ಮಾನವ ಹಕ್ಕುಗಳ ಪಾಲನೆ ಪ್ರತಿಯೊಬ್ಬನ ಕರ್ತವ್ಯ


Team Udayavani, Dec 11, 2019, 3:00 AM IST

manava-hakku

ನಂಜನಗೂಡು: ಮಾನವ ಹಕ್ಕುಗಳನ್ನು ರಕ್ಷಿಸುವುದು ಮತ್ತು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ನ್ಯಾಯಾಧೀಶ ಗಣಪತಿ ಪ್ರಶಾಂತ ಮಂಜೇಶ್ವರ ಅಭಿಪ್ರಾಯಪಟ್ಟರು. ತಾಲೂಕಿನ ಮಿನಿ ವಿಧಾನ ಸೌಧದ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ ಮತ್ತು ತಾಪಂ ಹಾಗೂ ಪೊಲೀಸ್‌ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಆಚರಣೆ: ವಿಶ್ವದಲ್ಲಿನ ಪ್ರತಿಯೊಂದು ಜೀವಿ ಬದುಕುವ ಹಕ್ಕು ಕಾಪಾಡಲೋಸುಗವೇ ವಿಶ್ವಸಂಸ್ಥೆ ಹುಟ್ಟುಹಾಕಲಾಗಿದೆ. ಆ ಸಂಸ್ಥೆಯೇ ಮಾನವ ಹಕ್ಕುಗಳ ಕಾನೂನು, ರಚಿಸಿ ವಿಶ್ವಾದ್ಯಂತ ಜಾರಿಗೊಳಿಸಿದೆ. 1948 ಡಿಸೆಂಬರ್‌ 10ರಂದು ಈ ನಡವಾಳಿ ಜಾರಿಗೆ ಬಂದ ದಿನವನ್ನು ಎಲ್ಲ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಮಾನವ ಹಕ್ಕುಗಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಇದನ್ನು ಜಾರಿ ಮಾಡಿದ ವಿಶ್ವ ಸಂಸ್ಥೆಯೇ, ಇದರ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದು ಸದಸ್ಯ ರಾಷ್ಟ್ರಗಳಲ್ಲಿ ಎಲ್ಲಿಯಾದರೂ, ಇದರ ಪಾಲನೆಯಲ್ಲಿ ಲೋಪ ಕಂಡರೆ ವಿಶ್ವ ಸಂಸ್ಥೆ ನೇರವಾಗಿ ಪ್ರವೇಶ ಮಾಡುತ್ತದೆ ಎಂದು ಹೇಳಿದರು.

ಮಾನವ ಹಕ್ಕು ಉಲ್ಲಂಘನೆಯಾಗದಿರಲಿ: ಮಾನವ ಹಕ್ಕುಗಳ ನಿರ್ವಹಣೆ, ಕಾನೂನು ಕ್ರಮ, ಕೌನ್ಸಿಲಿಂಗ್‌ ಇನ್ನೂ ಮುಂತಾದವು ದೇಶದಲ್ಲಿ ಜಾರಿಯಲ್ಲಿವೆ. ಸರ್ಕಾರದ ಅಂಗ ಸಂಸ್ಥೆಗಳ ನೌಕರರಿಂದ ತಪ್ಪುಗಳಾದರೆ, ವ್ಯಕ್ತಿಗೆ ಸಂಬಂಧಿಸಿದ್ದಾದರೆ, ಅವುಗಳನ್ನು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಪರಿಗಣಿಸಲಾಗುವುದು. ಈ ರೀತಿಯ ಆರೋಪಗಳು ಬಾರದಂತೆ ಸರ್ಕಾರಿ ನೌಕರರು ನಡೆದುಕೊಳ್ಳಬೇಕು. ಎಲ್ಲೂ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಲ್ಲರೂ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.

