ಸದನದಲ್ಲಿ ಹಿಜಾಬ್, ಹಲಾಲ್ ಕಟ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಆತಂಕಕಾರಿ : ವಿಶ್ವನಾಥ್

Team Udayavani, Apr 5, 2022, 3:00 PM IST

10hijab

ಹುಣಸೂರು: ಶೋಷಿತರ ಕುರಿತು ಚರ್ಚಿಸಬೇಕಾದ ಸದನದಲ್ಲಿ ಹಿಜಾಬ್, ಹಲಾಲ್ ಕಟ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಆತಂಕಕಾರಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ. ಹೆಚ್‍. ವಿಶ್ವನಾಥ್ ಬೇಸರ ವ್ಯಕ್ತಪಡಿದ್ದಾರೆ.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಬಾಬು ಜಗಜೀವನರಾಂ 115 ನೇ ಜಯಂತಿಯಲ್ಲಿ ಜಗಜೀವನರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಗೈದು ಮಾತನಾಡಿದ ಅವರು ಶೋಷಿತ ಸಮುದಾಯಗಳ ಅಭಿವೃದ್ದಿಗಾಗಿ ಸಿದ್ದರಾಮಯ್ಯ 28 .5 ಸಾವಿರ ಕೋಟಿ ನೀಡಿದ್ದಾರೆ. ಜೊತೆಗೆ ಆ ವರ್ಗದ ಜನರೇ ಗುತ್ತಿಗೆ ನಿರ್ವಹಿಸಲು ಅವಕಾಶ ಕಲ್ಪಿಸಿದ್ದರು. ಬೊಮ್ಮಾಯಿಯವರು 28 ಸಾವಿರ ಕೋಟಿ ಘೋಷಿಸಿದ್ದಾರೆ. ಆದರೆ ಯಾರ ಉದ್ದಾರವಾಗಿದೆ. ಶೋಷಿತರ ಬದಲಿಗೆ ಉಳ್ಳವರ ಅಭಿವೃದ್ದಿಯಾಗುತ್ತಿರುವುದು ಪರಿಸ್ಥಿತಿಯ ದ್ಯೋತಕವೇ ಸರಿ ಎಂದರು‌.

ಈ ಬಗ್ಗೆ ಚರ್ಚೆಯಾಗಬೇಕಾದ ಸದನದಲ್ಲಿ ಹಲಾಲ್ ಕಟ್. ಹಿಜಾಬ್. ಈಗ ಮೈಕ್ ಸೆಟ್ ಕುರಿತು ಚರ್ಚೆ ಮಾಡುತ್ತಿದ್ದಾರೆ. ಶೋಷಿತ ಸಮುದಾಯದ ಶಾಸಕರು ಸಹ ಈ ಬಗ್ಗೆ ಚಕಾರವೆತ್ತುತ್ತಿಲ್ಲವೆಂದು ಬೇಸರಿಸಿದರು.

ಜಗಜೀವನರಾಂ ಜಯಂತಿಯಿಂದ ಅಂಬೇಡ್ಕರ್ ಜಯಂತಿವರೆಗಿನ 9 ದಿನಗಳ ಕಾರ್ಯಕ್ರಮವನ್ನು ಶೋಷಿತರ ಶರನ್ನವರಾತ್ರಿಯನ್ನಾಗಿ ಆಚರಿಸುವ ಮೂಲಕ ಶಾಸಕರು ರಾಜ್ಯದಲ್ಲೇ ಉತ್ತಮ ಕಾರ್ಯಕ್ರಮ ರೂಪಿಸಿದ್ದಾರೆಂದು ಶ್ಲಾಘಿಸಿದರು.

ಶಾಸಕ ಮಂಜುನಾಥ್ ಮಾತನಾಡಿ ಶೋಷಿತ ಸಮುದಾಯಗಳು ಮದ್ಯವರ್ತಿಗಳ ಹಾವಳಿಗೆ ಸಿಲುಕಬಾರದೆಂದು 9 ದಿನಗಳ ಕಾಲ ಇಲಾಖೆಗಳ ಸೌಲಭ್ಯಗಳನ್ನು ಪಡೆಯುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಇದನ್ನೂ ಓದಿ:ಈಶ್ವರಪ್ಪ ಒಬ್ಬ ದೇಶದ್ರೋಹಿ,ರಾಷ್ಟ್ರಧ್ವಜ ದ್ರೋಹಿ; ಅವರಿಗೆಲ್ಲಾ ಪ್ರತಿಕ್ರಿಯಿಸಲ್ಲ: ಡಿಕೆಶಿ

ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಲಂಚ ಕೊಡುವುದು ತಪ್ಪು. ಲಂಚಮುಕ್ತವಾಗಿ ಶೋಷಿತ ಸಮುದಾಯಗಳು ಸೌಲಭ್ಯಗಳನ್ನು ಪಡೆಯಲು ಈ ಕಾರ್ಯಕ್ರಮದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಎಲ್ಲಾ ಗ್ರಾ.ಪಂ.ಪ್ರತಿನಿಧಿಗಳು ಹಾಗೂ ಸಮುದಾಯದ ಮುಖಂಡರು ಭಾಗವಹಿಸಿ, ಇತರರಿಗೂ ಅರಿವು ಮೂಡಿಸುವಂತೆ ಮನವಿ ಮಾಡಿದರು.

ಶಿಕ್ಷಕ ಜೆ.ಮಹದೇವ್, ಜಗಜೀವನರಾಂ ಜೀವನ, ಹೋರಾಟದ ಕುರಿತು ಉಪನ್ಯಾಸ ನೀಡಿದರು. ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸಮೀನಾ ಪರ್ವಿನ್, ಉಪಾಧ್ಯಕ್ಷ ದೇವನಾಯಕ, ಸದಸ್ಯರಾದ ಅನುಷಾ, ಸೌರಭಸಿದ್ದರಾಜು, ಆಶಾ, ಉಪ ವಿಭಾಗಾಧಿಕಾರಿ ವರ್ಣಿತ್ ನೇಗಿ.ತಹಸೀಲ್ದಾರ್ ಡಾ. ಅಶೋಕ್. ಇ.ಓ ಗಿರೀಶ್, ಜಿ.ಪಂ ಉಸ್ತುವಾರಿಯಾದ ನಂದಕುಮಾರ್, ಸಮಾಜಕಲ್ಯಾಣಾಧಿಕಾರಿ ಮೋಹನ್ ಕುಮಾರ್, ಮುಖಂಡರಾದ ನಂದಸ್ವಾಮಿ, ನಿಂಗರಾಜಮಲ್ಲಾಡಿ, ರಾಜಪ್ಪ, ಸೇರಿದಂತೆ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.