುತೇಕ ಕಡೆಗಳಲ್ಲಿ ಸಂಜೆ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದಾದವು. ತಿ.ನರಸೀಪುರ ತಾಲೂಕಿನಲ್ಲಿ ಮೋಡಕವಿದ ವಾತಾವರಣವಿದ್ದು, ಭಾರಿ ಗಾಳಿಯಿಂದಾಗಿ ಮಳೆ ಬಿದ್ದಿಲ್ಲ. ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಮಧ್ಯಾಹ್ನ 3 ಗಂಟೆಯಿಂದಲೇ ಬಾರಿ ಮಳೆಯಾಗಿದೆ. ಪಿರಿಯಾಪಟ್ಟಣ ತಾಲೂಕಿನಲ್ಲಿ ರಾವಂದೂರು ಹೋಬಳಿಯ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಮೈಸೂರು ತಾಲೂಕು ರಮ್ಮನಹಳ್ಳಿಯಲ್ಲಿ 100.50 ಮಿ.ಮೀ ಮಳೆಯಾಗಿದೆ. ತಿ. ನರಸೀಪುರ ತಾಲೂಕು ಕೇತುಪುರದಲ್ಲಿ 96.50 ಮಿ.ಮೀ, ಹೊಸಕೋಟೆಯಲ್ಲಿ 65 ಮಿ.ಮೀ, ಕೊಡಗಳ್ಳಿಯಲ್ಲಿ 66.50 ಮಿ.ಮೀ, ಹನುಮನಾಳು 70.50 ಮಿ.ಮೀ, ತುರುಗನೂರು 65ಮಿ.ಮೀ, ಮಲೆಯೂರು 65 ಮಿ.ಮೀ, ರಂಗಸಮುದ್ರ 74.50 ಮಿ.ಮೀ, ಅತ್ತಹಳ್ಳಿ 80 ಮಿ.ಮೀ, ಬೀಡನಹಳ್ಳಿಯಲ್ಲಿ 69 ಮಿ.ಮೀ ಮಳೆಯಾಗಿದೆ.

ಟಾಪ್ ನ್ಯೂಸ್

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

12-hunsur

Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.