ತಾಲೂಕು ವಕೀಲರ ಸಂಘದ ಅಧ್ಯಕ್ಷ ಗಿರಿರಾಜ್‌ ಮಾತನಾಡಿ, ಬೇರೆಯವರಿಗೆ ಧಕ್ಕೆಯಾಗದಂತೆ ತಮ್ಮ ಆಸ್ತಿ ಪಾಸ್ತಿಗಳನ್ನು ರಕ್ಷಣೆ ಮಾಡಿಕೊಳ್ಳುವುದು ಈ ಕಾನೂನಿನ ಉದ್ದೇಶ. ಇನ್ನೊಬ್ಬರ ಬದುಕನ್ನು ಕಸಿಯುವುದು ಅಥವಾ ತುಳಿಯುಲು ಪ್ರಯತ್ನಿಸುವದೇ ಮಾನವ ಹಕ್ಕುಗಳ ಉಲ್ಲಂಘನೆ. ಅದು ಅಕ್ಷಮ್ಯ ಅಪರಾಧ. ಇದರಿಂದ ಕಠಿಣ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಹೇಳಿದರು.

ಬ್ಲ್ಯಾಕ್‌ಮೇಲ್‌ಗೆ ಬಳಕೆಯಾಗುತ್ತಿರುವುದು ವಿಷಾದನೀಯ: ತಾಲೂಕಿನ ಹಿರಿಯ ವಕೀಲ ಶ್ರೀಕಂಠ ಪ್ರಸಾದ ಮಾತನಾಡಿ, ಮಾನವ ಮಾತ್ರವಲ್ಲ. ವಿಶ್ವದ ಪ್ರತಿಯೊಂದು ಜೀವಿಯ ಬದುಕಿನ ಹಕ್ಕನ್ನು ಕಾಪಾಡುವುದೇ ಈ ಕಾನೂನಿನ ಉದ್ದೇಶವಾಗಿದೆ. ಸಕಲ ಜೀವಿಗಳ ರಕ್ಷಣೆಯೇ ಪ್ರಜಾಪ್ರಭುತ್ವದ ತಿರುಳು. ಪ್ರತಿಯೊಂದು ಜೀವಿಯ ಬದುಕಿನ ಹಕ್ಕನ್ನು ಕಿತ್ತುಕೊಂಡಾಗ ಈ ಕಾನೂನಿನ ಸ್ಪಷ್ಟ ಉಲ್ಲಂಘನೆ. ಇಂತಹ ಹಕ್ಕಿನ ರಕ್ಷಣೆ ಕಾನೂನು, ಬ್ಲಾಕ್‌ ಮೇಲ್‌ಗೆ ಬಳಕೆಯಾಗತ್ತಿರುವುದು ವಿಷಾದನೀಯ. ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಹೇಳಿದರು.

ತಾಪಂ ಇಒ ಅಧಿಕಾರಿ ಶ್ರೀಕಂಠ ರಾಜ ಅರಸು ಸರ್ಕಾರಿ ವಕೀಲ ರಾಚಪ್ಪ ಮಾತನಾಡಿದರು. ಪ್ರಧಾನ ಸಿವಿಲ್‌ ನ್ಯಾಯಾಧೀಶ ಶ್ರೀನಾಥ್‌, ಸರ್ಕಾರಿ ಅಭಿಯೋಜಕಿ ಬಿ.ಸವಿತಾ, ವಕೀಲ ಸಂಘದ ಕಾರ್ಯದರ್ಶಿ ನಾಗೇಂದ್ರಪ್ಪ, ಕಂದಾಯ ಇಲಾಖೆ ಅಧಿಕಾರಿ ಶಿವಪ್ರಸಾದ, ಉಚಿತ ಕಾನೂನು ಸೇವಾ ಸಮಿತಿ ರಾಮಣ್ಣ ಸೇರಿದಂತೆ ತಾ.ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು. ಉಪತಹಶೀಲ್ದಾರ ಬಾಲಸುಬ್ರಹ್ಮಣ್ಯಂ ನಿರೂಪಣೆ ಮಾಡಿದರು.

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.