ತಾಯಿ ಮಗಳು ನೇಣಿಗೆ ಶರಣು: ಕೊಲೆ ಶಂಕೆ

Team Udayavani, Feb 1, 2017, 12:20 PM IST

mys1.jpg

ಬನ್ನೂರು: ಸಮೀಪದ ಚಾಮನಹಳ್ಳಿಯಲ್ಲಿ ತಾಯಿ ಮಗಳು ನೇಣಿಗೆ ಶರಣಾಗಿದ್ದು, ಈ ಸಾವು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತಿ ಶಿಕ್ಷಕ ದೇವರಾಜೇಗೌಡನನ್ನು ಬನ್ನೂರು ಠಾಣಾ ಪೊಲೀಸರು ಬಂಧಿಸಿದ್ದು, ತನಿಖೆ ಕೈಗೊಂಡಿದ್ದಾರೆ.

ಘಟನೆಯ ವಿವರ: ಮೂಲತಃ ಕೆ.ಆರ್‌.ನಗರದ ಮೇಲೂರಿನವರಾದ ಇವರು ಉದ್ಯೋಗ ನಿಮಿತ್ತ ಬನ್ನೂರಿನ ಚಾಮನಹಳ್ಳಿಯಲ್ಲಿ ವಾಸ ವಾಗಿದ್ದರು. ಮೃತಳ ಪತಿ ದೇವರಾಜೇಗೌಡ ಬನ್ನೂರಿನ ವಿವೇಕಾನಂದಾ ಸಂಸ್ಥೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯರಾಗಿ ಕೆಲಸ ನಿರ್ವಹಿಸುತ್ತಿದ್ದು, ಅಲ್ಲಿಯೇ ಪತ್ನಿ ಭವ್ಯ ಕೂಡ ಆಂಗ್ಲ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಎಂದಿನಂತೆ ಮಂಗಳವಾರ ಸಹ ದೇವರಾಜೇಗೌಡ ಶಾಲೆಗೆ ಹೋಗಿದ್ದ ವೇಳೆಯಲ್ಲಿ ಇವರ ಪತ್ನಿ ಮತ್ತು ಮಗು ನೇಣಿಗೆ ಶರಣಾಗಿದ್ದು, ನೆರೆ ಹೊರೆಯ ಮನೆಯವರು ಶಾಲೆಗೆ ಸುದ್ದಿ ಮುಟ್ಟಿಸಿದ್ದಾರೆ.

ವರದಕ್ಷಿಣೆ ಕಿರುಕುಳ: ಸುಮಾರು 5 ವರ್ಷದ ಹಿಂದೆ ಇವರನ್ನು ಕೆ.ಆರ್‌.ಪೇಟೆ ಬಂಡಿಹೊಳೆಯಿಂದ ಕೆ.ಆರ್‌. ನಗರ ಮಾಲೂರಿನ ದೇವರಾಜೇಗೌಡ ಕೊಟ್ಟು ವಿವಾಹ ಮಾಡಲಾಗಿತ್ತು. ವಿವಾಹದ ಸಂದರ್ಭದಲ್ಲಿ 200 ಗ್ರಾಂ ಚಿನ್ನ, 5 ಲಕ್ಷ ರೂ. ವರದಕ್ಷಿಣೆ, ಒಂದು ಬೈಕ್‌ ಕೊಟ್ಟು ವಿವಾಹ ಮಾಡಿಕೊಡಲಾಗಿತ್ತು ಎನ್ನಲಾಗಿದೆ. ಆದರೆ, ಮದುವೆ ಸಂದರ್ಭದಲ್ಲಿ ಕೇವಲ 50 ಗ್ರಾಂ ಕಡಿಮೆ ಚಿನ್ನ ನೀಡಿದ್ದಾರೆ ಎಂದು ಪ್ರತಿದಿನ ಜಗಳ ನಡೆಯುತ್ತಿತ್ತು ಎನ್ನಲಾಗಿದ್ದು, ಹಲವಾರು ಬಾರಿ ಈ ವಿಚಾರ ಕುರಿತಂತೆ ಪಂಚಾಯಿತಿಗಳು ನಡೆದು ಸಂಧಾರ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.

