ಮೇ 16ಕ್ಕೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ
Team Udayavani, May 5, 2017, 12:10 PM IST
ಮೈಸೂರು: ಜಿಲ್ಲಾಡಳಿತ ಹಾಗೂ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮೇ 16ರಂದು ಶಿವಶರಣೆ ವåಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಗುವುದು ಎಂದು ಮೈಸೂರು ಉಪ ವಿಭಾಗಾಧಿಕಾರಿ ಸಿ.ಎಲ್. ಆನಂದ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿ, ಮಹಾನ್ ವ್ಯಕ್ತಿಗಳು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಲು ಹಾಗೂ ಅವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಉದ್ದೇಶದಿಂದ ಸರ್ಕಾರ ವಿವಿಧ ಜಯಂತಿಗಳನ್ನು ಆಚರಿಸುತ್ತದೆ.
ಮೇ 16ರಂದು ಬೆಳಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ನಡೆಯಲಿರುವ ಶಿವಶರಣೆ ವåಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಲ್ಲಿ ಹೆಚ್ಚಿನ ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದರು. ಜಯಂತಿಗಳಲ್ಲಿ ವಿದ್ಯಾಭ್ಯಾಸ, ಉದ್ಯೋಗ, ಸಮಾಜದಲ್ಲಿರುವ ತೊಂದರೆಗಳ ಬಗ್ಗೆ ಚರ್ಚಿಸಬೇಕು. ಸಣ್ಣ ಸಮುದಾಯಗಳು ಸಹ ಸರ್ಕಾರದ ಯೋಜನೆಗಳ ಬಗ್ಗೆ ತಿಳಿದುಕೊಂಡು ಯೋಜನೆಗಳನ್ನು ಸದುಪಯೋಗಪಡಿಸಿ ಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ತಿಳಿಸಿದರು.
ಹೇಮರೆಡ್ಡಿ ಮಲ್ಲಮ್ಮ ಅವರ ಬಗ್ಗೆ ಜನರಿಗೆ ಹೆಚ್ಚಿನ ಮಾಹಿತಿ ಇಲ್ಲ ಇವರ ವಿಷಯ ಹಾಗೂ ಚಿಂತನೆಗಳನ್ನು ಸಂಗ್ರಹಿಸಿ ಕೈಪಿಡಿ ಸಿದ್ಧಪಡಿಸಿ ಜಯಂತಿಯ ದಿನದಂದು ವಿತರಿಸಲು ಕ್ರಮಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಹೇಳಿದರು.
ಜಯಂತಿಯ ದಿನದಂದು ವೇದಿಕೆ ಕಾರ್ಯಕ್ರಮ ಪ್ರಾರಂಭವಾಗುವುದಕ್ಕೂ ಕಲಾ ಮಂದಿರದ ಮುಂಭಾಗದಲ್ಲಿ ಕಲಾತಂಡಗಳಿಂದ ಮೆರವಣಿಗೆ ವೇದಿಕೆಯಲ್ಲಿ ವಚನ ಗಾಯನ ಕಾರ್ಯಕ್ರಮ ಹಾಗೂ ಉದ್ಘಾಟನೆಯ ನಂತರ ಉಪನ್ಯಾಸ ಕಾರ್ಯಕ್ರಮ ಆಯೋಜಿಸ ಲಾಗುವುದು ಎಂದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ಕನ್ನಡ ಚಳವಳಿ ನಾಯಕ ತಾಯೂರು ವಿಠಲಮೂರ್ತಿ, ಕರುನಾಡ ಸರ್ವೋದಯ ಸೇನೆಯ ಅಧ್ಯಕ್ಷ ಸಿ.ವಿ.ರವಿಶಂಕರ್, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ಕೆ.ಜೆ. ನಾರಾಯಣ ಕಿಕ್ಕೇರಿ, ಪರಮೇಶ್ವರಯ್ಯ, ಡಾ. ಜಿ.ಎಂ. ವಾಮದೇವ್, ಬಿ. ವಿಶ್ವನಾಥ್ ಇನ್ನಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.