![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 20, 2024, 6:38 PM IST
ಹುಣಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು, ಯುವಕನನ್ನು ಕೊಲೆ ಮಾಡಿ ನೇಣು ಹಾಕಿದ್ದಾರೆಂದು ಆರೋಪಿಸಿ ಗ್ರಾಮಾಂತರ ಪೊಲೀಸ್ ಠಾಣೆ ಎದುರು ಗ್ರಾಮಸ್ಥರು ಹಾಗೂ ಹಿಂದುಪರ ಸಂಘಟನೆ ಪ್ರತಿಭಟನೆ ನಡೆಸುತ್ತಿದೆ.
ಹುಣಸೂರು ತಾಲ್ಲೂಕು ರತ್ನಪುರಿ ಗ್ರಾಮದಲ್ಲಿ ಘಟನೆ ನಡೆದಿದ್ದು. ಪಕ್ಕದ ದಾಸನಪುರ ಗ್ರಾಮದ ಮುತ್ತುರಾಜ್ ಸಾವನ್ನಪ್ಪಿರುವ ಯುವಕ ರವಿಕುಮಾರ್ ಹಾಗೂ ವಸಂತ ದಂಪತಿ ಪುತ್ರ ಮುತ್ತುರಾಜ್ (17) ಮೃತ ದುರ್ದೈವಿ.
ಈತ ರತ್ನಪುರಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು. ಅನ್ಯ ಕೋಮಿನ ಯುವತಿಯನ್ನು ಮಾತನಾಡಿಸಿದಕ್ಕೆ ಕೆಲ ಯುವಕರು ಸೋಮವಾರ ಮದ್ಯಾಹ್ನ 3 ರ ವೇಳೆಯಲ್ಲಿ ತೀವ್ರವಾಗಿ ಹಲ್ಲೆ ನಡೆಸಿ. ಯುವಕರೇ ಮನೆ ಬಳಿಗೆ ಯುವಕನ ಶವ ಹೊತ್ತು ತಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ತೊಲೆಗೆ ನೇನುಹಾಕಿದ್ದಾರೆಂದು ಆರೋಪಿಸಿದ್ದಾರೆ.
ಗ್ರಾಮಸ್ಥರು ಹಾಗೂ ಸಂಘಟನೆಯ ಸದಸ್ಯರು ಯುವಕನ ಮರಣೋತ್ತರ ಪರೀಕ್ಷೆ ನಂತರ ಶವವನ್ನು ಅರಸು ಪುತ್ತಳಿ ಬಳಿಯಿಂದ ಮೆರವಣಿಗೆಯಲ್ಲಿ ತಂದು ಠಾಣೆ ಎದುರು ಶವ ವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಕಲ್ಪತರು ವೃತ್ತದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು. ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Bidar: ಕಾಂಗ್ರೆಸ್ ಸ್ಥಾಪಿಸಿದ ಶಾಲೆಯಲ್ಲೇ ಕಲಿತು ಇಂದು ಮೋದಿ ಪ್ರಧಾನಿಯಾಗಿದ್ದಾರೆ: ಖರ್ಗೆ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
You seem to have an Ad Blocker on.
To continue reading, please turn it off or whitelist Udayavani.