ತವರು ಮನೆಯವರ ಆರೋಪ: ತಮ್ಮ ಮಗಳ ಮೇಲೆ ದೇವರಾಜೇಗೌಡ ಹಲ್ಲೆ ನಡೆಸಿದ್ದು, ಮಂಗಳವಾರ ಬೆಳಗ್ಗೆ ನಡೆದ ಕಲಹದಲ್ಲಿ ಹೆಂಡತಿ ಮತ್ತು ಮಗಳನ್ನು ಮನೆಯಿಂದ ಹೊರ ದಬ್ಬಿ ಹಿಂಸಿಸಿದ್ದಾನೆ ಎಂದು ಪೋಷಕರು ದೂರಿದ್ದಾರೆ. ಜೊತೆಗೆ ಗ್ಯಾಸ್‌ ಒಲೆಗೆ ತನ್ನ ಪತ್ನಿಯ ಮುಖವನ್ನು ಹಿಡಿದು ಸುಡಲೆತ್ನಿಸಿದ್ದಾನೆ . ನಂತರ ಈಕೆ ಚೀರಿದ ಶಬ್ದ ಹೊರಗೆ ಕೇಳಲಾಗಿ , ಆತನ ಕೈಯಿಂದ ತಪ್ಪಿಸಿಕೊಂಡು ಬಂದು ಹೊರಗೆ ಕುಳಿತ್ತಿದ್ದಾಳೆ .

ಈ ಎಲ್ಲಾ ವಿಚಾರವನ್ನು ಪೋನ್‌ ಮೂಲಕ ತಮಗೆ ತಿಳಿಸಿದ್ದು ತಾವು ಬರುವಷ್ಟರಲ್ಲಿ ಅನಾಹುತ ನಡೆದು ಹೋಗಿದೆ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ. ತಮ್ಮ ಮಗಳಿಗೆ ಪ್ರತಿದಿನ ಕಿರುಕುಳ ನೀಡುತ್ತಿದ್ದು, ಈತನೇ ಇಬ್ಬರನ್ನು ಕೊಲೆಗೈದಿದ್ದಾನೆ. ನೇಣಿನ ಕುಣಿಕೆಯಿಂದ ಕೆಳಗೆ ಇಳಿಸಿದ ವಿವೇಕಾನಂದ ಶಾಲೆಯ ಟ್ರಸ್ಟಿ ಎಂ.ಪ್ರಕಾಶ ಸ್ಥಳಕ್ಕೆ ಆಗಮಿಸಬೇಕು. ಇದರ ಸಂಬಂಧ ಸರಿಯಾದ ಮಾಹಿತಿ ನೀಡಬೇಕು ಇಲ್ಲವಾದಲ್ಲಿ ಅಂತ್ಯಕ್ರಿಯೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಜನರು ದೇವರಾಜೇಗೌಡನ ಮೇಲೆ ಹಲ್ಲೆ ನಡೆಸಿದ್ದು, ನಂತರ ಆತ ಪೊಲೀಸ್‌ ರಕ್ಷಣೆಯಲ್ಲಿ ಠಾಣೆ ಸೇರಿದ್ದಾರೆ. ವಿದ್ಯಾರ್ಥಿಗಳು ಗುಂಪು ಗುಂಪಾಗಿ ಬಂದು ತಮ್ಮ ನೆಚ್ಚಿನ ಶಿಕ್ಷಕಿಯನ್ನು ಕಂಡು ಮರುಗಿದ್ದಾರೆ. ತವರು ಮನೆಯವರು ತಂಡೋಪತಂಡವಾಗಿ ಬಂದು ಸ್ಥಳದಲ್ಲಿ ಜಮಾಯಿಸಿದ್ದು ಹಿಡಿಶಾಪ ಹಾಕುತ್ತಿದ್ದರು. ಸ್ಥಳಕ್ಕೆ ಆಗಮಿಸಿದ ತಾಲೂಕು ವೃತ್ತ ನಿರೀಕ್ಷಕ ಮನೋಜ್‌ ಕುಮಾರ್‌ ಘಟನೆಯ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಬನ್ನೂರು ಪಿಎಸ್‌ಐ ಲತೇಶ ಕುಮಾರ್‌, ಮಹೇಶ್‌ ಸೇರಿದಂತೆ ಹಲವರು ಸ್ಥಳದಲ್ಲಿ ಇದ್ದರು.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.