ಕಾಂಗ್ರೆಸ್ ಬೆಂಬಲಿಸಿದ್ದ ಹಿನಕಲ್ ಬಸವರಾಜು ವಜಾ
Team Udayavani, Apr 11, 2018, 12:38 PM IST
ಮೈಸೂರು: ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಹಿನಕಲ್ ಬಸವರಾಜು ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿರುವುದು ತಿಕ್ಕಾಟಕ್ಕೆ ಕಾರಣವಾಗಿದ್ದು, ಜಿಲ್ಲಾಧ್ಯಕ್ಷರು ಮಹಸಭಾದಿಂದಲೇ ವಜಾ ಮಾಡಲಾಗಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಕಾಯಕರ್ತ ಉಮೇಶ್ ಅವರ ಮನೆಗೆ ಮುಖ್ಯಮಂತ್ರಿಯವರು ತೆರಳಿದ್ದ ವೇಳೆ ಅವರನ್ನು ಭೇಟಿ ಮಾಡಿದ ಹಿನಕಲ್ ಬಸವರಾಜು, ಜಿಲ್ಲಾ ವೀರಶೈವ ಮಹಾಸಭಾದಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಇದು ಮಹಾಸಭಾದ ನಿರ್ಣಯಗಳಿಗೆ ವಿರುದ್ಧವಾಗಿದೆ.
ಇವರು ಈ ರೀತಿ ಹೇಳುವಾಗ ಜೊತೆಯಲ್ಲಿದ್ದು ಚಪ್ಪಾಳೆ ತಟ್ಟುವ ಮೂಲಕ ಸಹಮತ ವ್ಯಕ್ತಪಡಿಸಿರುವ ಸಂಘಟನಾ ಕಾರ್ಯದರ್ಶಿ ಟಿ.ಎಸ್.ಲೋಕೇಶ್ ತುಂಬಲ, ನಿರ್ದೇಶಕ ಸಿ.ಗುರುಸ್ವಾಮಿ, ತಾಲೂಕು ಸಮಿತಿ ನಿರ್ದೇಶಕ ಚಂದ್ರಶೇಖರ್ ಹಡಜನ ಇವರನ್ನು ಜಿಲ್ಲಾ ಉಪಾಧ್ಯಕ್ಷ ಎ.ಟಿ.ವಿರೂಪಾಕ್ಷ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಜಿಲ್ಲಾ ಸಮಿತಿಯ ತುರ್ತು ಸಭೆಯಲ್ಲಿ ಇವರನ್ನು ಮಹಾಸಭೆಯಿಂದ ವಜಾ ಮಾಡಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ.
ಕೇಂದ್ರ ಕಾರ್ಯಕಾರಿಣಿ ಸದಸ್ಯ ಕೆ.ಎನ್.ಪುಟ್ಟಬುದ್ದಿ, ಜಿಲ್ಲಾ ಉಪಾಧ್ಯಕ್ಷ ಕೈಯಂಬಳ್ಳಿ ನಟರಾಜು, ನಗರ ಅಧ್ಯಕ್ಷ ಟಿ.ಲಿಂಗರಾಜು, ತಾಲೂಕು ಅಧ್ಯಕ್ಷ ಎಂ.ಎನ್.ನಂಜುಂಡಸ್ವಾಮಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಂ.ಎಚ್.ಚಂದ್ರಶೇಖರ್, ತಾಲೂಕು ಯುವ ಘಟಕದ ಅಧ್ಯಕ್ಷ ಎಂ.ನಟರಾಜು ಸೇರಿ ಹಲವರು ಸಭೆಯಲ್ಲಿ ಭಾಗವಹಿಸಿದ್ದರು ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಯವರನ್ನು ಮಹಾಸಭಾವತಿಯಿಂದ ಅಭಿನಂದಿಸಿಲ್ಲ. ಅದು ನನ್ನ ವೈಯಕ್ತಿಕ. ಬಿಜೆಪಿಯವರೆಲ್ಲ ಸೇರಿ ನನಗೇ ಆಹ್ವಾನ ಕೊಡದೆ ಸಭೆ ಸೇರಿ ವಜಾ ಮಾಡಿದ್ದೇನೆ ಎನ್ನುತ್ತಿದ್ದಾರೆ. ಅವರ ನಿರ್ಣಯವನ್ನು ಒಪ್ಪಲಾಗಲ್ಲ. ಕೇಂದ್ರ ಸಮಿತಿಯಿಂದ ಸೂಚನೆ ಬರಬೇಕು.
-ಹಿನಕಲ್ ಬಸವರಾಜು, ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
MUST WATCH
ಹೊಸ ಸೇರ್ಪಡೆ
ಬಿಜೆಪಿ ಸಭೆಯಲ್ಲಿ ಭಿನ್ನರ ವಿರುದ್ಧ ಕಿಡಿ; ಯತ್ನಾಳ್ ಬಣದ ವಿರುದ್ಧ ಮಾಜಿ ಶಾಸಕರು ಅಸಮಾಧಾನ
Naxal Surrender: ನಕ್ಸಲ್ ಶರಣಾಗತಿ ಪೂರ್ವಯೋಜಿತ ಸ್ಟೇಜ್ ಶೋ ಅಲ್ಲವೇ?
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
Naxal Surrender: ರಾಜ್ಯ ಸರಕಾರವೇ ನಕ್ಸಲರಿಗೆ ಶರಣಾಗಿದೆಯೋ?: ಸಿ.ಟಿ. ರವಿ
Manipal: ನಾಲ್ವರು ಅನುಪಮ ಸಾಧಕರಿಗೆ ಇಂದು ಹೊಸ ವರ್ಷದ ಪ್ರಶಸ್ತಿ ಪ್ರದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.