ಹಿಂದಿ ಭಾಷೆ ಹೇರಿಕೆ: ಕರವೇ ಪ್ರತಿಭಟನೆ
Team Udayavani, Apr 29, 2017, 12:10 PM IST
ಮೈಸೂರು: ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಭಾಷೆ ಕಲಿಯುವಂತೆ ಒತ್ತಡ ಹೇರುತ್ತಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ದ ಕಾರ್ಯಕರ್ತರು ಶುಕ್ರವಾರ ನಗರದ ನ್ಯಾಯಾಲಯದ ಮುಂಭಾಗದ ಗಾಂಧಿ ಪುತ್ಥಳಿ ಎದುರು ಪ್ರತಿಭಟನೆ ನಡೆಸಿದರು.
ಭಾಷಾವಾರು ಪ್ರಾಂತ್ಯಗಳ ಆಧಾರದ ಮೇಲೆ ರಚನೆಯಾಗಿರುವ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಹಿಂದಿ ಭಾಷೆ ಹೇರಲು ಮುಂದಾಗಿರುವುದು ಖಂಡನೀಯ. ಕೇಂದ್ರ ಸರ್ಕಾರದ ಈ ನಡೆಯಿಂದ ಅನೇಕ ರಾಜ್ಯಗಳ ಮೇಲೆ ಅನನುಕೂಲದ ವಾತಾವರಣ ನಿರ್ಮಾಣವಾಗಲಿದೆ.
ಅಲ್ಲದೆ ದೇಶದಲ್ಲಿ ಹಿಂದಿ ಭಾಷೆ ಗೊತ್ತಿರುವವರನ್ನು ಮಾತ್ರ ಶ್ರೇಷ್ಠರೆಂದು ಬಿಂಬಿಸುವ ಜತೆಗೆ ಹಿಂದಿಯೇತರ ಭಾಷೆಗಳನ್ನು ಮೂಲೆಗುಂಪು ಮಾಡುತ್ತಿರುವುದರಿಂದ ಪ್ರಾದೇಶಿಕ ಭಾಷೆಗಳ ಮೇಲೆ ಭಾರೀ ಹೊಡೆತ ಬೀಳಲಿದೆ. ಹೀಗಾಗಿ ಕೇಂದ್ರ ಸರ್ಕಾರ ತನ್ನ ಈ ನಿರ್ಧಾರ ಕೈ ಬಿಡಬೇಕಿದ್ದು, ರಾಷ್ಟ್ರಪತಿಗಳು ಸಹ ಇದಕ್ಕೆ ಸಹಿ ಹಾಕಬಾರದು ಎಂದು ಒತ್ತಾಯಿಸಿದರು.
ಕರವೇ ಜಿಲ್ಲಾಧ್ಯಕ್ಷ ಪ್ರವೀಣ್‌ಕುಮಾರ್, ಪದಾಧಿಕಾರಿ ಗಳಾದ ಲೋಕೇಶ್, ಸುನಂದ, ಜಯಪ್ರಕಾಶ್, ರಫೀಕ್, ಜಾಫರ್, ಆನಂದ್, ಮಧು, ಆಶೋಕ್, ಮಹೇಶ್ ಇನ್ನಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.