ಕುದುರೆಗಳ ದಾಳಿ: ವೃದ್ಧ ಮಹಿಳೆ ಸ್ಥಳದಲ್ಲೇ ಸಾವು

Team Udayavani, Dec 19, 2018, 11:42 AM IST

m4-kudure.jpg

ಮೈಸೂರು: ಬಿಡಾಡಿ ಕುದುರೆಗಳ ದಾಳಿಗೆ ಸಿಲುಕಿ ಸೊಪ್ಪು ಮಾರಾಟ ಮಾಡುತ್ತಿದ್ದ ಮಹಿಳೆ ಮೃತಪಟ್ಟಿರುವ ಘಟನೆ ಮೈಸೂರಿನ ಗಾಯತ್ರಿಪುರಂನ 1ನೇ ಹಂತದ ಆಚಾರಿ ಕಾಲೋನಿಯಲ್ಲಿ ಸಂಭವಿಸಿದೆ. ಉದಯಗಿರಿ ಮುನೇಶ್ವರನಗರದ ನಿವಾಸಿ ಲೇಟ್‌ ಕೂಸಯ್ಯ ಪತ್ನಿ ಪಾರ್ವತಮ್ಮ(55) ಮೃತ ದುರ್ದೈವಿ.

ಮನೆ ಮನೆಗೆ ತೆರಳಿ ಸೊಪ್ಪು ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದ ಪಾರ್ವತಮ್ಮ, ಮಂಗಳವಾರ ಬೆಳಗ್ಗೆ 9.30ರ ವೇಳೆಯಲ್ಲಿ ಆಚಾರಿ ಕಾಲೋನಿಯಲ್ಲಿ ಸೊಪ್ಪು ಮಾರಾಟ ಮಾಡುತ್ತಿದ್ದ ವೇಳೆ ಈ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಪಾರ್ವತಮ್ಮ, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ.   

ಘಟನೆ ಹಿನ್ನೆಲೆ: ಮೃತ ಪಾರ್ವತಮ್ಮ ಪ್ರತಿದಿನ ಮನೆ ಮನೆಗೆ ತೆರಳಿ ಸೊಪ್ಪು ಮಾರಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಅಂತೆಯೇ ಮಂಗಳವಾರ ಬೆಳಗ್ಗೆ ಸಹ ಆಚಾರಿ ಕಾಲೋನಿ ಮನೆಯೊಂದರಲ್ಲಿ ಸೊಪ್ಪು ಮಾರಿಕೊಂಡು ಮತ್ತೂಂದು ಮನೆಯತ್ತ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ನಾಲ್ಕೈದು ಬಿಡಾಡಿ ಕುದುರೆಗಳು ಪರಸ್ಪರ ಕಿತ್ತಾಡಿಕೊಳ್ಳಲಾರಂಭಿಸಿವೆ.

ಈ ಸಂದರ್ಭದಲ್ಲಿ ದುರಾದೃಷ್ಟವಶಾತ್‌ ಕುದುರೆಗಳ ದಾಳಿಗೆ ಸಿಲುಕಿದ ಪಾರ್ವತಮ್ಮ ಅವರ ಮುಖ ಹಾಗೂ ತಲೆ ಭಾಗಕ್ಕೆ ಒದ್ದು ಗಾಯಗೊಳಿಸಿವೆ. ಘಟನೆಯಲ್ಲಿ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಹಿಳೆ ನೆರವಿಗೆ ಧಾವಿಸಿದ ಸ್ಥಳೀಯರು, ಗಾಯಾಳನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲೇ ಸಾವನಪ್ಪಿದ್ದಾರೆ. 

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪಾಲಿಕೆ ಸದಸ್ಯ ಜಿ.ಎಸ್‌. ಸತ್ಯರಾಜು ಹಾಗೂ ಪಾಲಿಕೆ ಪಶು ವೈದ್ಯಾಧಿಕಾರಿ ಸುರೇಶ್‌, ಮಹಿಳೆ ಮೇಲೆ ದಾಳಿ ನಡೆಸಿದ ಐದು ಕುದುರೆಗಳನ್ನು ವಶಕ್ಕೆ ಪಡೆದು, ವಿದ್ಯಾರಣ್ಯಪುರಂನ ಸುಯೇಜ್‌ಫಾರಂನ ಹಸುಗಳ ದೊಡ್ಡಿಗೆ ಸ್ಥಳಾಂತರಿಸಿದರು. ಅಲ್ಲದೇ ಮುಂದಿನ ದಿನಗಳಲ್ಲಿ ಈ ರೀತಿಯ ಸಮಸ್ಯೆ ಆಗದಂತೆ ಕ್ರಮವಹಿಸುವುದಾಗಿ ಭರವಸೆ ನೀಡಿದರು. 

ನಿತ್ಯವೂ ಸಮಸ್ಯೆ: ಕುದುರೆಗಳ ದಾಳಿಯಿಂದ ಮಹಿಳೆ ಮೃತಪಟ್ಟ ಬಗ್ಗೆ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು. ಈ ಭಾಗದಲ್ಲಿ ಪ್ರತಿದಿನವೂ ಬಿಡಾಡಿ ಕುದುರೆಗಳ ಹಾವಳಿ ಹೆಚ್ಚಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜತೆಗೆ ಬೀದಿ ನಾಯಿಗಳು, ಕೋತಿಗಳ ಹಾವಳಿಯೂ ಹೆಚ್ಚಾಗಿರುವುದರಿಂದ ಮಕ್ಕಳು ಸೇರಿದಂತೆ ಪ್ರತಿಯೊಬ್ಬರೂ ರಸ್ತೆಯಲ್ಲಿ ಓಡಾಡಲು ಆತಂಕಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟವರು ಕೂಡಲೇ ಕ್ರಮವಹಿಸಬೇಕೆಂದು ಆಗ್ರಹಿಸಿದರು. 

ಟಾಪ್ ನ್ಯೂಸ್

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Byndoor-Vahical

Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.