ಮೈಸೂರು ವಿವಿ ಕುಲಪತಿಯಾಗಿ ಹೇಮಂತಕುಮಾರ್ ನೇಮಕ
Team Udayavani, Nov 17, 2018, 6:00 AM IST
ಮೈಸೂರು/ಬೆಂಗಳೂರು: ಮೈಸೂರು ವಿವಿ ಕುಲಪತಿಯಾಗಿ ಪ್ರೊಫೆಸರ್ ಹೇಮಂತ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ನಾರಾಯಣ ಗೌಡ ಅವರ ಅಧ್ಯಕ್ಷತೆಯ ಸತ್ಯ ಶೋಧನಾ ಸಮಿತಿ, ಮೂವರು ಪ್ರಾಧ್ಯಾಪಕರ ಹೆಸರನ್ನು ಶಿಫಾರಸು ಮಾಡಿತ್ತು.
ಮೈಸೂರು ವಿವಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೊ.ಹೇಮಂತ್ ಕುಮಾರ್, ಕನ್ನಡ ವಿಭಾಗದ ಪ್ರಾಧ್ಯಾಪಕಿ ಪ್ರೊ.ಮಿಡತಲೆ ರಾಣಿ, ಮಂಗಳೂರು ವಿವಿ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ್ ಅವರ ಹೆಸರನ್ನು ಶಿಫಾರಸು ಮಾಡಿ ಕಳುಹಿಸಿದ್ದರು. ಅವರಲ್ಲಿ ಪ್ರೊ.ಹೇಮಂತ್ ಕುಮಾರ್ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಹೇಮಂತ್ ಕುಮಾರ್, ಮೈಸೂರು ವಿಶ್ವವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಪ್ರೊಫೆಸರ್ ಆಗಿದ್ದಾರೆ. 1986ರಿಂದ 1988ರ ಅವಧಿಯಲ್ಲಿ ಮೈಸೂರು ವಿವಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮೊದಲ ಬ್ಯಾಚ್‌ನ ವಿದ್ಯಾರ್ಥಿಯಾಗಿರುವ ಪ್ರೊ.ಹೇಮಂತ್‌ಕುಮಾರ್, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪಿಎಚ್.ಡಿ ಪಡೆದ ಮೊದಲ ವಿದ್ಯಾರ್ಥಿ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.