ಪಾದಯಾತ್ರೆ ಮೂಲಕ ಸಮಸ್ಯೆ ಆಲಿಕೆ


Team Udayavani, Jun 27, 2018, 12:27 PM IST

m2-padayatre.jpg

ಮೈಸೂರು: ಕೆ.ಆರ್‌.ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ಪಾದಯಾತ್ರೆ ನಡೆಸುತ್ತಿರುವ ಶಾಸಕ ರಾಮದಾಸ್‌, ನಗರ ಪಾಲಿಕೆ 2ನೇ ವಾರ್ಡ್‌(ಮರು ವಿಂಗಡಣೆಯ ನೂತನ 50ನೇ ವಾರ್ಡ್‌) ವ್ಯಾಪ್ತಿಯ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. 

ವಾರ್ಡ್‌ ವ್ಯಾಪ್ತಿಯ ಸುಣ್ಣದಕೇರಿ ಬಡಾವಣೆಯ ವಿವಿಧ ಭಾಗಗಳಲ್ಲಿ ಮಂಗಳವಾರ ಮುಂಜಾನೆ ಪಾದಯಾತ್ರೆ ನಡೆಸಿದ ಸ್ಥಳೀಯ ಶಾಸಕರು, ವಾರ್ಡ್‌ ವ್ಯಾಪ್ತಿಯ ಬಡಾವಣೆಗಳಿಗೆ ಮೂಲಸೌಕರ್ಯ ಕಲ್ಪಿಸುವುದು, ಬಡವರಿಗೆ ಸ್ವಂತ ಸೂರು ಒದಗಿಸುವುದು, ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ಧನಸಹಾಯ ನೀಡುವುದು ಸೇರಿದಂತೆ ಸಾರ್ವಜನಿಕರ ಇನ್ನಿತರ ಬೇಡಿಕೆಗಳನ್ನು ಆಲಿಸಿದರು. 

ಕಾಮಗಾರಿ ಪೂರ್ಣಗೊಳಿಸಿ:  ಸುಣ್ಣದಕೇರಿಯಲ್ಲಿನ ಬಹುತೇಕ ಮನೆಗಳು ಹಲವು ವರ್ಷಗಳ ಹಳೆಯದಾಗಿದ್ದು, ಇಲ್ಲಿನ ರಸ್ತೆಗಳು ಚಿಕ್ಕದಾಗಿರುವ ಹಿನ್ನೆಲೆಯಲ್ಲಿ ಮೂಲಸೌಕರ್ಯ ಒದಗಿಸಬೇಕಾಗಿದೆ. ಅಲ್ಲದೆ ಈ ಭಾಗದ ಅನೇಕ ನಿವಾಸಿಗಳಿಗೆ ಮನೆ ಇಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ.

ಸ್ಲಂ ಬೋರ್ಡ್‌ ನಿರ್ಮಿಸಿರುವ ಮನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ ರಾಮದಾಸ್‌, ಸ್ಥಳೀಯ ನಿವಾಸಿಗಳು ಬೀದಿ ದೀಪ ಅಳವಡಿಕೆ, ಹಳೆಯ ಪೈಪ್‌ಲೈನ್‌ ತೆರವುಗೊಳಿಸಿ ಅಗತ್ಯ ಪೈಪ್‌ಲೈನ್‌ ಅಳವಡಿಸುವಂತೆ ಆದೇಶಿಸಿದರು. 

ಖಾತೆ ವರ್ಗಾವಣೆ ಲೋಪ: ಶಾಸಕರ ಪಾದಯಾತ್ರೆ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳಿಗೆ ಹಲವು ವರ್ಷದಿಂದ ಖಾತೆ ವರ್ಗಾವಣೆ ಆಗದಿರುವುದು ಕಂಡು ಬಂದಿತು. ಈ ಹಿನ್ನೆಲೆಯಲ್ಲಿ ಪಾಲಿಕೆ 1ನೇ ವಲಯ ಕಚೇರಿಗೆ ಏಕಾಏಕಿ ಭೇಟಿ ನೀಡಿದ ಶಾಸಕರು, ಸಂಬಂಧಪಟ್ಟ ದಾಖಲೆಗಳನ್ನು ಪರಿಶೀಲಿಸಿದಾಗ ಹಲವು ಲೋಪಗಳು ಕಂಡು ಬಂದಿತು.

ಈ ವೇಳೆ ಕಳೆದ 2017ರ ಜನವರಿಯಲ್ಲಿ ಸಲ್ಲಿಕೆಯಾದ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಕಂಡುಬಂದಿತು. ಈ ವೇಳೆ ಕೆಲವು ನಿವಾಸಿಗಳು ವಲಯ ಕಚೇರಿಯಲ್ಲಿ ಹಣ ನೀಡದೆ ಯಾವುದೇ ಕೆಲಸಗಳು ನಡೆಯುತ್ತಿಲ್ಲ ಎಂದು ಆರೋಪಿಸಿದರು. 

ಇದೇ ವೇಳೆ ಕಚೇರಿಯಲ್ಲಿ ಹಲವು ಕಡತಗಳು ಕಾಣೆಯಾಗಿರುವುದನ್ನು ಗಮನಿಸಿದ ಶಾಸಕರು, ಅಕ್ರಮವಾಗಿ ಖಾತೆಗಳನ್ನು ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಆಯುಕ್ತರಿಗೆ ಪತ್ರ ಬರೆಯುವುದಾಗಿ ತಿಳಿಸಿದರು. 

ಟಾಪ್ ನ್ಯೂಸ್

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ: ನರಿಂಗಾನ ಕಂಬಳ್ಳೋತ್ಸವದಲ್ಲಿ ಸಿಎಂ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

1-tunel

ನಾಳೆ ಕಾಶ್ಮೀರದ ಸೋನಾ ಮಾರ್ಗ್‌ ಸುರಂಗ ಉದ್ಘಾಟನೆ

Basanagowda-Yatnal

ರಾಜ್ಯದಲ್ಲಿ ಹೊಂದಾಣಿಕೆ ರಾಜಕೀಯ ಮಾಡಿಕೊಳ್ಳದ 4-5 ಜನರೇ ಟಾರ್ಗೆಟ್: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ: ನರಿಂಗಾನ ಕಂಬಳ್ಳೋತ್ಸವದಲ್ಲಿ ಸಿಎಂ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

1-h-d-r

ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Shrigeri-Mutt

Suvarna Bharathi Mahotsava: ಶೃಂಗೇರಿಯಲ್ಲಿ ದಾಖಲೆ ಬರೆದ ತ್ರಿವೇಣಿ ಸ್ತೋತ್ರ ಪಠಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.