ಅದ್ಧೂರಿ ಮೆರವಣಿಗೆ: ಕಣ್ಮನ ಸೆಳೆದ ಮಹಿಳೆಯರ ನೃತ್ಯ 


Team Udayavani, Aug 28, 2017, 12:06 PM IST

mys1.jpg

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶಮೂರ್ತಿಗಳ ಸಾಮೂಹಿಕ ವಿಸರ್ಜನಾ ಮೆರವಣಿಗೆ ಭಾನುವಾರ ವಿಜೃಂಭಣೆಯಿಂದ ನೆರವೇರಿತು. ಮೈಸೂರಿನ ಸಾಮೂಹಿಕ ವಿನಾಯಕ ವಿಸರ್ಜನಾ ಮಂಡಳಿ ವತಿಯಿಂದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ನಗರದ ವಿವಿಧ ಬಡಾವಣೆಗಳಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ 30ಕ್ಕೂ ಹೆಚ್ಚು ಗಣಪತಿ ವಿಗ್ರಹಗಳೊಂದಿಗೆ ಆಗಮಿಸಿದ್ದ ಭಕ್ತರು ಹಾಗೂ ಯುವಜನರು ವಿಘ್ನ ನಿವಾರಕ ಗಣಪನ ವಿಸರ್ಜನೆ ಮೆರವಣಿಗೆಯಲ್ಲಿ ಸಂಭ್ರಮದಿಂದ ಪಾಲ್ಗೊಂಡಿದ್ದರು. 

ಅಶೋಕರಸ್ತೆ ವೀರನಗೆರೆ ಗಣಪತಿ ದೇವಸ್ಥಾನ ಮುಂಭಾಗದಿಂದ ಆರಂಭಗೊಂಡ ಮೆರವಣಿಗೆ ಆರಂಭಕ್ಕೂ ಮುನ್ನ ಅರ್ಚಕ ಪ್ರಹ್ಲಾದ್‌ರಾವ್‌ ವಿಶೇಷ ಪೂಜೆ, ಹೋಮ, ಮಂಗಳಾರತಿ ನೆರವೇರಿಸಿ ಚಾಲನೆ ನೀಡಿದರು. ಅಶೋಕ ರಸ್ತೆಯಿಂದ ಆರಂಭಗೊಂಡ ಮೆರವಣಿಗೆ ಮಹಾವೀರ ವೃತ್ತ, ಗಾಂಧಿಚೌಕ, ವಾಸವಿ ವೃತ್ತ, ದೇವರಾಜ ಅರಸು ರಸ್ತೆ, ಜೆಎಲ್‌ಬಿ ರಸ್ತೆ, ರಾಮಸ್ವಾಮಿ ವೃತ್ತ, 100 ಅಡಿ ರಸ್ತೆ, ಸಂಸ್ಕೃತ ಪಾಠ ಶಾಲೆ ಮೂಲಕ ಗನ್‌ಹೌಸ್‌ ವೃತ್ತದ ಮೂಲಕ ಸಾಗಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಯಲ್ಲಿ ವಿಸರ್ಜನೆಗೆ ತೆಗೆದುಕೊಂಡು ಹೋಗಲಾಯಿತು. ಅಲ್ಲದೆ ವಿವಿಧ ಬಡಾವಣೆಗಳ ಗಣೇಶ ವಿಗ್ರಹಗಳನ್ನು ಹೊತ್ತು ತಂದಿದ್ದ ಭಕ್ತರು ಮಾರ್ಗ ಮಧ್ಯೆ ಮೆರವಣಿಗೆ ಸೇರಿಕೊಂಡರು.

ಇನ್ನೂ ವಿವಿಧ ಬಡಾವಣೆಗಳ ನಿವಾಸಿಗಳು ಮನೆಗಳಲ್ಲಿ ಪ್ರತಿಷ್ಠಾಪಿಸಿ ಪೂಜಿಸಿದ್ದ ಗಣಪತಿ ವಿಗ್ರಹಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ದರು. ಮೆರವಣಿಗೆಯಲ್ಲಿ ಯುವಕ, ಯುವತಿಯರು ಪಟಾಕಿ ಸಿಡಿಸಿ, ನೃತ್ಯ ಮಾಡಿ ಸಂತಸಪಟ್ಟರು. ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ನಿಂತು ಮೆರವಣಿಗೆಯಲ್ಲಿ ಸಾಗುತ್ತಿದ್ದ ವಿವಿಧ ಬಗೆಯ ಗಣೇಶ ವಿಗ್ರಹಗಳನ್ನು ವೀಕ್ಷಿಸಿದರು. ಇದಕ್ಕೂ ಮುನ್ನ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಭಾ ಕಾರ್ಯಕ್ರಮ ನಡೆಸಲಾಯಿತು.

ಪೊಲೀಸ್‌ ಬಿಗಿ ಭದ್ರತೆ
ಸಾಮೂಹಿಕ ಗಣಪತಿ ವಿಗ್ರಹ ವಿಸರ್ಜನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು. ನಗರ ಪೊಲೀಸ್‌ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್‌ ನೇತೃತ್ವದಲ್ಲಿ 4 ಡಿಸಿಪಿ, 7 ಎಸಿಪಿ, 25 ಪಿಐ, 40 ಪಿಎಸ್‌ಐ, 250 ಎಚ್‌ಪಿ, ಪಿಸಿ, 4 ಸಿಎಆರ್‌ ತುಕಡಿ, 4 ಕೆಎಸ್‌ಆರ್‌ಪಿ ತುಕಡಿ, 15 ಅಶ್ವ, 30 ಸಿಬ್ಬಂದಿ, ಕಮಾಂಡೋ ಪಡೆ, ಮೀಸಲು ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅಲ್ಲದೆ ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು.

ಟಾಪ್ ನ್ಯೂಸ್

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

‌Mysore: ಮೊಬೈಲ್‌ ಜೂಜಾಟ; ನಾಲ್ವರ ಬಂಧನ

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

5-hunsur

Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.